ಮುಂದಿನ ಚುನಾವಣೆಯಲ್ಲಿ ಒಂದೇ ಕ್ಷೇತ್ರದಿಂದ ಸ್ಪರ್ಧೆ: ಸಿದ್ದರಾಮಯ್ಯ

ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ಒಂದೇ ಕ್ಷೇತ್ರದಿಂದ ಸ್ಪರ್ಧೆ ಮಾಡುವುದಾಗಿ ವಿಧಾನಸಭೆ ಪ್ರತಿಪಕ್ಷ ನಾಯಕ ಹಾಗೂ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟಪಡಿಸಿದ್ದಾರೆ. ಶುಕ್ರವಾರ ಸುದ್ದಿಗಾರರೊಂದಿಗೆ ಮಾತನಾಡಿ, ರಾಜ್ಯದ ಹಲವು ಕ್ಷೇತ್ರಗಳಿಂದ ಸ್ಪರ್ಧೆಗೆ ಒತ್ತಾಯ ಬಂದಿದೆ.

Contest from one constituency in the next election says siddaramaiah gvd

ಮೈಸೂರು (ನ.19): ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ಒಂದೇ ಕ್ಷೇತ್ರದಿಂದ ಸ್ಪರ್ಧೆ ಮಾಡುವುದಾಗಿ ವಿಧಾನಸಭೆ ಪ್ರತಿಪಕ್ಷ ನಾಯಕ ಹಾಗೂ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟಪಡಿಸಿದ್ದಾರೆ. ಶುಕ್ರವಾರ ಸುದ್ದಿಗಾರರೊಂದಿಗೆ ಮಾತನಾಡಿ, ರಾಜ್ಯದ ಹಲವು ಕ್ಷೇತ್ರಗಳಿಂದ ಸ್ಪರ್ಧೆಗೆ ಒತ್ತಾಯ ಬಂದಿದೆ. ನಾನು ಮೂರು ಕ್ಷೇತ್ರಗಳನ್ನು ಶಾರ್ಟ್‌ ಲಿಸ್ಟ್‌ ಮಾಡಿದ್ದೇನೆ. ಕೋಲಾರ, ಬಾದಾಮಿ ಹಾಗೂ ವರುಣ ಕ್ಷೇತ್ರ ಶಾರ್ಟ್‌ ಲಿಸ್ಟ್‌ನಲ್ಲಿದೆ. ಚುನಾವಣೆ ಘೋಷಣೆ ನಂತರ ಸ್ಪರ್ಧೆ ಮಾಡುವ ಕ್ಷೇತ್ರದ ಬಗ್ಗೆ ಹೇಳುವೆ. ಅಂತಿಮವಾಗಿ ಈ ಬಗ್ಗೆ ಹೈಕಮಾಂಡ್‌ ತೀರ್ಮಾನ ಮಾಡುತ್ತದೆ ಎಂದರು. ಸೋಲಿನ ಭಯದಲ್ಲಿ ಸರ್ವೇ ಮೊರೆ ಹೋಗಿದ್ದಾರೆ ಎಂಬ ಆರೋಪಕ್ಕೆ ಪ್ರತಿಕ್ರಿಯಿಸಿ, ಸರ್ವೇ ಮಾಡಿಸಿದರೆ ತಪ್ಪೇನು? ಮೋದಿ ಎರಡು ಕ್ಷೇತ್ರಗಳಲ್ಲಿ ಸ್ಪರ್ಧೆ ಮಾಡಿರಲಿಲ್ವಾ? ಅವರು ಸರ್ವೇ ಮಾಡಿಸಿರಲಿಲ್ವಾ?. ಸುರಕ್ಷಿತ ಕ್ಷೇತ್ರಕ್ಕಾಗಿ ಸರ್ವೆ ಮಾಡಿಸುವುದರಲ್ಲಿ ತಪ್ಪೇನು ಎಂದು ಪ್ರಶ್ನಿಸಿದರು.

ಇಂದು ಆಯೋಗದ ಮುಂದೆ ಧರಣಿ: ಮತದಾರರ ಪಟ್ಟಿಪರಿಷ್ಕರಣೆ ವೇಳೆ ಮಾಹಿತಿ ಕಳ್ಳತನ ಆಗಿದೆ. ಈ ಬಗ್ಗೆ ದೂರು ನೀಡಲಾಗಿದೆ. ಶನಿವಾರ ಚುನಾವಣಾ ಆಯೋಗದ ಮುಂದೆ ಧರಣಿ ಮಾಡುತ್ತೇವೆ ಎಂದು ವಿಧಾನಸಭೆ ಪ್ರತಿಪಕ್ಷ ನಾಯಕ ಹಾಗೂ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಬಿಬಿಎಂಪಿ ಆಯುಕ್ತರು ಖಾಸಗಿ ಕಂಪನಿಗೆ ಮತದಾರರ ಪಟ್ಟಿಪರಿಷ್ಕರಣೆಯನ್ನು ವಹಿಸಿದ್ದಾರೆ. ಬೆಂಗಳೂರು ಅಭಿವೃದ್ಧಿ ಸಚಿವರು ಆಗಿರುವ ಬಸವರಾಜ ಬೊಮ್ಮಾಯಿಗೆ ಗೊತ್ತಿದ್ದೇ ಆಗಿದೆ ಎಂದು ಆರೋಪಿಸಿದರು.

