2028ಕ್ಕೂ ರಾಜ್ಯದಲ್ಲಿ ಕಾಂಗ್ರೆಸ್‌ ಸರ್ಕಾರ: ಡಿ.ಕೆ.ಶಿವಕುಮಾರ್‌ ವಿಶ್ವಾಸ

ಲೋಕಸಭಾ ಚುನಾವಣೆಯಲ್ಲಿ ಏಕೆ ಈ ರೀತಿ ಮತದಾನವಾಗಿದೆ ಎಂಬುದರ ಬಗ್ಗೆ ಕಾಂಗ್ರೆಸ್‌ನ ಒಕ್ಕಲಿಗ ನಾಯಕರ ಜತೆಗೆ ಡಿನ್ನರ್ ಮೀಟಿಂಗ್ ನಡೆಸಿ ಚರ್ಚೆ ನಡೆಸಿದ್ದೇವೆ. ಸೋತಿರುವುದನ್ನು ಒಪ್ಪಿಕೊಳ್ಳಬೇಕು. ರಾಜಕಾರಣ ಒಂದೇ ರೀತಿ ಇರುವುದಿಲ್ಲ 6 ತಿಂಗಳಿನಲ್ಲಿ ಜನರ ಭಾವನೆ ಬದಲಾವಣೆ ಆಗುತ್ತದೆ: ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ 

Congress Will Be Get Power 2028 Too Says DCM DK Shivakumar grg

ಬೆಂಗಳೂರು(ಜೂ.15):  ಲೋಕಸಭಾ ಚುನಾವಣೆ ಫಲಿತಾಂಶದ ಬಗ್ಗೆ ಪಕ್ಷದ ಕಾರ್ಯಕರ್ತರು ಚಿಂತೆ ಮಾಡುವುದು ಬೇಡ. 2028ಕ್ಕೆ ಮತ್ತೆ ಕಾಂಗ್ರೆಸ್‌ ನೇತೃತ್ವದ ಸರ್ಕಾರ ಅಧಿಕಾರಕ್ಕೆ ಬರಲಿದೆ ಎಂದು ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಹೇಳಿದ್ದಾರೆ. 

ಶುಕ್ರವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಲೋಕಸಭಾ ಚುನಾವಣೆಯಲ್ಲಿ ಏಕೆ ಈ ರೀತಿ ಮತದಾನವಾಗಿದೆ ಎಂಬುದರ ಬಗ್ಗೆ ಕಾಂಗ್ರೆಸ್‌ನ ಒಕ್ಕಲಿಗ ನಾಯಕರ ಜತೆಗೆ ಡಿನ್ನರ್ ಮೀಟಿಂಗ್ ನಡೆಸಿ ಚರ್ಚೆ ನಡೆಸಿದ್ದೇವೆ. ಸೋತಿರುವುದನ್ನು ಒಪ್ಪಿಕೊಳ್ಳಬೇಕು. ರಾಜಕಾರಣ ಒಂದೇ ರೀತಿ ಇರುವುದಿಲ್ಲ 6 ತಿಂಗಳಿನಲ್ಲಿ ಜನರ ಭಾವನೆ ಬದಲಾವಣೆ ಆಗುತ್ತದೆ ಎಂದರು.

ಕಾಂಗ್ರೆಸ್ ಯಾರ ಮೇಲೂ ದ್ವೇಷ ರಾಜಕಾರಣ ಮಾಡೊಲ್ಲ: ಡಿಕೆ ಶಿವಕುಮಾರ

ಈ ಹಿಂದೆ ಚಲುವರಾಯಸ್ವಾಮಿ, ಬಾಲಕೃಷ್ಣ ಇವರೆಲ್ಲರೂ 50 ಸಾವಿರ ಮತದ ಅಂತರದಲ್ಲಿ ಸೋತಿದ್ದರು. ಇದೀಗ ಪುನಃ ವಾಪಸ್ ಗೆದ್ದು ಬಂದಿದ್ದಾರೆ. ಯಾವುದೂ ಶಾಶ್ವತವಲ್ಲ ಎಂದರು.

2019ರ ಲೋಕಸಭಾ ಚುನಾವಣೆಯಲ್ಲಿ ಕೇವಲ ಒಂದು ಸ್ಥಾನ ಗೆದ್ದಿದ್ದೆವು. ಆದರೆ ಈ ಬಾರಿ 9 ಸ್ಥಾನ ಗೆದ್ದಿದ್ದೇವೆ. ನಿರೀಕ್ಷೆಯಂತೆ ನಾಲ್ಕೈದು ಸ್ಥಾನ ಕಡಿಮೆ ಬಂದಿವೆ. ಪಕ್ಷದ ಕಾರ್ಯಕರ್ತರು ಚಿಂತೆ ಮಾಡುವುದು ಬೇಡ. ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ನಾನು ಒಟ್ಟಿಗೆ ದುಡಿದು ಮುಂದಿನ 2028ಕ್ಕೆ ಮತ್ತೆ ಕಾಂಗ್ರೆಸ್‌ ಸರ್ಕಾರವನ್ನು ಅಧಿಕಾರಕ್ಕೆ ತರುತ್ತೇವೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

Latest Videos
Follow Us:
Download App:
  • android
  • ios