Asianet Suvarna News Asianet Suvarna News

Election Strategy ನನ್ನ ಟ್ರ್ಯಾಕ್ ರೆಕಾರ್ಡ್ ಹಾಳು ಮಾಡಿದ ಕಾಂಗ್ರೆಸ್ ಜೊತೆ ಕೆಲಸ ಮಾಡುವುದಿಲ್ಲ, ಪ್ರಶಾಂತ್ ಕಿಶೋರ್!

  • ಚುನಾವಣಾ ರಣನೀತಿಗಾರ ಪ್ರಶಾಂತ್ ಕಿಶೋರ್ ಗರಂ
  • ಕಾಂಗ್ರೆಸ್ ಜೊತೆ ಕೆಲಸ ಮಾಡಿ ನನ್ನ ಟ್ರ್ಯಾಕ್ ರೆಡಾರ್ಡ್ ಹಾಳಾಯ್ತು
  • ಇನ್ನೆಂದು ಕಾಂಗ್ರೆಸ್ ಜೊತೆ ಕೆಲಸ ಮಾಡುವುದಿಲ್ಲ
Congress spoiled my good record further I will not work with grand old party says Prashant Kishor ckm
Author
Bengaluru, First Published May 31, 2022, 9:48 PM IST

ನವದೆಹಲಿ(ಮೇ.31): ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷವನ್ನು ಮತ್ತೆ ಅಧಿಕಾರಕ್ಕೆ ತರಲು ಚುನಾವಣಾ ಚಾಣಾಕ್ಷ ಪ್ರಶಾಂತ್ ಕಿಶೋರ್ ನೆರವು ಕೇಳಿದ್ದ ಕಾಂಗ್ರೆಸ್‌ಗೆ ಇದೀಗ ತೀವ್ರ ಹಿನ್ನಡೆಯಾಗಿದೆ. ನನ್ನ ಉತ್ತಮ ಟ್ರ್ಯಾಕ್ ರೆಕಕಾರ್ಡ್ ಹಾಳು ಮಾಡಿದ ಕಾಂಗ್ರೆಸ್ ಜೊತೆ ಇನ್ನೆಂದು ಕೆಲಸ ಮಾಡುವುದಿಲ್ಲ ಎಂದು ಪ್ರಶಾಂತ್ ಕಿಶೋರ್ ಹೇಳಿದ್ದಾರೆ.

ಬಿಹಾರದ ಆರ್‌ಜೆಡಿ ಪಕ್ಷದ ಜೊತೆ ಚುನಾವಣ ರಣನೀತಿ ರೂಪಿಸುತ್ತಿರುವ ಪ್ರಶಾಂತ್ ಕಿಶೋರ್ ಇದೀಗ ಆರ್‌ಜೆಡಿ ನಾಯಕ ರಘುವಂಶ ಪ್ರಸಾದ್ ಸಿಂಗ್ ನಿವಾಸದಿಂದ ಜನ್ ಸೂರಜ್ ಯಾತ್ರೆ ಆರಂಭಿಸಿದ್ದಾರೆ. ಈ ಯಾತ್ರೆಗೆ ಚಾಲನೆ ನೀಡಿದ ಪ್ರಶಾಂತ್ ಕಿಶೋರ್, ಹಲವು ರಾಜಕೀಯ ಪಕ್ಷಗಳ ಜೊತೆ ಕೆಲಸ ಮಾಡಿ ಗೆಲುವಿಗೆ ಕಾರಣನಾಗಿದ್ದೇನೆ. ರಣತಂತ್ರ ರೂಪಿಸಿ ಚುನಾವಣೆಯಲ್ಲಿ ಭರ್ಜರಿ ಯಶಸ್ಸುಗಳಿಸಲು ನೆರವಾಗಿದ್ದೇನೆ. ಆದರೆ 2017 ಉತ್ತರ ಪ್ರದೇಶ ಚುನಾವಣೆಯಲ್ಲಿ ಸೋಲು ಅನುಭವಿಸಲು ಕಾಂಗ್ರೆಸ್ ಪಕ್ಷವೇ ಕಾರಣ ಎಂದು ಪ್ರಶಾಂತ್ ಕಿಶೋರ್ ಹೇಳಿದ್ದಾರೆ. 

