ತೆಲಂಗಾಣದಲ್ಲಿ ಕಾಂಗ್ರೆಸ್ ಗೆಲ್ಲುವುದಿಲ್ಲ: ಮಾಜಿ ಸಚಿವ ಸುಧಾಕರ್ ಭವಿಷ್ಯ
ಪಂಚ ರಾಜ್ಯಗಳಲ್ಲಿ ವಿಧಾನಸಭಾ ಚುನಾವಣೆ ಮತದಾನದ ದಿನ ಸಂಗ್ರಹಿಸಿದ ಸಮೀಕ್ಷೆಗಳು ಯಾವ ರಾಜ್ಯದಲ್ಲಿ ಯಾರಿಗೆ ಎಷ್ಟು ಸ್ಥಾನಗಳು ಬರುತ್ತೆ ಅಂತ ಹೇಳಿವೆ. ಆದರೆ ಕೆಲವು ರಾಜ್ಯಗಳಲ್ಲಿ ಸಮೀಕ್ಷೆಗೆ ತದ್ವಿರುದ್ದವಾಗಿ ಫಲಿತಾಂಶ ಹೊರಬೀಳಲಿದೆ ಎಂದು ಮಾಜಿ ಸಚಿವ ಡಾ.ಕೆ.ಸುಧಾಕರ್ ವಿಶ್ಲೇಷಣೆ ಮಾಡಿದರು.
ಚಿಕ್ಕಬಳ್ಳಾಪುರ (ಡಿ.02): ಪಂಚ ರಾಜ್ಯಗಳಲ್ಲಿ ವಿಧಾನಸಭಾ ಚುನಾವಣೆ ಮತದಾನದ ದಿನ ಸಂಗ್ರಹಿಸಿದ ಸಮೀಕ್ಷೆಗಳು ಯಾವ ರಾಜ್ಯದಲ್ಲಿ ಯಾರಿಗೆ ಎಷ್ಟು ಸ್ಥಾನಗಳು ಬರುತ್ತೆ ಅಂತ ಹೇಳಿವೆ. ಆದರೆ ಕೆಲವು ರಾಜ್ಯಗಳಲ್ಲಿ ಸಮೀಕ್ಷೆಗೆ ತದ್ವಿರುದ್ದವಾಗಿ ಫಲಿತಾಂಶ ಹೊರಬೀಳಲಿದೆ ಎಂದು ಮಾಜಿ ಸಚಿವ ಡಾ.ಕೆ.ಸುಧಾಕರ್ ವಿಶ್ಲೇಷಣೆ ಮಾಡಿದರು. ನಗರ ಹೊರವಲಯದ ಪರಿವೀಕ್ಷಣಾ ಮಂದಿರದಲ್ಲಿ ತಾಲೂಕಿನ ಮಂಡಿಕಲ್ ಹೋಬಳಿಯ ಪಾತೂರು ಮತ್ತು ಅಡಗಲ್ಲು ಗ್ರಾಮಗಳಲ್ಲಿ ವಿಪಕ್ಷ ನಾಯಕ ಆರ್.ಅಶೋಕ್ ರೊಂದಿಗೆ ಬರ ವೀಕ್ಷಣೆಗೆ ತೆರಳುವ ಮೊದಲು ಸುದ್ದಿಗಾರರೊಂದಿಗೆ ಮಾತನಾಡಿ, ತಾವೂ ಪಂಚ ರಾಜ್ಯಗಳ ಚುನಾವಣೆ ಪ್ರಚಾರದಲ್ಲಿ ಪಾಲ್ಗೊಂಡು ಬಂದಿದ್ದೇನೆ.
ತೆಲಂಗಾಣದಲ್ಲಿ ಕಾಂಗ್ರೆಸ್ ಗೆಲ್ಲುವುದಿಲ್ಲ ಎಂದರು. ಆದರೆ ಅಲ್ಲಿ ಬಿಜೆಪಿ ಹೆಚ್ಚಿನ ಸ್ಥಾನಗಳನ್ನು ಪಡೆಯುತ್ತದೆ. ಅಲ್ಲಿ ಸಮ್ಮಿಶ್ರ ಸರ್ಕಾರ ಬರಬಹುದು. ಮಧ್ಯಪ್ರದೇಶದಲ್ಲಂತೂ ಬಿಜೆಪಿ ಗೆಲುವು ಖಚಿತ ಹಾಗೆ ಹಿಮಾಚಲ ಪ್ರದೇಶ, ಚತ್ತೀಸ್‌ಘಡ, ರಾಜಾಸ್ಥಾನಗಳಲ್ಲಿ ಹೆಚ್ಚಿನ ಸ್ಥಾನಗಳಲ್ಲಿ ಬಿಜೆಪಿ ಗೆದ್ದು ಪ್ರಾಬಲ್ಯ ಮೆರೆಯಲಿದೆ ಎಂದರು. ಈ ವೇಳೆ ಬಿಜೆಪಿ ಜಿಲ್ಲಾಧ್ಯಕ್ಷ ರಾಮಲಿಂಗಪ್ಪ, ಶಿಡ್ಲಘಟ್ಟ ಸೀಕಲ್ ರಾಮಚಂದ್ರಗೌಡ, ಮಾಜಿ ಶಾಸಕ ಎಂ. ರಾಜಣ್ಣ, ನಗರಸಭಾ ಮಾಜಿ ಅಧ್ಯಕ್ಷ ಅನಂದಬಾಬುರೆಡ್ಡಿ, ಚಿಕ್ಕಬಳ್ಳಾಪುರ ಅಭಿವೃದ್ಧಿ ಪ್ರಾಧಿಕಾರದ ಮಾಜಿ ಅಧ್ಯಕ್ಷ ಕೃಷ್ಣಮೂರ್ತಿ, ಮತ್ತಿತರರು ಇದ್ದರು.
