Breaking: ಕಾಂಗ್ರೆಸ್‌ ಸರ್ಕಾರ ಬೀಳಿಸಲು ವಿದೇಶದಲ್ಲಿ ಷಡ್ಯಂತ್ರ; ಡಿಸಿಎಂ ಡಿ.ಕೆ. ಶಿವಕುಮಾರ್

ರಾಜ್ಯದಲ್ಲಿ ಅಧಿಕಾರದಲ್ಲಿರುವ ಬಹುಮತದ ಕಾಂಗ್ರೆಸ್‌ ಸರ್ಕಾರವನ್ನು ಬೀಳಿಸಲು ವಿದೇಶಗಳಿಂದ ಕುಳಿತು ಪ್ರಯತ್ನಗಳನ್ನು ಮಾಡಲಾಗುತ್ತಿದೆ ಎಂದು ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸ್ಪೋಟಕ ಹೇಳಿಕೆ ನೀಡಿದ್ದಾರೆ. 

Conspiracy in Singapore to topple Karnataka Congress government said DK Shivakumar sat

ಬೆಂಗಳೂರು (ಜು.24): ರಾಜ್ಯದಲ್ಲಿ ಅಧಿಕಾರದಲ್ಲಿರುವ ಬಹುಮತದ ಕಾಂಗ್ರೆಸ್‌ ಸರ್ಕಾರವನ್ನು ಬೀಳಿಸಲು ವಿದೇಶಗಳಿಂದ ಕುಳಿತು ಪ್ರಯತ್ನಗಳನ್ನು ಮಾಡಲಾಗುತ್ತಿದೆ ಎಂದು ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸ್ಪೋಟಕ ಹೇಳಿಕೆ ನೀಡಿದ್ದಾರೆ. 

ಈ ಕುರಿತು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ವಿದೇಶದಲ್ಲಿ ಕುಳಿತು ನಮ್ಮ ಸರ್ಕಾರ ಬೀಳಿಸುವ ಕೆಲಸ ನಡೆಯುತ್ತಿದೆ. ಇದೆಲ್ಲಾ ಒಂದು ತಂತ್ರವಾಗಿದೆ. ಇದರ ಬಗ್ಗೆ ನಮಗೂ ಮಾಹಿತಿ ಬಂದಿದೆ‌. ಬೆಂಗಳೂರಿನಲ್ಲಿ ಆಪರೇಷನ್ ಮಾಡಿದ್ರೆ ಗೊತ್ತಾಗುತ್ತೆ ಅಂತ, ವಿದೇಶಕ್ಕೆ ಹೋಗಿ ಅಲ್ಲಿ ಕುಳಿತುಕೊಂಡೇ ಆಪರೇಷನ್ ಮಾಡ್ತಿದ್ದಾರೆ ಎಂದು ಹೇಳಿದ್ದು, ಯಾರ ಹೆಸರನ್ನೂ ಹೇಳಲಿಲ್ಲ. ಆದರೆ, ಕಾಂಗ್ರೆಸ್‌ ಸರ್ಕಾರ ಅಧಿಕಾರಕ್ಕೆ ಬಂದ ಎರಡೇ ತಿಂಗಳಲ್ಲಿ ಅತಂತ್ರ ಆಗುತ್ತಿರುವುದು ರಾಜ್ಯ ರಾಜಕಾರಣದಲ್ಲಿ ತೀವ್ರ ಕುತೂಹಲದ ಬೆಳವಣಿಗೆ ಆಗಿದೆ. 

ಕಾಂಗ್ರೆಸ್‌ನಲ್ಲಿ ಮೂಲ VS ವಲಸಿಗ ಫೈಟ್‌: ಹರಿಪ್ರಸಾದ್‌ ಮಾತಿಗೆ ಮೂಲ ಕಾಂಗ್ರೆಸ್ಸಿಗರ ಬೆಂಬಲ..!

