ಕೆಂಪಣ್ಣ ಆರೋಪ ಬಗ್ಗೆ ಆಯೋಗ ಸ್ವಯಂ ತನಿಖೆ ಮಾಡಲಿ: ರಾಜ್ಯ ಬಿಜೆಪಿ ಒತ್ತಾಯ
ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ಗುತ್ತಿಗೆದಾರರ ಸಂಘದ ಅಧ್ಯಕ್ಷ ಕೆಂಪಣ್ಣ ಮಾಡಿರುವ ಶೇ.40 ಕಮಿಷನ್ ಆರೋಪ ಸಂಬಂಧ ನ್ಯಾ.ನಾಗಮೋಹನದಾಸ್ ಸಮಿತಿಯು ಸ್ವಯಂಪ್ರೇರಿತ ತನಿಖೆಯನ್ನು ಕೈಗೆತ್ತಿಕೊಳ್ಳಬೇಕು ಎಂದು ರಾಜ್ಯ ಬಿಜೆಪಿ ಒತ್ತಾಯಿಸಿದೆ.
ಬೆಂಗಳೂರು (ಫೆ.09): ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ಗುತ್ತಿಗೆದಾರರ ಸಂಘದ ಅಧ್ಯಕ್ಷ ಕೆಂಪಣ್ಣ ಮಾಡಿರುವ ಶೇ.40 ಕಮಿಷನ್ ಆರೋಪ ಸಂಬಂಧ ನ್ಯಾ.ನಾಗಮೋಹನದಾಸ್ ಸಮಿತಿಯು ಸ್ವಯಂಪ್ರೇರಿತ ತನಿಖೆಯನ್ನು ಕೈಗೆತ್ತಿಕೊಳ್ಳಬೇಕು ಎಂದು ರಾಜ್ಯ ಬಿಜೆಪಿ ಒತ್ತಾಯಿಸಿದೆ. ಗುರುವಾರ ಬಿಜೆಪಿ ಕಚೇರಿಯಲ್ಲಿ ಸುದ್ದಿಗಾರರ ಜತೆ ಮಾತನಾಡಿದ ಮುಖ್ಯ ವಕ್ತಾರ ಅಶ್ವತ್ಥನಾರಾಯಣ, ಬಿಜೆಪಿ ಸರ್ಕಾರದ ಅವ್ಯವಹಾರ ಕುರಿತು ತನಿಖೆ ಮಾಡಿಸುವುದಾಗಿ ಕಾಂಗ್ರೆಸ್ ಸರ್ಕಾರ ಹೇಳಿದೆ. ನ್ಯಾ.ನಾಗಮೋಹನ್‍ದಾಸ್ ಅವರು ಕೆಂಪಣ್ಣ ಮಾಡಿದ ಆರೋಪಗಳ ಬಗ್ಗೆ ಸ್ವಯಂಪ್ರೇರಿತ ತನಿಖೆ ಮಾಡಬೇಕು ಎಂದು ಆಗ್ರಹಿಸಿದರು.
ಈ ಹಿಂದೆ ಬಿಜೆಪಿ ಸರ್ಕಾರದ ವಿರುದ್ಧ ಆರೋಪ ಮಾಡಿದ್ದ ಗುತ್ತಿಗೆದಾರರ ಸಂಘದ ಅಧ್ಯಕ್ಷ ಕೆಂಪಣ್ಣ ಅವರು ಈಗ ನೇರವಾಗಿ ಕಾಂಗ್ರೆಸ್ ಸರ್ಕಾರದಲ್ಲಿ ಅಧಿಕಾರಿಗಳು ಶೇ.40ಕ್ಕಿಂತ ಹೆಚ್ಚು ಹಣವನ್ನು ಗುತ್ತಿಗೆದಾರರಿಂದ ಕೇಳುತ್ತಿರುವುದಾಗಿ ಹೇಳಿದ್ದಾರೆ. ಸರ್ಕಾರದ ವಿರುದ್ಧ ನೇರ ಆರೋಪವನ್ನು ಕೆಂಪಣ್ಣ ಮಾಡುತ್ತಿದ್ದಾರೆ. ಕೆಂಪಣ್ಣನವರ ಆರೋಪಗಳಿಗೆ ಮುಖ್ಯಮಂತ್ರಿಗಳು ಉತ್ತರ ಕೊಡಬೇಕು ಎಂದರು. ಕಾಂಗ್ರೆಸ್ ಸರ್ಕಾರದ ಬಗ್ಗೆ ಕೇವಲ ಮೂರು ತಿಂಗಳಲ್ಲಿ ಆಡಳಿತ ವಿರೋಧಿ ಅಲೆ ಎದ್ದಿದೆ.
