Asianet Suvarna News Asianet Suvarna News

ಮೋದಿ ಸರ್ಕಾರದ ಮಹಿಳಾ ಮೀಸಲಾತಿ ಬಿಲ್ ಬೆಂಬಲಿಸಿದ ಕಾಂಗ್ರೆಸ್, ಆದರೆ 1 ಕಂಡೀಷನ್!

ಕೇಂದ್ರ ಸರ್ಕಾರ ಲೋಕಸಭೆಯಲ್ಲಿ ಮಂಡಿಸಿದ ಮಹಿಳಾ ಮೀಸಲಾತಿ ಮಸೂದೆಯನ್ನು ಕಾಂಗ್ರೆಸ್ ಬೆಂಬಲಿಸಿದೆ. ಆದರೆ ಒಂದು ಷರತ್ತು ವಿಧಿಸಿದೆ. ಇಂದು ಚರ್ಚೆ ಆರಂಭಿಸಿದ ಸೋನಿಯಾ ಗಾಂಧಿ ಕಂಡೀಷನ್ ಅಪ್ಲೈ ಎಂದಿದ್ದಾರೆ.

Congress Sonia gandhi support Women reservation bill 2023 in lok sabha ckm
Author
First Published Sep 20, 2023, 12:29 PM IST

ನವದೆಹಲಿ(ಸೆ.20) ಕೇಂದ್ರ ಸರ್ಕಾರ ನೂತನ ಸಂಸತ್ ಭವನದ ಮೊದಲ ಅಧಿವೇಶನದಲ್ಲಿ ಐತಿಹಾಸಿಕ ಮಹಿಳಾ ಮೀಸಲಾತಿ ಬಿಲ್ ಮಂಡಿಸಿದೆ. ಇಂದು ಮಸೂದೆ ಮೇಲೆ ಚರ್ಚೆ ಆರಂಭಗೊಂಡಿದೆ. ಕಾಂಗ್ರೆಸ್ ಅಧಿನಾಯಕಿ ಸೋನಿಯಾ ಗಾಂಧಿ ಚರ್ಚೆ ಆರಂಭಿಸಿದ್ದಾರೆ. ಕೇಂದ್ರ ಮಹಿಳಾ ಮೀಸಲಾತಿ ಬಿಲ್‌ಗೆ ಕಾಂಗ್ರೆಲ್ ಬೆಂಬಲೂ ಸೂಚಿಸುವುದಾಗಿ ಸೋನಿಯಾ ಗಾಂಧಿ ಹೇಳಿದ್ದಾರೆ. ಆದರೆ ಒಂದು ಷರತ್ತು ವಿಧಿಸಿದ್ದಾರೆ. ಹಿಂದುಳಿ ವರ್ಗಗಳ ಮಹಿಳೆಯರಿಗೆ ಮೀಸಲಾತಿ ನೀಡಬೇಕು ಎಂದು ಪಟ್ಟು ಹಿಡಿದ್ದಾರೆ. ಲೋಕಸಭೆ ಹಾಗೂ ರಾಜ್ಯಸಭೆಯಲ್ಲಿ ಮಹಿಳೆಯರಿಗೆ ಶೇಕಡಾ 33 ರಷ್ಟು ಮಹಿಳಾ ಮೀಸಲಾತಿ ನೀಡಬೇಕು ಎಂದು ಬಿಲ್ ಮಂಡಿಸಲಾಗಿದೆ. ಈ ಶೇಕಡಾ 33 ರಷ್ಟು ಮೀಸಲಾತಿಯಲ್ಲಿ ಹಿಂದುಳಿದ ವರ್ಗದ ಮಹಿಳೆಯರಿಗೆ ಮೀಸಲಾತಿ ನೀಡಬೇಕು ಎಂದು ಕಾಂಗ್ರೆಸ್ ಒತ್ತಾಯಿಸಿದೆ.

ಮಹಿಳಾ ಮೀಸಲಾತಿ ನನಗೆ ಭಾವನಾತ್ಮಕ ಬಿಲ್. ಕಾರಣ ಸ್ಥಳೀಯ ಚುನಾವಣೆಯಲ್ಲಿ ರಾಜೀವ್ ಗಾಂಧಿ ಮಹಿಳಾ ಮೀಸಲಾತಿ ಜಾರಿಮಾಡಿದ್ದರು. ಇದೀಗ ಕೇಂದ್ರ ಸರ್ಕಾರ ಮಂಡಿಸಿದ ನಾರಿ ಶಕ್ತಿ ವಂದನ್ ಅಧಿನಿಯಮಕ್ಕೆ ಕಾಂಗ್ರೆಸ್ ಬೆಂಬಲ ನೀಡಲಿದೆ ಎಂದು ಸೋನಿಯಾ ಗಾಂಧಿ ಹೇಳಿದ್ದಾರೆ. 

