ಕೆಜಿಎಫ್‌ನಲ್ಲಿ ಕೈಗಾರಿಕಾ ಟೌನ್‌ಶಿಪ್: ಸಿಎಂ ಬೊಮ್ಮಾಯಿ ಅಶ್ವಾಸನೆ
ಕೆಜಿಎಫ್‌ನಲ್ಲಿನ ಬಿಇಎಂಎಲ್ ಸಂಸ್ಥೆಗೆ ಸೇರಿದ ಜಮೀನನ್ನು ಕಂದಾಯ ಇಲಾಖೆಯಿಂದ ಕೆಐಎಡಿಬಿಗೆ ವರ್ಗಾವಣೆ ಮಾಡಲು ಸರ್ಕಾರ ಸೂಕ್ತ ಕ್ರಮ ಜರುಗಿಸಿ ಕೈಗಾರಿಕಾ ಟೌನ್‌ಶಿಪ್ ನಿರ್ಮಿಸಲಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅಶ್ವಾಸನೆ ನೀಡಿದ್ದಾರೆ.
ವಿಧಾನಸಭೆ (ಸೆ.17): ಕೆಜಿಎಫ್‌ನಲ್ಲಿನ ಬಿಇಎಂಎಲ್ ಸಂಸ್ಥೆಗೆ ಸೇರಿದ ಜಮೀನನ್ನು ಕಂದಾಯ ಇಲಾಖೆಯಿಂದ ಕೆಐಎಡಿಬಿಗೆ ವರ್ಗಾವಣೆ ಮಾಡಲು ಸರ್ಕಾರ ಸೂಕ್ತ ಕ್ರಮ ಜರುಗಿಸಿ ಕೈಗಾರಿಕಾ ಟೌನ್‌ಶಿಪ್ ನಿರ್ಮಿಸಲಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅಶ್ವಾಸನೆ ನೀಡಿದ್ದಾರೆ. ರಾಜ್ಯ ಸರ್ಕಾರವು ಬಿಇಎಂಎಲ್‌ಗೆ ಕಾರ್ಖಾನೆ ಸ್ಥಾಪಿಸಲು 1870.30 ಕರೆ ಜಮೀನು ನೀಡಲಾಗಿದ್ದು, ಈ ಪೈಕಿ ಉದ್ದೇಶಿತ ಚಟುವಟಿಕೆಗೆ ಜಮೀನು ಉಪಯೋಗಿಸಿಕೊಂಡು ಬಾಕಿ ಉಳಿದಿರುವ 971.33 ಎಕರೆ ಜಮೀನನ್ನು ಕಂದಾಯ ಇಲಾಖೆಗೆ ವಾಪಸ್ ನೀಡುವಂತೆ ಕೋಲಾರ ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದಾರೆ.
ಕಂದಾಯ ಇಲಾಖೆಯಿಂದ ಕೈಗಾರಿಕೆ ಇಲಾಖೆ ಪಡೆದು ಅದನ್ನು ಕೆಐಎಡಿಬಿ ಮೂಲಕ ಅಭಿವೃದ್ಧಿಪಡಿಸಬೇಕಿದೆ ಎಂದರು. ಬೆಂಗಳೂರು ಸುತ್ತಮುತ್ತ ಜಮೀನು ಸಿಗುವುದು ಕಷ್ಟಕರವಾಗಿದೆ. ಬೆಂಗಳೂರಿಗೆ ಸಮೀಪದಲ್ಲಿದ್ದರೂ ಕೆಜಿಎಫ್ ಕೈಗಾರಿಕೆ ವಂಚಿತವಾಗಿದೆ. ಚಿನ್ನದ ಗಣಿ ಚಟುವಟಿಕೆ ಸ್ಥಗಿತಗೊಂಡಿದ್ದರಿಂದ ಉದ್ಯೋಗದ ಸಮಸ್ಯೆ ಉಂಟಾಗಿದೆ. ಇದರ ನಿವಾರಿಸಲು ಕೈಗಾರಿಕೆ ಟೌನ್‌ಶಿಪ್ ನಿರ್ಮಾಣ ಮಾಡುತ್ತೇವೆ ಎಂದರು. ಕೈಗಾರಿಕಾ ಸಚಿವ ಮುರುಗೇಶ್ ನಿರಾಣಿ ಅವರು ಜಮೀನು ವಶಪಡಿಸಿಕೊಳ್ಳುವ ಸಂಬಂಧ ಎದುರಾಗಿರುವ ಸಮಸ್ಯೆಗಳ ಕುರಿತು ವಿವರಣೆ ನೀಡಿದರು.
ಕಲಬುರಗಿ: ಶಾಲಾ ಕಟ್ಟಡಕ್ಕಾಗಿ ಸಿಎಂ ಭೇಟಿಗೆ ಮಕ್ಕಳ ಪಾದಯಾತ್ರೆ..!
ಆದರೆ, ಇದು ಬಹಳ ವರ್ಷದ ಬೇಡಿಕೆಯಾದರೂ ಸರ್ಕಾರ ಗಮನ ಹರಿಸುತ್ತಿಲ್ಲ ಎಂದು ರೂಪಕಲಾ ಅವರು ಬೇಸರ ವ್ಯಕ್ತಪಡಿಸಿದರು. ಈ ವೇಳೆ ಮಧ್ಯಪ್ರವೇಶಿಸಿದ ಕಾಂಗ್ರೆಸ್ ಸದಸ್ಯ ಆರ್.ವಿ.ದೇಶಪಾಂಡೆ ಅವರು ಕೈಗಾರಿಕಾ ಸಚಿವರಿಗೆ ಪರಿಸ್ಥಿತಿಯನ್ನು ಅರ್ಥಮಾಡಿಸುವುದರ ಜತೆಗೆ ಮುಖ್ಯಮಂತ್ರಿಗಳಿಗೂ ಸಮಸ್ಯೆಯನ್ನು ಬಗೆಹರಿಸಬೇಕು ಎಂದು ಹೇಳಿದರು. ಆಗ ಮುಖ್ಯಮಂತ್ರಿಗಳು ಮಾತನಾಡಿ, ಸರ್ಕಾರ ಅಗತ್ಯ ಕ್ರಮ ಕೈಗೊಂಡು ಟೌನ್‌ಶಿಪ್ ನಿರ್ಮಿಸುವ ಅಶ್ವಾಸನೆ ನೀಡಿದರು.