ವರುಣಾ ಕ್ಷೇತ್ರದತ್ತ ಸಿದ್ದರಾಮಯ್ಯ ಒಲವು?: ಕೋಲಾರದಲ್ಲಿ ಒಳೇಟಿನ ಭೀತಿ

ಚುನಾವಣಾ ಆಯೋಗ ಸ್ವೀಪ್‌ ಹೆಸರಿನಲ್ಲಿ ಕಾರ್ಯಕ್ರಮ ಹಮ್ಮಿಕೊಂಡಿದೆ. ಇವರು ಕಾಂಪಿಟೇಟಿವ್‌ ಬಿಡ್‌ ಕರೆಯಬೇಕಿತ್ತು. ಉಚಿತವಾಗಿ ಪರಿಷ್ಕರಣೆ ಮಾಡುತ್ತೇವೆ ಎಂದಿದ್ದಕ್ಕೆ ಚಿಲುಮೆ ಮತ್ತು ಹೊಂಬಾಳೆ ಕಂಪನಿಗೆ ಕೊಟ್ಟಿದ್ದಾರೆ. ಇದಕ್ಕೆ ಕೋಟ್ಯಂತರ ರು. ಖರ್ಚಾಗುತ್ತದೆ. ಆ ಕಂಪನಿ ಲಾಭ ಇಲ್ಲದೆ ಇದನ್ನು ಮಾಡುತ್ತದೆಯೇ ಎಂದು ಅವರು ಪ್ರಶ್ನಿಸಿದರು. ಅಲ್ಪಸಂಖ್ಯಾತ, ದಲಿತರು, ಹಿಂದುಳಿದವರು ಕಾಂಗ್ರೆಸ್‌ ಪರ ಇರುತ್ತಾರೆ. ಅಂತಹ ಮತದಾರರ ಮಾಹಿತಿ ಡಿಲೀಟ್‌ ಮಾಡಿ ಬಿಜೆಪಿಗೆ ಅನುಕೂಲ ಮಾಡಿಕೊಟ್ಟಿದ್ದಾರೆ. ನಾವು ಆರೋಪ ಮಾಡಿದ ಮೇಲೆ ಬಿಬಿಎಂಪಿ ಆಯುಕ್ತರು ರಕ್ಷಣಾತ್ಮಕವಾಗಿ ಹೇಳಿಕೆ ನೀಡುತ್ತಿದ್ದಾರೆ. ಇಲ್ಲಿ ಮಾಹಿತಿ ಕಳ್ಳತನ ಆಗಿದೆ ಎಂದು ಅವರು ದೂರಿದರು.

JDS Pancharatna Rathayatra: ಮೈತ್ರಿ ಸರ್ಕಾರ ಬೀಳಿಸಿದ್ದೇ ಸಿದ್ದರಾಮಯ್ಯ: ಎಚ್‌ಡಿಕೆ

ಬಿಎಲ್‌ಒಗಳು ಯಾವಾಗಲೂ ಸರ್ಕಾರಿ, ಅರೆ ಸರ್ಕಾರಿ ನೌಕರರಾಗಿರಬೇಕು. ಇವರು ತಮಗೆ ಬೇಕಾದವರನ್ನು ಬಿಎಲ್‌ಒ ಮಾಡಿಕೊಂಡಿದ್ದಾರೆ. ಇದು ಕಾನೂನು ಬಾಹಿರ. ಖಾಸಗಿಯವರನ್ನು ಬಿಎಲ್‌ಒಗಳ ನೇಮಕಕ್ಕೆ ನಿಮಗೆ ಅಧಿಕಾರ ಕೊಟ್ಟವರು ಯಾರು ಎಂದು ಅವರು ಪ್ರಶ್ನಿಸಿದರು. ಮತದಾರ ಪರಿಷ್ಕರಣೆ ಅಕ್ರಮವು ಆಪರೇಷನ್‌ ಕಮಲ ಭ್ರಷ್ಟಾಚಾರದ ಮುಂದುವರಿದ ಭಾಗ. ಚುನಾವಣೆಯಲ್ಲಿ ಗೆಲ್ಲೋಕೆ ಏನೆಲ್ಲ ಆಟ ಆಡ್ತಾರೆ ಅನ್ನೋದಕ್ಕೆ ಇದೂ ಒಂದು ಉದಾಹರಣೆ. ಬಿಜೆಪಿಯವರೂ ಏನೂ ಬೇಕಾದ್ರೂ ಮಾಡುತ್ತಾರೆ. ಆಪರೇಷನ್‌ ಕಮಲ ಹುಟ್ಟುಹಾಕಿದ್ದು ಯಡಿಯೂರಪ್ಪ ಎಂದರು.

Latest Videos
Follow Us:
Download App:
  • android
  • ios