ರಾಜಕೀಯ ಪಕ್ಷಗಳು ದುರ್ಬಲ ಮಹಿಳೆಯರ ಆಯ್ಕೆ ಮಾಡೋ ಅಭ್ಯಾಸ ಹೊಂದಿವೆ: ಖರ್ಗೆ ಹೇಳಿಕೆಗೆ ಸಂಸತ್ತಲ್ಲಿ ಕೋಲಾಹಲ

ಮಹಿಳಾ ಮೀಸಲಾತಿ ಬಿಲ್ ವಿಚಾರ ಕಾಂಗ್ರೆಸ್ ಹಾಗೂ ಬಿಜೆಪಿ ನಡುವೆ ಜಟಾಪಟಿ ನಡೆದಿದೆ. ಇದು ಯುಪಿಎ ತಂದಿರುವ ಬಿಲ್, ಇದರ ಕ್ರೆಡಿಟ್ ಕಾಂಗ್ರೆಸ್‌ಗೆ ಸಲ್ಲಲಿದೆ ಎಂದು ವಾದಿಸಿದೆ. ಇನ್ನು ಸದನದ ಹೊರಗೆ ಬಿಜೆಪಿ ಮೇಲೆ ಮುಗಿಬಿದ್ದಿರುವ ಕಾಂಗ್ರೆಸ್ ಗಂಬೀರ ಆರೋಪ ಮಾಡಿದೆ. ಕೇಂದ್ರ ಸರ್ಕಾರ ಮಂಡಿಸಿರುವ ಮಹಿಳಾ ಮೀಸಲಾತಿ ಮಸೂದೆ ಚುನಾವಣೆಗಾಗಿ ಬಿಜೆಪಿ ಮಾಡುತ್ತಿರುವ ಬೂಟಾಟಿಕೆ ಎಂದು ಕಾಂಗ್ರೆಸ್‌ ಮಂಗಳವಾರ ಟೀಕಿಸಿದೆ. ಇದನ್ನು 2029ಕ್ಕೂ ಮೊದಲು ಜಾರಿ ಮಾಡಲು ಸಾಧ್ಯವಿಲ್ಲ. ಆದರೂ ಇದನ್ನು ಮಂಡನೆ ಮಾಡಲಾಗುತ್ತಿದೆ ಎಂದು ಹಲವು ನಾಯಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಈ ಮಸೂದೆಯನ್ನು ಚುನಾವಣೆಯನ್ನು ದೃಷ್ಟಿಯಲ್ಲಿಟ್ಟುಕೊಂಡು ಮಂಡನೆ ಮಾಡಲಾಗಿದೆ. ಇದು ಮಹಿಳೆಯರ ನಿರೀಕ್ಷೆಗೆ ಮಾಡಿದ ದ್ರೋಹವಾಗಿದೆ ಎಂದು ಕಾಂಗ್ರೆಸ್‌ ಹೇಳಿದೆ. ‘2010ರಲ್ಲಿ ಯುಪಿಎ ಸರ್ಕಾರದ ಅವಧಿಯಲ್ಲಿ ಈ ಮಸೂದೆಗೆ ರಾಜ್ಯಸಭೆಯಲ್ಲಿ ಒಪ್ಪಿಗೆ ಸಿಕ್ಕಿತು. ಎಸ್‌ಸಿ, ಎಸ್‌ಟಿಗೆ ಮಾತ್ರ ದೊರಕಿರುವ ಮೀಸಲಾತಿಯನ್ನು ಎಲ್ಲರಿಗೂ ಒದಗಿಸಲು ಈ ಮಸೂದೆ ಮಂಡಿಸಲಾಗಿತ್ತು. ಈಗ ಮೋದಿ ಅವರು ಈ ಮಸೂದೆಯನ್ನು ಮಂಡಿಸಿದ್ದಾರೆ ಆದರೆ ಇದು ಜಾರಿಯಾಗಲು 1 ದಶಕವೇ ಆಗಲಿದೆ. ಇದನ್ನು ಬಿಜೆಪಿ ಜನರಿಗೆ ತಿಳಿಸಬೇಕು’ ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹೇಳಿದ್ದಾರೆ. ಅಲ್ಲದೇ ಕಾಂಗ್ರೆಸ್‌ ಸೇರಿದಂತೆ ಹಲವು ನಾಯಕರು ಈ ಮಸೂದೆಗೆ ವಿರೋಧ ವ್ಯಕ್ತಪಡಿಸಿದ್ದಾರೆ.

ಲೋಕಸಭೆಯಲ್ಲಿ ಮಂಡನೆಯಾಯ್ತು ಮಹಿಳಾ ಮೀಸಲಾತಿ ಮಸೂದೆ: ದೇವರು ನನಗೆ ಅವಕಾಶ ಕೊಟ್ಟಿದ್ದಾರೆ ಎಂದ ಪ್ರಧಾನಿ ಮೋದಿ

ಕಾಂಗ್ರೆಸ್‌ ಮಹಿಳೆಯರ ಅಭಿವೃದ್ಧಿ ಮತ್ತು ಅವರಿಗೆ ಮೀಸಲಾತಿ ನೀಡುವ ಬಗ್ಗೆ ಗಂಭೀರವಾಗಿ ಯೋಚಿಸಿಲ್ಲ. ಮಹಿಳಾ ಮೀಸಲಾತಿ ಮಸೂದೆಯನ್ನು ಅರಗಿಸಿಕೊಳ್ಳಲು ವಿಪಕ್ಷಗಳಿಗೆ ಸಾಧ್ಯವಾಗುತ್ತಿಲ್ಲ. ಸಾಂಕೇತಿಕವಾಗಿ ಇದರ ಬಗ್ಗೆ ಮಾತನಾಡುತ್ತಾರೆಯೇ ಹೊರತು, ಅವರು ಗಂಭೀರವಾಗಿಲ್ಲ ಎಂದು ಕೇಂದ್ರ ಗೃಹ ಸಚಿವ ಅಮಿತ್‌ ಶಾ ತಿರುಗೇಟು ನೀಡಿದ್ದಾರೆ.

Follow Us:
Download App:
  • android
  • ios