ಕರ್ನಾಟಕದಲ್ಲಿ ಕಾಂಗ್ರೆಸ್‌ ಸರ್ಕಾರ 135 ಸ್ತಾನಗಳನ್ನು ಪಡೆದು ಬಹುಮತದಿಂದ ಅಧಿಕಾರಕ್ಕೆ ಬಂದಿದೆ. ವಿರೋಧ ಪಕ್ಷದ ನಾಯಕನಾಗಿದ್ದ ಸಿದ್ದರಾಮಯ್ಯ ಅವರು ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದ್ದಾರೆ. ಇನ್ನು ಕಾಂಗ್ರೆಸ್‌ ಸರ್ಕಾರದ ಆಡಳಿತ ಆರಂಭವಾಗಿ ಎರಡು ತಿಂಗಳು ಪೂರ್ಣಗೊಳಿಸಿದ ತಕ್ಷಣವೇ ಈಗ ಸರ್ಕಾರವನ್ನು ಬೀಳಿಸಲು ಷಡ್ಯಂತ ನಡೆಯುತ್ತಿದೆ ಎನ್ನುವುದು ರಾಜ್ಯದ ಮಟ್ಟಕ್ಕೆ ಸ್ಪೋಟಕ ಹೇಳಿಕೆಯಾಗಿದೆ. ಬಿಜೆಪಿ ಮಾದರಿಯಲ್ಲಿಯೇ ಶಾಸಕರನ್ನು ಆಪರೇಷನ್‌ ಮಾಡಿ ಸೆಳೆಯಲಾಗುತ್ತಿದೆ ಎಂಬ ಆರೋಪವೂ ಕೇಳಿಬಂದಿದೆ.

ವಿದೇಶದಲ್ಲಿ ಕುಳಿತು ಷಡ್ಯಂತ್ರ: ಇನ್ನು ರಾಜ್ಯದಲ್ಲಿ ಕುಳಿತು ಷಡ್ಯಂತ್ರವನ್ನು ಮಾಡಿದರೆ ಎಲ್ಲರಿಗೂ ಗೊತ್ತಾಗುತ್ತದೆ ಎಂಬ ಉದ್ದೇಶದಿಂದಲೇ ವಿದೇಶಕ್ಕೆ ತೆರಳಿ ಷಡ್ಯಂತ್ರ ಮಾಡುತ್ತಿದ್ದಾರೆ. ಆದರೆ, ಯಾರು ಈ ಷಡ್ಯಂತ್ರವನ್ನು ಮಾಡುತ್ತಿದ್ದಾರೆ ಎಂಬುದರ ಬಗ್ಗೆ ಸ್ಪಷ್ಟ ಮಾಹಿತಿಯನ್ನು ನೀಡಿಲ್ಲ. ಇನ್ನು ರಾಜ್ಯ ನಾಯಕರೋ ಅಥವಾ ಕೇಂದ್ರದ ನಾಯಕರು ಷಡ್ಯಂತ್ರ ಮಾಡುತ್ತಿದ್ದಾರೋ ಎಂಬುದರ ಬಗ್ಗೆಗೂ ಸುಳಿವು ನೀಡಿಲ್ಲ. ಆದರೆ, ರಾಜ್ಯದಿಂದ ಇತ್ತೀಚೆಗೆ ವಿದೇಶಕ್ಕೆ ಹೋದ ರಾಜಕೀಯ ನಾಯಕರೇ ಈ ಬಗ್ಗೆ ಷಡ್ಯಂತ್ರ ಮಾಡುತ್ತಿದ್ದಾರೆ ಎಂಬ ಅನುಮಾನಗಳೂ ಕೂಡ ವ್ಯಕ್ತವಾಗಿವೆ.

