ಬೆಳಗಾವಿ ಜಿಲ್ಲೆಯ 10 ಕ್ಷೇತ್ರಗಳಲ್ಲಿ ಕಾಂಗ್ರೆಸ್‌ ಗೆಲುವು ನಿಶ್ಚಿತ: ಸತೀಶ್‌ ಜಾರಕಿಹೊಳಿ

ಜಿಲ್ಲೆಯಲ್ಲಿ 18 ವಿಧಾನ ಸಭಾ ಕ್ಷೇತ್ರಗಳಲ್ಲಿ 12 ಕ್ಷೇತ್ರವನ್ನು ಕಾಂಗ್ರೆಸ್‌ ಗೆಲ್ಲುವ ಗುರಿ ಇಟ್ಟುಕೊಂಡಿದ್ದೇವೆ. ಆದರೆ, 10ರಲ್ಲಿ ಗೆಲವು ನಿಶ್ಚಿತ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ಹೇಳಿದರು. 
 

Congress victory is certain in 10 constituencies of Belagavi district Says Satish Jarkiholi gvd

ಬೆಳಗಾವಿ (ಏ.02): ಜಿಲ್ಲೆಯಲ್ಲಿ 18 ವಿಧಾನ ಸಭಾ ಕ್ಷೇತ್ರಗಳಲ್ಲಿ 12 ಕ್ಷೇತ್ರವನ್ನು ಕಾಂಗ್ರೆಸ್‌ ಗೆಲ್ಲುವ ಗುರಿ ಇಟ್ಟುಕೊಂಡಿದ್ದೇವೆ. ಆದರೆ, 10ರಲ್ಲಿ ಗೆಲವು ನಿಶ್ಚಿತ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ಹೇಳಿದರು. ನಗರದಲ್ಲಿ ಭಾನುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜಿಲ್ಲೆಯ 3 ಕ್ಷೇತ್ರದಲ್ಲಿ ಗೊಂದಲ ಇದೆ. ಅದನ್ನು ಇತ್ಯರ್ಥ ಪಡಿಸಲಾಗುವುದು. ಮೊದಲನೇ ಹಂತದಲ್ಲಿ ಹಾಲಿ, ಮಾಜಿ ಶಾಸಕರೂ ಇದ್ದಾರೆ. ರಾಯಬಾಗ, ಸವದತ್ತಿಯಲ್ಲಿಯೂ ಸಾಕಷ್ಟುಗೊಂದಲ ಇದೆ. ಅದನ್ನು ಸಂಧಾನ ಮಾಡಿ ಅಭ್ಯರ್ಥಿ ಆಯ್ಕೆ ಮಾಡಲಾಗುವುದು. 

ಕಳೆದ ಬಾರಿಯ ಬಂಡಾಯದಿಂದ ಸವದತ್ತಿ ಹಾಗೂ ರಾಯಬಾಗ ಕ್ಷೇತ್ರದವನ್ನು ಕಳೆದುಕೊಂಡಿದ್ದೇವು. ಆದರೆ, ಈ ಸಾರಿ ಹೊಂದಾಣಿಕೆ ಮಾಡುವುದರ ಮೂಲಕ ಕಾಂಗ್ರೆಸ್‌ ಗೆಲ್ಲಿಸುವ ಜವಾಬ್ದಾರಿಯನ್ನು ಹೈಕಮಾಂಡ್‌ ನೀಡಿದೆ. ಗೆಲ್ಲುವ ಅಭ್ಯರ್ಥಿ, ಜನರ ಜತೆಗೆ ನಿಕಟ ಸಂಪರ್ಕ ಹೊಂದಿರುವವರಿಗೆ ಟಿಕೆಟ್‌ ನೀಡಲಾಗುವುದು. ಕೆಲ ಮತಕ್ಷೇತ್ರದಲ್ಲಿ ಗೊಂದಲ ಇದೆ. ಅದನ್ನು ಬಗೆಹರಿಸಲಾಗುವುದು. ಈಗಾಗಲೇ ಸಂಧಾನ ಸಭೆ ನಡೆಸಿ ಅಸಮಾಧಾನಿತರನ್ನು ಮನವೊಲಿಸಲಾಗುವುದು ಎಂದು ತಿಳಿಸಿದರು.

