ಬಿಜೆಪಿ ರಾಜ್ಯಾಧ್ಯಕ್ಷ ನಳೀನ್‌ ಕುಮಾರ್‌ ಕಟೀಲ್‌ ಅವರೇ ನಿಮ್ಮ ಮನೆಗೂ 200 ಯುನಿಟ್‌ ವಿದ್ಯುತ್‌ ಫ್ರೀ! ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರೇ ನಿಮ್ಮ ಮನೆಗೂ ಫ್ರೀ! ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಅವರೇ ನಿಮಗೂ ಪ್ರಯಾಣ ಫ್ರೀ! ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ಅವರೇ ನಿಮ್ಮ ಮನೆಯವರಿಗೂ 2000 ರು. ಫ್ರೀ!’ ಎಂದು ತಿಳಿಸುವ ಮೂಲಕ ಬಿಜೆಪಿ ನಾಯಕರ ಕಾಲೆಳೆದ ಕಾಂಗ್ರೆಸ್‌ 

ಬೆಂಗಳೂರು(ಜೂ.03): ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪಂಚ ಗ್ಯಾರಂಟಿ ಯೋಜನೆಗಳ ಜಾರಿಯ ಬಗ್ಗೆ ಅಧಿಕೃತವಾಗಿ ಘೋಷಿಸಿದ ಬೆನ್ನಲ್ಲೇ ಈ ಗ್ಯಾರಂಟಿಗಳ ಬಗ್ಗೆ ಟೀಕಿಸುತ್ತಾ ಬಂದಿದ್ದ ಬಿಜೆಪಿಯ ವಿವಿಧ ನಾಯಕರುಗಳಿಗೆ ಹೆಸರು ಸಹಿತ ಉಲ್ಲೇಖಿಸಿ ಕಾಂಗ್ರೆಸ್‌ ತಿರುಗೇಟು ನೀಡಿದೆ.

ಈ ಸಂಬಂಧ ಟ್ವೀಟ್‌ ಮಾಡಿರುವ ರಾಜ್ಯ ಕಾಂಗ್ರೆಸ್‌, ‘ಬಿಜೆಪಿ ರಾಜ್ಯಾಧ್ಯಕ್ಷ ನಳೀನ್‌ ಕುಮಾರ್‌ ಕಟೀಲ್‌ ಅವರೇ ನಿಮ್ಮ ಮನೆಗೂ 200 ಯುನಿಟ್‌ ವಿದ್ಯುತ್‌ ಫ್ರೀ! ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರೇ ನಿಮ್ಮ ಮನೆಗೂ ಫ್ರೀ! ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಅವರೇ ನಿಮಗೂ ಪ್ರಯಾಣ ಫ್ರೀ! ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ಅವರೇ ನಿಮ್ಮ ಮನೆಯವರಿಗೂ 2000 ರು. ಫ್ರೀ!’ ಎಂದು ತಿಳಿಸುವ ಮೂಲಕ ಬಿಜೆಪಿ ನಾಯಕರ ಕಾಲೆಳೆದಿದೆ.

ಕರ್ನಾಟಕದಲ್ಲಿ ಕಾಂಗ್ರೆಸ್‌ ಗ್ಯಾರಂಟಿ ಕ್ರಾಂತಿ: ಕೊಟ್ಟ ಮಾತಿನಂತೆ ನಡೆದಿದ್ದೇವೆ, ಸಿಎಂ ಸಿದ್ದು

ಅಲ್ಲದೆ, ‘ಬಜರಂಗ ದಳದ ನಿರುದ್ಯೋಗಿಗಳಿಗೂ ಯುವನಿಧಿ ಫ್ರೀ (ಪದವಿ ಪಡೆದಿದ್ದವರಿದ್ದರೆ ಮಾತ್ರ)! ಇದು ನಮ್ಮ ಗ್ಯಾರಂಟಿ. ನಾವು ನುಡಿದಂತೆ ನಡೆಯುವವರು, ನಾವು ಮಾತು ಉಳಿಸಿಕೊಳ್ಳುವವರು. ಐದೂ ಗ್ಯಾರಂಟಿಗಳನ್ನು ಜಾರಿಗೊಳಿಸಿ ಇತಿಹಾಸ ಸೃಷ್ಟಿಸಿದ್ದೇವೆ. ಇದು ನಮ್ಮ ಬದ್ಧತೆ’ ಎಂದು ಕಾಂಗ್ರೆಸ್‌ ತಿರುಗೇಟು ನೀಡಿದೆ.