2018ರ ಸರ್ಕಾರ ಆಪರೇಷನ್‌ನಿಂದ ಪತನ: 2018ರಲ್ಲಿ ಅಧಿಕಾರಕ್ಕೆ ಬಂದಿದ್ದ ಕಾಂಗ್ರೆಸ್‌-ಜೆಡಿಎಸ್‌ ಸಮ್ಮಿಶ್ರ ಸರ್ಕಾರವನ್ನು 13 ತಿಂಗಳ ನಂತರ ಆಪರೇಷನ್ ಮಾಡಿ ಪತನ ಮಾಡಲಾಗಿತ್ತು. ಇದಾದ ನಂತರ ಬಿ.ಎಸ್. ಯಡಿಯೂರಪ್ಪ ಹಾಗೂ ಬಸವರಾಜ ಬೊಮ್ಮಾಯಿ ಅವರು ಮುಖ್ಯಮಂತ್ರಿಯಾಗಿ ಆಡಳಿತ ಮಾಡಿದ್ದಾರೆ. ಆದರೆ, ಈಗ ಕಾಂಗ್ರೆಸ್‌ ಸಂಪೂರ್ಣ ಬಹುಮತವನ್ನು ಪಡೆದು ಅಧಿಕಾರಕ್ಕೆ ಬಂದಿದ್ದು 5 ವರ್ಷಗಳ ಕಾಲ ಸರ್ಕಾರವನ್ನು ಅಲುಗಾಡಿಸಲು ಸಾಧ್ಯವಿಲ್ಲ ಎಂಬ ನಂಬಿಕೆಯಿತ್ತು. ಆದರೆ, ಇನ್ನೂ ಸರ್ಕಾರ ಹನಿಮೂನ್‌ ಪಿರಿಯಡ್‌ನಲ್ಲಿ ಇರುವಾಗಲೇ ಆಪರೇಷನ್‌ ಮಾಡುವ ಮುನ್ಸೂಚನೆ ಸರ್ಕಾರಕ್ಕೆ ಸಿಕ್ಕಿದೆ. 

ಕೆಆರ್‌ಎಸ್‌ನಿಂದ ತಮಿಳುನಾಡಿಗೆ 2 ಸಾವಿರ ಕ್ಯೂಸೆಕ್ಸ್‌ ನೀರು ಹರಿಸಿದ ಸರ್ಕಾರ? ಸಂಕಷ್ಟ ಸೂತ್ರಕ್ಕೆ ಪರಿಹಾರ

ಟ್ರ್ಯಾಪ್‌ ಆಗದಂತೆ ಸೂಚಿಸಿದ್ದ ಸಿಎಂ: ಇನ್ನು ಕಾಂಗ್ರೆಸ್‌ನಿಂದ ಇತ್ತೀಚೆಗೆ ನಡೆದಿದ್ದ ಶಾಸಕಾಂಗ ಪಕ್ಷ ಸಭೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌ ಅವರು ಸಭೆಯನ್ನು ಉದ್ದೇಶಿಸಿ ಮಾತನಾಡುತ್ತಾ ಈ ಬಾರಿ ಕಾಂಗ್ರೆಸ್‌ನಿಂದ ಹೆಚ್ಚಿನ ಹೊಸ ಶಾಸಕರು ಆಯ್ಕೆಯಾಗಿ ಬಂದಿದ್ದೀರಿ. ಇನ್ನು ಹೊರಗಡೆ ಟ್ರ್ಯಾಪ್‌ ಮಾಡುವವರ ಸಂಖ್ಯೆಯೂ ಹೆಚ್ಚಾಗಿದೆ. ಆದ್ದರಿಂದ ಎಲ್ಲ ಶಾಸಕರೂ ಕೂಡ ಎಚ್ಚರಿಕೆಯಿಂದ ಇರಬೇಕು. ಯಾವುದೇ ಕಾರಣಕ್ಕೂ ಟ್ರ್ಯಾಪ್‌ಗೆ ಅಥವಾ ಆಪರೇಷನ್‌ಗೆ ಒಳಗಾಗಬೇಡಿ ಎಂದು ಮುನ್ಸೂಚನೆಯನ್ನೂ ನೀಡಿದ್ದರು. 

Latest Videos
Follow Us:
Download App:
  • android
  • ios