ರಾಜ್ಯ ಸರ್ಕಾರ ರೈತರ 2 ಲಕ್ಷ ರು.ಗಳವರೆಗೆ ಸಾಲ ಮನ್ನಾ ಮಾಡಲಿ: ಆರ್.ಅಶೋಕ್ ಒತ್ತಾಯ
ಝಿಕಾ ವೈರಸ್ ತಡೆಗೆ ಕ್ರಮ ಕೈಗೊಳ್ಳಿ: ಒಕ್ಕಲಿಗ ಸಮುದಾಯದ ಬಗ್ಗೆ ಪ್ರೊ.ಭಗವಾನ್ ಹೇಳಿಕೆಗೆ ಮಾಜಿ ಸಚಿವ ಡಾ.ಕೆ.ಸುಧಾಕರ್ ಆಕ್ರೋಷ ವ್ಯಕ್ತಪಡಿಸಿದ್ದಾರೆ. ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಬಂದಾಗ ಮಾತ್ರ ಇಂಥವರು ಚಿಗುರಿಕೊಳ್ಳುವುದು ಯಾಕೆ ಎಂಬುದನ್ನು ಕನ್ನಡಿಗರು ಯೋಚನೆ ಮಾಡಬೇಕು ಎಂದು ಎಕ್ಸ್‌ನಲ್ಲಿ ಬರೆದುಕೊಂಡಿದ್ದಾರೆ.
ಭಗವಾನ್ ಹೇಳಿಕೆಗೆ ಖಂಡನೆ: ಒಕ್ಕಲಿಗ ಒಕ್ಕಿದರೆ ನಕ್ಕು ನಲಿಯುವುದು ಜಗವೆಲ್ಲ, ಒಕ್ಕಲಿಗ ಒಕ್ಕದಿರೆ ಬಿಕ್ಕುವುದು ಜಗವೆಲ್ಲ ಎಂಬ ಗಾದೆ ಮಾತು ಸತ್ಯವಾದದ್ದು. ಒಕ್ಕಲಿಗ ಸಮಾಜ ಎಂದರೆ ಅದು ನಾಡಿಗೆ ಅನ್ನ ನೀಡುವ ನೇಗಿಲ ಯೋಗಿಗಳ ಸಮುದಾಯ. ಈ ನಾಡಿನ ಮಣ್ಣಿನ ಜೊತೆ ಕರುಳಬಳ್ಳಿಯ ಸಂಬಂಧ ಹೊಂದಿರುವ ಮಣ್ಣಿನ ಮಕ್ಕಳ ಸಮುದಾಯ. ಪ್ರೊ.ಭಗವಾನ್ ಅವರು ಒಕ್ಕಲಿಗ ಸಮುದಾಯದ ಬಗ್ಗೆ ನೀಡಿರುವ ಹೇಳಿಕೆಗಳು ಅತ್ಯಂತ ಖಂಡನೀಯ ಮತ್ತು ಅಕ್ಷಮ್ಯ.
ಶಾಲೆಗಳಿಗೆ ಬಾಂಬ್ ಬೆದರಿಕೆ ಉಗ್ರರ ಕೆಲಸದಂತಿದೆ: ಆರ್.ಅಶೋಕ್
ಶ್ರೀರಾಮನನ್ನೇ ಬಿಡದ ಪ್ರೊ.ಭಗವಾನ್ ರಂತಹವರಿಂದ ಹೆಚ್ಚೇನೂ ನಿರೀಕ್ಷಿಸಲು ಸಾಧ್ಯವಿಲ್ಲ. ಅಂತಹವರಿಂದ ನಮ್ಮ ಒಕ್ಕಲಿಗ ಸಮುದಾಯಕ್ಕೆ ಸರ್ಟಿಫಿಕೇಟ್ ಸಹ ಬೇಕಿಲ್ಲ. ಆದರೆ ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಬಂದಾಗ ಮಾತ್ರ ಇಂಥವರು ಚಿಗುರಿಕೊಳ್ಳುವುದು ಯಾಕೆ ಎಂದು ಪ್ರಶ್ನಿಸಿದ್ದಾರೆ.ಕಾಂಗ್ರೆಸ್ ಸರ್ಕಾರಕ್ಕೂ ಇಂತಹ ದೇಶ ವಿರೋಧಿ, ಧರ್ಮ ವಿರೋಧಿ, ಕನ್ನಡ ವಿರೋಧಿ ಬುದ್ಧಿ ಜೀವಿಗಳಿಗೂ ಇರುವ ಅವಿನಾಭಾವ ಸಂಬಂಧ ಆದರೂ ಏನು. ಇದು ಕನ್ನಡಿಗರು ಅರಿತುಕೊಳ್ಳಬೇಕು ಎಂದು ಡಾ.ಕೆ.ಸುಧಾಕರ್ ಮನವಿ ಮಾಡಿದ್ದಾರೆ.