'ಚುನಾವಣೆ ಸಮೀಕ್ಷೆಗಳು ಉಲ್ಟಾ, ಉಪಚುನಾವಣೆಯಲ್ಲಿ ಕಾಂಗ್ರೆಸ್ ಗೆಲುವು ಖಚಿತ'

ಸಿ-ವೋಟರ್ ಸಮೀಕ್ಷೆ ಪ್ರಕಾರ ರಾಜ್ಯದ ಎರಡು ಉಪಚುನಾವಣೆಯಲ್ಲಿ ಬಿಜೆಪಿ ಗೆಲ್ಲಲಿದೆ ಎಂದು ತಿಳಿದುಬಂದಿದೆ. ಆದ್ರೆ, ಸಮೀಕ್ಷೆಗಳು ಉಲ್ಟಾ ಆಗಲಿದೆ ಎಂದು ಮಾಜಿ ಸಿಎಂ ಹೇಳಿದ್ದಾರೆ.

Congress Win In RR Nagar and Sira By Election Says Siddaramaiah rbj

ಶಿವಮೊಗ್ಗ, (ನ.08): ಶಿರಾ ಮತ್ತು ಆರ್. ಆರ್.ನಗರ ಉಪಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಗೆಲ್ಲಲಿದ್ದಾರೆ. ಚುನಾವಣೆ ಸಮೀಕ್ಷೆಗಳು ಉಲ್ಟಾ ಆಗಲಿದೆ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಭವಿಷ್ಯ ನುಡಿದಿದ್ದಾರೆ.

ಬೆಂಗಳೂರಿನ ಆರ್‌ಆರ್‌ ನಗರ ಹಾಗೂ ತುಮಕೂರಿನ ಶಿರಾ ಉಪಚುನಾವಣೆಯಲ್ಲಿ ಬಿಜೆಪಿ ಗೆಲ್ಲಲಿದೆ ಎಂದು ಸಿ-ವೋಟರ್ ಸಮೀಕ್ಷೆ ತಿಳಿಸಿದೆ.

ಸಿ-ವೋಟರ್ ಫಲಿತಾಂಶ ಪ್ರಕಟ: RR ನಗರದಲ್ಲಿ ಬಿಜೆಪಿಗೆ ಗೆಲುವು, ಶಿರಾ ಯಾರ ಪಾಲು..? 

ಇನ್ನು ಈ ಬಗ್ಗೆ ಇಂದು (ಭಾನುವಾರ)  ಶಿವಮೊಗ್ಗದಲ್ಲಿ ಮಾತನಾಡಿದ ಅವರು, ನಾಲ್ಕು ದಿನಗಳ ಕಾಲ ಶಿರಾ ಮತ್ತು ಆರ್.ಆರ್. ನಗರಗಳಲ್ಲಿ ಪ್ರಚಾರ ನಡೆಸಿದ್ದೇನೆ. ಮತದಾರರು ಕಾಂಗ್ರೆಸ್ ಪಕ್ಷದ ಪರವಾಗಿದ್ದು, ಕಾಂಗ್ರೆಸ್‌ ಗೆಲ್ಲಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಸಿಎಂ ಯಡಿಯೂರಪ್ಪ ಅವರು ಅಪರೇಷನ್ ಕಮಲದ ಜನಕ, ಸ್ಥಳೀಯ ಸಂಸ್ಥೆಗಳಲ್ಲಿ ಬಿಜೆಪಿಯವರು ಅಪರೇಷನ್ ಕಮಲ ಮಾಡುತ್ತಿದ್ದಾರೆ. ಅಪರೇಷನ್ ಕಮಲದ ಮೂಲಕ ಪ್ರಜಾಪ್ರಭುತ್ವದ ಕಗ್ಗೊಲೆ ಮಾಡುತ್ತಿದ್ದಾರೆ ಎಂದು ಸಿದ್ದರಾಮಯ್ಯ ಆರೋಪಿಸಿದರು.

ವಿನಯ್ ಕುಲಕರ್ಣಿ ವಿಚಾರದ ಬಗ್ಗೆ ಮಾತನಾಡಿದ ಅವರು, ವಿನಯ್ ಕುಲಕರ್ಣಿ ಬಂಧನದ ಹಿಂದೆ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಕೈವಾಡವಿದೆ. ಸರ್ಕಾರಗಳು ಸಿಬಿಐ ಅನ್ನು ದುರ್ಬಳಕೆ ಮಾಡಿಕೊಳ್ಳುತ್ತಿದ್ದಾರೆ ಎಂದು ಆರೋಪಿಸಿದರು.

ರಾಜ್ಯದಲ್ಲಿ ಸಿಎಂ ಬದಲಾವಣೆ ಹೇಳಿಕೆಯ ಬಗ್ಗೆ ಪ್ರತಿಕ್ರಯಿಸಿದ ಅವರು, ನನಗೆ ಬಂದ ಮಾಹಿತಿಯಿಂದ ಹೇಳಿದ್ದೇನೆ. ಬಿಹಾರ ಚುನಾವಣೆ ಬಳಿಕ ರಾಜ್ಯದಲ್ಲಿ ಸಿಎಂ ಬದಲಾವಣೆ ಆಗುತ್ತದೆ. ರಾಜ್ಯ ಬಿಜೆಪಿಯಲ್ಲಿ 3 ಬಣಗಳಿವೆ. ಯಡಿಯೂರಪ್ಪ ಅವಧಿಯಲ್ಲಿ ಭ್ರಷ್ಟಾಚಾರ ತಾಂಡವ ಆಡುತ್ತಿದೆ ಎಂದರು.

Latest Videos
Follow Us:
Download App:
  • android
  • ios