ಆರ್ಯ ಈಡಿಗ ಸಮಾಜದ ಅಭಿವೃದ್ಧಿಗೆ ಬದ್ಧ: ಆರ್ಯ ಈಡಿಗ ಸಮುದಾಯದ ಅಭಿವೃದ್ಧಿಗೆ ಸರ್ಕಾರ ಬದ್ಧವಾಗಿದ್ದು, ಸಮಾಜದ ಅಭಿವೃದ್ಧಿಗೆ ವಿಶೇಷ ಘಟಕ ರೂಪಿಸುವ ಕುರಿತು ಮುಖಂಡರ ಜತೆ ಚರ್ಚಿಸಿ ನಿರ್ಧರಿಸುತ್ತೇವೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಭರವಸೆ ನೀಡಿದರು. ಕರ್ನಾಟಕ ಪ್ರದೇಶ ಆರ್ಯ ಈಡಿಗರ ಸಂಘ ಹಾಗೂ ಈಡಿಗ ಹಾಗೂ 25 ಪಂಗಡಗಳ ವತಿಯಿಂದ ಚೌಡಯ್ಯ ಸ್ಮಾರಕ ಭವನದಲ್ಲಿ ಗುರುವಾರ ನಡೆದ ನಾರಾಯಣ ಗುರುಗಳ 168ನೇ ಜಯಂತ್ಯುತ್ಸವ ಉದ್ಘಾಟಿಸಿ ಅವರು ಮಾತನಾಡಿದರು.
ಸಮುದಾಯದ ಆರ್ಥಿಕ, ಶೈಕ್ಷಣಿಕ, ಸಾಮಾಜಿಕ ಅಭಿವೃದ್ಧಿಗೆ ವಿಶೇಷ ಘಟಕ ರೂಪಿಸಲಾಗುವುದು. ಸಚಿವ ವಿ.ಸುನಿಲ್ ಕುಮಾರ ಹಾಗೂ ಸಮಾಜದ ಮುಖಂಡರ ಜೊತೆ ಚರ್ಚಿಸಿ ಅದಕ್ಕೆ ಒಂದು ಸ್ಪಷ್ಟಸ್ವರೂಪ ನೀಡಲಾಗುವುದು ಎಂದರು. ಸಮಾಜದ ಬೇಡಿಕೆಯಂತೆ ರಾಮನಗರ ಸೋಲೂರು ಮಠದ ಬಳಿಯಲ್ಲಿ ಹತ್ತು ಎಕರೆ ಜಮೀನು ಮಂಜೂರು ಮಾಡಲು ಕ್ರಮ ವಹಿಸುತ್ತೇವೆ. ಜತೆಗೆ, ಸಮುದಾಯ ಭವನ ನಿರ್ಮಾಣಕ್ಕೆ ಎರಡು ಕಂತಿನಲ್ಲಿ 5 ಕೋಟಿ ರು. ನೀಡಲಾಗುವುದು ಎಂದು ಭರವಸೆ ನೀಡಿದರು.
ಹಸಿ ಕಸ ವಾಸನೆ ತಡೆಗೆ ಹೊಸ ತಂತ್ರಜ್ಞಾನ: ಸಿಎಂ ಬೊಮ್ಮಾಯಿ
ಇಂಧನ ಸಚಿವ ವಿ.ಸುನಿಲ್ ಕುಮಾರ್ ಮಾತನಾಡಿ, ಸಮಾಜದ ಅಭಿವೃದ್ಧಿಗೆ ನಾರಾಯಣ ಗುರುಗಳ ಹೆಸರಲ್ಲಿ ನಿಗಮ ಸ್ಥಾಪಿಸಬೇಕು ಅಥವಾ ಪ್ರತ್ಯೇಕ ಅನುದಾನ ನೀಡಬೇಕು. ಪುನೀತ್ ರಾಜ್‌ಕುಮಾರ್ ಜನ್ಮದಿನ ಮಾ. 17ನ್ನು ಸ್ಪೂರ್ತಿ ದಿನಾಚರಣೆ ಘೋಷಣೆ ಮಾಡುವಂತೆ ಮನವಿ ಮಾಡಿದರು. ಶಾಸಕ, ಎಂಎಸ್‌ಐಎಲ್ ಅಧ್ಯಕ್ಷ ಎಚ್.ಹಾಲಪ್ಪ ಮಾತನಾಡಿದರು. ಸೋಲೂರು ಆರ್ಯ ಈಡಿಗ ಮಹಾಸಂಸ್ಥಾನ ಪೀಠಾಧಿಪತಿ ವಿಖ್ಯಾತಾನಂದ ಸ್ವಾಮೀಜಿ, ಸಂಘದ ಜಂಟಿ ಕಾರ್ಯದರ್ಶಿ ಆರ್.ಪಿ. ಪ್ರಕಾಶ, ಚಲನಚಿತ್ರ ನಿರ್ಮಾಪಕ ಎಸ್.ಎ.ಚಿನ್ನೇಗೌಡರು ಸೇರಿ ಇತರರಿದ್ದರು.