2024ರ ಕಾಂಗ್ರೆಸ್ ಸಮಿತಿಯಲ್ಲಿ ಸ್ಥಾನ ಪಡೆದ ಪ್ರಶಾಂತ್ ಕಿಶೋರ್ ಆಪ್ತ, ಇಬ್ಬರು ಬಂಡಾಯ ನಾಯಕರು!

ಸದ್ಯದ ಕಾಂಗ್ರೆಸ್ ಪರಿಸ್ಥಿತಿ ಹೀನಾಯವಾಗಿದೆ. ಈ ಪರಿಸ್ಥಿತಿಯಲ್ಲಿ ಕಾಂಗ್ರೆಸ್  ಯಾವ ಚುನಾವಣೆಯಲ್ಲೂ ಗೆಲ್ಲಲು ಸಾಧ್ಯವಿಲ್ಲ ಎಂದು ಪ್ರಶಾಂತ್ ಕಿಶೋರ್ ಹೇಳಿದ್ದಾರೆ. ಕಳೆದ 10 ವರ್ಷದಲ್ಲಿ 11 ಚುನಾವಣೆಗೆ ಕೆಲಸ ಮಾಡಿದ್ದೇನೆ. ಇದರಲ್ಲಿ 2017ರ ಉತ್ತರ ಪ್ರದೇಶ ಚುನಾವಣೆ ಸೋಲು ಕಪ್ಪು ಚುಕ್ಕೆಯಾಗಿದೆ. ಕಾಂಗ್ರೆಸ್‌ನಲ್ಲಿ ಸುಧಾರಣೆ ತರಲು ಹಲವು ಸಲಹೆ ನೀಡಿದ್ದೇನೆ. ಆದರೆ ಕಾಂಗ್ರೆಸ್ ಸುಧಾರಣೆ ಕಂಡಿಲ್ಲ. ಹೀಗಾಗಿ ಮುಂಬರುವ ಚುನಾವಣೆಗಳಲ್ಲಿ ಕಾಂಗ್ರೆಸ್ ಗೆಲುವು ಸುಲಭದ ಮಾತಲ್ಲ.

ನನ್ನ ಗುಡ್ ವರ್ಕ್ ಹಾಳು ಮಾಡಿದ್ದು ಇದೇ ಕಾಂಗ್ರೆಸ್ ಪಕ್ಷ. ಹೀಗಾಗಿ ಮುಂದೆ ಕಾಂಗ್ರೆಸ್ ಜೊತೆ ಕೆಲಸ ಮಾಡುವ ಪ್ರಶ್ನೆಯೇ ಇಲ್ಲ ಎಂದು ಪ್ರಶಾಂತ್ ಕಿಶೋರ್ ಹೇಳಿದ್ದಾರೆ.

ಜನ ಸುರಾಜ್‌’ ವೇದಿಕೆ ಸ್ಥಾಪನೆ, 3000 ಕಿಮೀ ಪಾದಯಾತ್ರೆ
ಪ್ರಸಿದ್ಧ ಚುನಾವಣಾ ರಣತಂತ್ರಗಾರ ಪ್ರಶಾಂತ್‌ ಕಿಶೋರ್‌ ಸದ್ಯಕ್ಕೆ ರಾಜಕೀಯ ಪಕ್ಷ ಸ್ಥಾಪನೆ ಮಾಡುವುದಿಲ್ಲ ಎಂದು ಪ್ರಕಟಿಸಿದ್ದು, ಜನ ಸುರಾಜ್‌ ಎಂಬ ವೇದಿಕೆ ಸ್ಥಾಪಿಸುವ ಮೂಲಕ ಬಿಹಾರದ ಜನರಲ್ಲಿ ಅಭಿವೃದ್ಧಿಯ ‘ಹೊಸ ಚಿಂತನೆ ಹಾಗೂ ಹೊಸ ಪ್ರಯತ್ನ’ವನ್ನು ಮೂಡಿಸಲು ಯತ್ನಿಸುವುದಾಗಿ ಹೇಳಿದ್ದಾರೆ. ಅಲ್ಲದೆ ಅ.2ರಿಂದ ಬಿಹಾರದಲ್ಲಿ 3000 ಕಿ.ಮೀ. ಪಾದಯಾತ್ರೆ ನಡೆಸುವುದಾಗಿಯೂ ಘೋಷಿಸಿದ್ದಾರೆ.