ದೇಶದಲ್ಲಿ ಗಾಂಧಿ ಬಿಟ್ಟರೆ ಬರೀ ಸತ್ಯ ಹೇಳೋದು ಎಚ್‌ಡಿಕೆ ಒಬ್ಬರೇ: ಸಚಿವ ಸಚಿವ ಚಲುವರಾಯಸ್ವಾಮಿ
ಆಡಳಿತ ಪಕ್ಷದ ಸಚಿವರು, ಶಾಸಕರು ಮುಖ್ಯಮಂತ್ರಿಗಳ ವಿರುದ್ಧ ಮತ್ತು ಸರ್ಕಾರದ ವಿರುದ್ಧ ಹೈಕಮಾಂಡ್‌ಗೆ ಪತ್ರ ಬರೆದು ದೂರು ನೀಡಿದ್ದಾರೆ. ಈ ಮೂಲಕ ಸರ್ಕಾರದಲ್ಲಿ ಭಿನ್ನಮತ ಕಂಡುಬಂದಿದೆ. ಆಡಳಿತ ಪಕ್ಷದ ಶಾಸಕರಿಗೆ ಅಭಿವೃದ್ಧಿ ಕಾಮಗಾರಿಗಳಿಗೆ ನೀಡಲು ಈ ಸರ್ಕಾರದಲ್ಲಿ ಹಣ ಇಲ್ಲ. ರಾಜಸ್ವ ತೆರಿಗೆ ಸಂಗ್ರಹದಲ್ಲೂ ಸರ್ಕಾರದ ಹಿಂದೆ ಬಿದ್ದಿದೆ ಎಂದು ಆರೋಪಿಸಿದರು. ಈ ಹಿಂದೆ ತೆಲಂಗಾಣ ಚುನಾವಣೆ ಸಂದರ್ಭದಲ್ಲಿ ಆದಾಯ ತೆರಿಗೆ ಇಲಾಖೆ, ಜಾರಿ ನಿರ್ದೇಶನಾಲಯವು ದಾಳಿ ಮಾಡಿದಾಗ ನೂರಾರು ಕೋಟಿರು. ಪತ್ತೆಯಾಗಿತ್ತು. ಕರ್ನಾಟಕದ ಗುತ್ತಿಗೆದಾರರ ಹಣವನ್ನು ತೆಲಂಗಾಣದಲ್ಲಿ ಹಂಚಿಕೆ ಮಾಡಲಾಗಿತ್ತು ಎಂದರು.
ಅಮಿತ್ ಶಾ ಬಿಜೆಪಿ ಸಭೆ ದಿಢೀರ್ ರದ್ದು: ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಫೆ.10ರ ಶನಿವಾರ ರಾಜ್ಯ ಬಿಜೆಪಿ ನಾಯಕರೊಂದಿಗೆ ಲೋಕಸಭಾ ಚುನಾವಣೆ ಸಿದ್ಧತೆ ಕುರಿತು ನಡೆಸಬೇಕಿದ್ದ ಸಭೆ ರದ್ದಾಗಿದೆ. ಆದರೆ, ಅಮಿತ್ ಶಾ ಅವರ ಮೈಸೂರಿನ ಸುತ್ತೂರು ಭೇಟಿ ನಿಗದಿಯಂತೆ ಫೆ.11ರಂದು ನಡೆಯಲಿದೆ ಎಂದು ಪಕ್ಷದ ಮೂಲಗಳು ತಿಳಿಸಿವೆ. ಅಮಿತ್ ಶಾ ಅವರು ಸುತ್ತೂರು ಜಾತ್ರಾ ಮಹೋತ್ಸವದಲ್ಲಿ ಪಾಲ್ಗೊಳ್ಳುವ ಸಲುವಾಗಿ ರಾಜ್ಯಕ್ಕೆ ಭೇಟಿ ನೀಡುವುದು ನಿರ್ಧಾರವಾದ ಬೆನ್ನಲ್ಲೇ ಪಕ್ಷದ ಸಭೆಗಳನ್ನು ಆಯೋಜಿಸಲಾಗಿತ್ತು.
ಸಿಎಂ ಸಿದ್ದರಾಮಯ್ಯ ಬಳಿ ಹಲವು ಸುಳ್ಳಿನ ಅಸ್ತ್ರಗಳಿವೆ: ಸಿ.ಟಿ.ರವಿ ಕಿಡಿ
ರಾಜ್ಯದ ಹಿರಿಯ ನಾಯಕರನ್ನು ಒಳಗೊಂಡ ಕೋರ್ ಕಮಿಟಿ ಸಭೆ ಮತ್ತು ಲೋಕಸಭಾ ಕ್ಷೇತ್ರಗಳ ಕ್ಲಸ್ಟರ್‌ಗಳ ಉಸ್ತುವಾರಿಗಳ ಸಭೆ ನಡೆಸಲು ನಿರ್ಧರಿಸಲಾಗಿತ್ತು. ಈ ಬಗ್ಗೆ ಪಕ್ಷದ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರು ಅಧಿಕೃತ ಮಾಹಿತಿಯನ್ನೂ ನೀಡಿದ್ದರು. ಇದೀಗ ಬಿಜೆಪಿ ಸಭೆಗಳ ರದ್ದತಿಗೆ ನಿರ್ದಿಷ್ಟ ಕಾರಣ ತಿಳಿದು ಬಂದಿಲ್ಲ. ಅಮಿತ್ ಶಾ ಅವರ ಸಮಯದ ಅಭಾವದ ಕಾರಣ ಇರಬಹುದು ಎನ್ನಲಾಗಿದೆ.