ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಗೆಲುವು ಖಚಿತ: ರಕ್ಷಾ ರಾಮಯ್ಯ

ರಾಜ್ಯದಲ್ಲಿ ಕಾಂಗ್ರೆಸ್ ಆಡಳಿತವಿದ್ದು, ಜನಪರ ಯೋಜನೆಗಳ ಮೂಲಕ ಎಲ್ಲರಿಗೂ ನ್ಯಾಯ ಒದಗಿಸುತ್ತಿದೆ. ಮುಂಬರುವ ಲೋಕಸಭಾ ಚುನಾವಣೆಯಲ್ಲೂ ಸಹ ಕಾಂಗ್ರೆಸ್ ರಾಜ್ಯದಲ್ಲಿ ಅತಿ ಹೆಚ್ಚು ಸ್ಥಾನಗಳನ್ನು ಗೆಲ್ಲಲಿದೆ ಎಂದು ರಾಷ್ಟ್ರೀಯ ಯುವ ಕಾಂಗ್ರೆಸ್‌ ಪ್ರಧಾನ ಕಾರ್ಯದರ್ಶಿ ರಕ್ಷಾ ರಾಮಯ್ಯ ತಿಳಿಸಿದರು.
 

Congress victory in Lok Sabha elections is certain Says Raksha Ramaiah gvd

ಗುಡಿಬಂಡೆ (ಅ.23): ರಾಜ್ಯದಲ್ಲಿ ಕಾಂಗ್ರೆಸ್ ಆಡಳಿತವಿದ್ದು, ಜನಪರ ಯೋಜನೆಗಳ ಮೂಲಕ ಎಲ್ಲರಿಗೂ ನ್ಯಾಯ ಒದಗಿಸುತ್ತಿದೆ. ಮುಂಬರುವ ಲೋಕಸಭಾ ಚುನಾವಣೆಯಲ್ಲೂ ಸಹ ಕಾಂಗ್ರೆಸ್ ರಾಜ್ಯದಲ್ಲಿ ಅತಿ ಹೆಚ್ಚು ಸ್ಥಾನಗಳನ್ನು ಗೆಲ್ಲಲಿದೆ ಎಂದು ರಾಷ್ಟ್ರೀಯ ಯುವ ಕಾಂಗ್ರೆಸ್‌ ಪ್ರಧಾನ ಕಾರ್ಯದರ್ಶಿ ರಕ್ಷಾ ರಾಮಯ್ಯ ತಿಳಿಸಿದರು. ಪಟ್ಟಣದಲ್ಲಿ ಅಂಬೇಡ್ಕರ್ ವೃತ್ತದ ಬಳಿ ದಸರಾ ಗಣೇಶೋತ್ಸವ ಸಮಿತಿ ವತಿಯಿಂದ ಆಯೋಜಿಸಿದ್ದ ದಸರಾ ಗಣೇಶ ಉತ್ಸವದಲ್ಲಿ ಮಾತನಾಡಿದ ಅವರು, ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದಲ್ಲೂ ಸಹ ಕಾಂಗ್ರೆಸ್ ಈ ಬಾರಿ ಜಯಗಳಿಸುವುದು ಖಚಿತ. ನಾವೆಲ್ಲರೂ ಕಾಂಗ್ರೆಸ್ ಅಭ್ಯರ್ಥಿಯ ಗೆಲುವಿಗಾಗಿ ಶ್ರಮಿಸೋಣ ಎಂದರು.

ಕಾಂಗ್ರೆಸ್‌ ಬಡವರ ಪರ ಸರ್ಕಾರ: ರಾಜ್ಯದಲ್ಲಿ ಕಾಂಗ್ರೇಸ್ ಸರ್ಕಾರ ಒಳ್ಳೆಯ ಜನಪರ ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದೆ. ಗೃಹಲಕ್ಷ್ಮೀ, ಶಕ್ತಿಯೋಜನೆ, ಅನ್ನ ಭಾಗ್ಯ ಸೇರಿದಂತೆ ಅನೇಕ ಜನಪರ ಯೋಜನೆಗಳ ಮೂಲಕ ಬಡವರ ಪರ ಸರ್ಕಾರ ಎನ್ನಿಸಿಕೊಂಡಿದೆ. ರಾಜ್ಯದಲ್ಲಿ ಕಾಂಗ್ರೇಸ್ ಪಕ್ಷ ಬಲಿಷ್ಟವಾಗಿದೆ. ಈ ನಿಟ್ಟಿನಲ್ಲೇ ಲೋಕಸಭಾ ಚುನಾವಣೆಯಲ್ಲೂ ಸಹ ರಾಜ್ಯದಲ್ಲಿ ಅತೀ ಹೆಚ್ಚು ಸ್ಥಾನಗಳನ್ನು ಗೆಲ್ಲಲಿದೆ ಎಂದರು.