ನಾನು ರಾಹುಲ್‌ ಗಾಂಧಿಗೆ ಸಮಾನ ವ್ಯಕ್ತಿ ಅಲ್ಲ: ಪ್ರಶಾಂತ್‌ ಕಿಶೋರ್‌

ಕಾಂಗ್ರೆಸ್‌ ಪಕ್ಷ ಸೇರುವ ಆಹ್ವಾನವನ್ನು ಇತ್ತೀಚೆಗಷ್ಟೇ ತಿರಸ್ಕರಿಸಿದ್ದ ಪ್ರಶಾಂತ್‌ ಕಿಶೋರ್‌ ಬಿಹಾರದಲ್ಲಿ ಸಕ್ರಿಯ ರಾಜಕಾರಣಕ್ಕೆ ಧುಮುಕಲಿದ್ದಾರೆ ಎಂದು ಹೇಳಲಾಗಿತ್ತು. ಈ ಬಗ್ಗೆ ಗುರುವಾರ ಪತ್ರಿಕಾಗೋಷ್ಠಿಯಲ್ಲಿ ಮಾಹಿತಿ ನೀಡಿದ ಅವರು, ‘ದೇಶದ ರಾಜಕಾರಣದಲ್ಲಿ ಹಿಂಬದಿಯ ಆಟಗಾರನಾಗಿ ಸಾಕಷ್ಟುಕೆಲಸ ಮಾಡಿದ್ದಾಗಿದೆ. ಈಗ ಸಮಾನಮನಸ್ಕರ ಜೊತೆ ಸೇರಿ ನನ್ನ ತವರು ರಾಜ್ಯ ಬಿಹಾರವನ್ನು ಅಭಿವೃದ್ಧಿಗೊಳಿಸಲು ಜನ ಸುರಾಜ್‌ ವೇದಿಕೆ ಸ್ಥಾಪಿಸುತ್ತಿದ್ದೇನೆ. ಸುಮಾರು 18 ಸಾವಿರ ಜನ ನನ್ನೊಂದಿಗಿದ್ದಾರೆ. ಅ.2ರಿಂದ ರಾಜ್ಯದಲ್ಲಿ 3000 ಕಿ.ಮೀ. ಪಾದಯಾತ್ರೆ ನಡೆಸಿ, ಸಮಾನಮನಸ್ಕರೊಂದಿಗೆ ಸಂವಾದ ನಡೆಸುವ ಮೂಲಕ ರಾಜ್ಯದ ಅಭಿವೃದ್ಧಿಗೆ ಶ್ರಮಿಸುತ್ತೇನೆ’ ಎಂದು ಹೇಳಿದರು.

ಹಿಮಾಚಲ, ಗುಜರಾತಲ್ಲಿ ಕಾಂಗ್ರೆಸ್‌ ಧೂಳಿಪಟ
ಬಿಜೆಪಿ ಆಡಳಿತದಲ್ಲಿವ ರಾಜ್ಯಗಳಾದ ಹಿಮಾಚಲ ಪ್ರದೇಶ ಮತ್ತು ಗುಜರಾತ್‌ ಚುನಾವಣೆಯಲ್ಲಿ ಕಾಂಗ್ರೆಸ್‌ ಪಕ್ಷ ಧೂಳಿಪಟವಾಗಲಿದೆ ಎಂದು ಚುನಾವಣಾ ತಂತ್ರಗಾರ ಪ್ರಶಾಂತ್‌ ಕಿಶೋರ್‌ ಹೇಳಿದ್ದಾರೆ. ಇತ್ತೀಚಿಗೆ ಕಾಂಗ್ರೆಸ್‌ ನಡೆಸಿದ ಚಿಂತನಾ ಶಿಬಿರದ ನಂತರವೂ ಪಕ್ಷ ಏನನ್ನು ಸಾಧಿಸಿಲ್ಲ ಎಂದು ಅವರು ಹೇಳಿದರು.

Follow Us:
Download App:
  • android
  • ios