ಆನಂದ್ ಸಿಂಗ್ ಹಲ್ಲೆ ಪ್ರಕರಣ, ಕೊನೆಗೂ ಕಂಪ್ಲಿ ಶಾಸಕ ಗಣೇಶ್ ಅರೆಸ್ಟ್

ಹಲ್ಲೆ ಪ್ರಕರಣದಲ್ಲಿ ತಲೆಮರೆಸಿಕೊಂಡಿದ್ದ ಕಾಂಗ್ರೆಸ್‌ನಿಂದ ಅಮಾನತುಗೊಂಡಿರುವ ಕಂಪ್ಲಿ ಶಾಸಕನನ್ನು ಬಂಧಿಸಲಾಗಿದೆ.

Congress suspended MLA JN Ganesh arrested In  Colleague Assaulting Case

ಬೆಂಗಳೂರು, (ಫೆ.20): ಶಾಸಕ ಆನಂದ್ ಸಿಂಗ್ ಹಲ್ಲೆ ಪ್ರಕರಣದಲ್ಲಿ ತಲೆಮರೆಸಿಕೊಂಡಿದ್ದ ಕಂಪ್ಲಿ ಶಾಸಕ ಜೆ.ಎನ್ .ಗಣೇಶ್ ಬಂಧನವಾಗಿದೆ.

ರಾಮನಗರ ಪೊಲೀಸರು ಶಾಸಕ ಕಂಪ್ಲಿ ಗಣೇಶ್​​ರನ್ನು ಹೊರರಾಜ್ಯದಲ್ಲಿ ಅರೆಸ್ಟ್ ಮಾಡಿರುವುದು ಪಕ್ಕಾ. ಆದ್ರೆ, ಯಾವ ಸ್ಥಳದಲ್ಲಿ ಬಂಧಿಸಿದ್ದಾರೆ ಎನ್ನುವುದು ಖಚಿತ ಮಾಹಿತಿ ಇಲ್ಲ.

ಇಂದು (ಬುಧವಾರ) ರಾತ್ರಿ ವೇಳೆಗೆ ಗಣೇಶ್​​ರನ್ನು ರಾಮನಗರಕ್ಕೆ ಕರೆತರುವ ಸಾಧ್ಯತೆ ಇದೆ. ಬಳಿಕ, ಕೋರ್ಟ್​​ ಮುಂದೆ ಹಾಜರುಪಡಿಸುತ್ತಾರೆ ಎಂದು ತಿಳಿದುಬಂದಿದೆ.

 ಜನವರಿ 20 ರಂದು ಈಗಲ್ಟನ್ ರೆಸಾರ್ಟ್‌ನಲ್ಲಿ ಕಂಪ್ಲಿ ಶಾಸಕ ಗಣೇಶ್ ಅವರು ವಿಜಯನಗರ (ಹೊಸಪೇಟೆ)  ಶಾಸಕ ಆನಂದ್ ಮೇಲೆ ಮಾರಣಾಂತಿಕವಾಗಿ ಹಲ್ಲೆ ಮಾಡಿದ್ದರು.

ಘಟನೆಯ ನಂತ್ರ, ಗಣೇಶ್​ ತಲೆ ಮರೆಸಿಕೊಂಡಿದ್ದರು. ಈ ನಡುವೆ, ನಿನ್ನೆ (ಮಂಗಳವಾರ) ಜನಪ್ರತಿನಿಧಿಗಳ ವಿಶೇಷ ಕೋರ್ಟ್​​​ನಲ್ಲಿ ತಮ್ಮ ವಕೀಲರ ಮೂಲಕ ಸಲ್ಲಿಸಿದ್ದ ನಿರೀಕ್ಷಣಾ ಜಾಮೀನು ಅರ್ಜಿಯನ್ನು ವಾಪಸ್​ ತೆಗೆದುಕೊಂಡಿದ್ದರು.

 

Latest Videos
Follow Us:
Download App:
  • android
  • ios