ರಾಜ್ಯದಲ್ಲಿ ಮತ್ತೆ ಬಿಜೆಪಿ ಅಧಿಕಾರಕ್ಕೆ: ಬಾಲಚಂದ್ರ ಜಾರಕಿಹೊಳಿ

ಮಾಜಿ ಡಿಸಿಎಂ ಲಕ್ಷ್ಮಣ ಸವದಿ ಅವರು ಕಾಂಗ್ರೆಸ್‌ಗೆ ಸೇರ್ಪಡೆ ಕುರಿತು ಸುದ್ದಿಗಾರರ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ಲಕ್ಷ್ಮಣ ಸವದಿ ಕಾಂಗ್ರೆಸ್‌ಗೆ ಬರುವ ಮಾಹಿತಿ ಇಲ್ಲ. ಆದರೆ, ಅಥಣಿಯಲ್ಲಿ ಕಾಂಗ್ರೆಸ್‌ ಅಭ್ಯರ್ಥಿಗಳು ಸಮರ್ಥವಾಗಿದ್ದಾರೆ. ರಾಮದುರ್ಗ ಮತಕ್ಷೇತ್ರದಲ್ಲಿ ಯಾವುದೇ ಕಾಂಗ್ರೆಸ್‌ ಬಂಡಾಯ ಅಭ್ಯರ್ಥಿ ಇಲ್ಲ. ಕೆಲವರು ಸುದ್ದಿಗೋಷ್ಠಿ ನಡೆಸಿ ನಾನು ರಾಮದುರ್ಗದ ಬಂಡಾಯದ ಅಭ್ಯರ್ಥಿ ಎಂದು ಹೇಳಿಕೆ ನೀಡಿದ್ದಾರೆ. ಆದರೆ, ಅವರು ಪಕ್ಷ ಸಂಘಟನೆಯಲ್ಲಿ ಗುರುತಿಸಿಕೊಂಡಿಲ್ಲ ಎಂದು ಸ್ಪಷ್ಟಪಡಿಸಿದರು. ಇನ್ನು ಕರ್ನಾಟಕದಲ್ಲಿ ಒಂದೇ ಹಂತದಲ್ಲಿ ಮೇ 10ರಂದು ಮತದಾನ ನಡೆಯಲಿದ್ದು, ಮೇ 13ಕ್ಕೆ ಮತ ಎಣಿಕೆ ನಡೆಯಲಿದೆ. ಏಪ್ರಿಲ್ 13ಕ್ಕೆ ಚುನಾವಣೆ ಅಧಿಸೂಚನೆ ಹೊರಡಿಸಲಿದ್ದು, ಏಪ್ರಿಲ್ 13ರಿಂದ ನಾಮಪತ್ರ ಸಲ್ಲಿಕೆ ಆರಂಭವಾಗಲಿದೆ. ನಾಮಪತ್ರ ಹಿಂಪಡೆಯಲು ಏಪ್ರಿಲ್ 24 ಕಡೆಯ ದಿನಾಂಕ.

ವಿಪಕ್ಷ ನಾಯಕ ಸಿದ್ದರಾಮಯ್ಯ ಅವರಿಗೆ ವರುಣಾ ಮತಕ್ಷೇತ್ರದ 40 ವರ್ಷಗಳಿಂದ ಕೈ ಹಿಡಿದಿದೆ. ಅವರ ಗೆಲುವಿಗೆ ಶ್ರಮಿಸುವ ಅಗತ್ಯ ಇಲ್ಲ. ಅವರು ಗೆದ್ದೆ ಗೆಲ್ಲುತ್ತಾರೆ. ಬೆಳಗಾವಿ ದಕ್ಷಿಣ ಮತಕ್ಷೇತ್ರದಲ್ಲಿ ಸಮರ್ಥವಾದ ಕಾಂಗ್ರೆಸ್‌ ಅಭ್ಯರ್ಥಿಯನ್ನು ಸ್ಥಳೀಯರಿಗೆ ನೀಡಲಾಗುವುದು. ಯಾವುದೇ ಕಾರಣಕ್ಕೂ ಹೊರಗಿನಿಂದ ಅಭ್ಯರ್ಥಿಗಳನ್ನು ಹಾಕುವುದಿಲ್ಲ ಎಂದು ಸ್ಪಷ್ಟಪಡಿಸಿದರು. ಈ ಸಂದರ್ಭದಲ್ಲಿ ಕೆಪಿಸಿಸಿ ಸದಸ್ಯರಾದ ಸುನೀಲ ಹನುಮಣ್ಣವರ, ರಾಜೇಂದ್ರ ಪಾಟೀಲ, ಚಿಕ್ಕೋಡಿ ಕಾಂಗ್ರೆಸ್‌ ಜಿಲ್ಲಾಧ್ಯಕ್ಷ ಲಕ್ಷ್ಮಣರಾವ್‌ ಚಿಂಗಳೆ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.

ಕಾಂಗ್ರೆಸ್‌ ಅಧಿಕಾರಕ್ಕೆ ಬರಲ್ಲ, ಮನೆಗೆ ಹೋಗ್ತಾರೆ: ಕೇಂದ್ರ ಸಚಿವ ಜೋಶಿ

ಯಮಕನಮರಡಿ ಮತಕ್ಷೇತ್ರದ ಈ ಬಾರಿ ಪ್ರಚಾರ ನಡೆಸುತ್ತೇನೆ. ಇಲ್ಲದಿದ್ದರೇ ನಮ್ಮ ವಿರೋಧಿಗಳು ಅಪಪ್ರಚಾರ ಮಾಡುತ್ತಾರೆ. ಕಳೆದ ಬಾರಿಯೂ ಅಪಪ್ರಚಾರ ಮಾಡಿದ್ದರಿಂದ ಗೆಲುವಿನ ಅಂತರ ಕಡಿಮೆಯಾಗಿತ್ತು. ಆದ್ದರಿಂದ ಈ ಬಾರಿ ಪ್ರಚಾರಕ್ಕೆ ಹೋಗುತ್ತೇನೆ. ಶಾಸಕರ ಹೆಸರಿನಲ್ಲಿ ಹಣ ಮಾಡುವವರು ಸಾಕಷ್ಟುಜನ ಇರುತ್ತಾರೆ. ಅದರಲ್ಲಿ ಅವರು ಎಷ್ಟುಶಾಮಿಲಾಗಿದ್ದಾರೆ ಎನ್ನುವುದು ತನಿಖೆಯಿಂದ ತಿಳಿದು ಬರುತ್ತದೆ.
-ಸತೀಶ್‌ ಜಾರಕಿಹೊಳಿ, ಕೆಪಿಸಿಸಿ ಕಾರ್ಯಾಧ್ಯಕ್ಷರು.

Latest Videos
Follow Us:
Download App:
  • android
  • ios