ನಾನೂ ಟಿಕೆಟ್‌ ಆಕಾಂಕ್ಷಿ: ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದಿಂದ ನಾನು ಸಹ ಆಕಾಂಕ್ಷಿಯಾಗಿದ್ದೇನೆ. ಆದರೆ ಅಂತಿಮವಾಗಿ ಅಭ್ಯರ್ಥಿಯ ಆಯ್ಕೆ ಪಕ್ಷದ ಹೈಕಮಾಂಡ್ ಗೆ ಬಿಟ್ಟದ್ದು, ಪಕ್ಷ ಯಾವುದೇ ಅಭ್ಯರ್ಥಿಯನ್ನು ಘೋಷಣೆ ಮಾಡಿದರೂ ಅವರ ಗೆಲುವಿಗೆ ಒಗ್ಗಟ್ಟಿನಿಂದ ಶ್ರಮಿಸುತ್ತೇವೆ. ರಾಜ್ಯದಲ್ಲಿ ಜಾರಿಯಾದ ಜನಪರ ಯೋಜನೆಗಳೇ ಪಕ್ಷದ ಗೆಲುವಿಗೆ ಶ್ರೀರಕ್ಷೆಯಾಗಿದೆ ಎಂದರು.

ಎಚ್‌ಡಿಕೆ, ಮೋದಿ ಹಾಗೂ ಬಿಜೆಪಿಯವರು ಬರೀ ಹುಲ್ಲು ಮೇಯುತ್ತಾರಾ: ವೀರಪ್ಪ ಮೊಯ್ಲಿ

ರಕ್ಷಾ ರಾಮಯ್ಯ ಸೇವೆಗೆ ಶ್ಲಾಘನೆ: ಇದೇ ವೇಳೆ ಪಿ.ಎಲ್.ಡಿ. ಬ್ಯಾಂಕ್ ಪ್ರಭಾರಿ ಅಧ್ಯಕ್ಷ ಪ್ರಕಾಶ್ ಮಾತನಾಡಿ, ಕಾಂಗ್ರೆಸ್‌ ಯುವ ಮುಖಂಡ ರಕ್ಷಾ ರಾಮಯ್ಯನವರು ಸುಮಾರು ವರ್ಷಗಳಿಂದ ವಿವಿಧ ರೀತಿಯ ಸಾಮಾಜಿಕ ಕಾರ್ಯಕ್ರಮಗಳನ್ನು ಹಮ್ಮಿಕೊಂಡು ಬರುತ್ತಿದ್ದಾರೆ. ಬೆಂಗಳೂರಿನಲ್ಲಿ ರಾಮಯ್ಯ ಆಸ್ಪತ್ರೆಯ ಮೂಲಕ ಆರೋಗ್ಯ ಸೇವೆ ಒದಗಿಸುತ್ತಿದ್ದಾರೆ. ಅವರ ಸೇವೆ ಮತಷ್ಟು ಹೀಗೆ ಸಾಗಲಿ ಎಂದರು. ಈ ವೇಳೆ ಪ.ಪಂ. ಉಪಾಧ್ಯಕ್ಷ ವಿಕಾಸ್, ಸದಸ್ಯರಾದ ವೀಣಾ, ರಾಜೇಶ್, ಕಾಂಗ್ರೇಸ್ ಮುಖಂಡರಾದ ಆದಿರೆಡ್ಡಿ, ಬಾಲೇನಹಳ್ಳಿ ರಮೇಶ್, ನವೀನ್, ದಸರಾ ಗಣೇಶೋತ್ಸವ ಆಚರಣಾ ಸಮಿತಿಯ ನಿತಿನ್, ಹರೀಶ್, ಅಜಯ್, ಮಧು ಸೇರಿದಂತೆ ಹಲವರು ಇದ್ದರು.

Latest Videos
Follow Us:
Download App:
  • android
  • ios