Asianet Suvarna News Asianet Suvarna News

ಅರಣ್ಯ ವ್ಯಾಪ್ತಿಯಲ್ಲಿ ಇಲ್ಲದ ವಸತಿ ಪ್ರದೇಶ ಕಂದಾಯ ಗ್ರಾಮಗಳಾಗಿ ಪರಿವರ್ತನೆ: ಕೃಷ್ಣ ಬೈರೇಗೌಡ

ರಾಜ್ಯದಲ್ಲಿ ಅರಣ್ಯ ಪ್ರದೇಶ ಹೊರತುಪಡಿಸಿ ಖಾಸಗಿ ಮತ್ತು ಸರ್ಕಾರಿ ಭೂಮಿಯಲ್ಲಿರುವ ಅರ್ಹ ವಸತಿ ಪ್ರದೇಶಗಳನ್ನು ಕಂದಾಯ ಗ್ರಾಮಗಳನ್ನಾಗಿ ಘೋಷಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ ತಿಳಿಸಿದರು. 
 

Conversion of non forest residential areas into revenue villages Says Krishna Byre Gowda gvd
Author
First Published Feb 15, 2024, 8:41 PM IST

ವಿಧಾನಪರಿಷತ್‌ (ಫೆ.15): ರಾಜ್ಯದಲ್ಲಿ ಅರಣ್ಯ ಪ್ರದೇಶ ಹೊರತುಪಡಿಸಿ ಖಾಸಗಿ ಮತ್ತು ಸರ್ಕಾರಿ ಭೂಮಿಯಲ್ಲಿರುವ ಅರ್ಹ ವಸತಿ ಪ್ರದೇಶಗಳನ್ನು ಕಂದಾಯ ಗ್ರಾಮಗಳನ್ನಾಗಿ ಘೋಷಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ ತಿಳಿಸಿದರು. ಬಿಜೆಪಿಯ ಶಾಂತಾರಾಮ್‌ ಬುಡ್ನ ಸಿದ್ದಿ ಅವರು ಗೌಳಿ ಸಮುದಾಯದವರು ವಾಸಿಸುವ ಗೌಳಿ ವಾಡಾಗಳನ್ನು ಕಂದಾಯ ಗ್ರಾಮಗಳನ್ನಾಗಿ ಮಾಡುವುದು ಹಾಗೂ ಹೈನುಗಾರಿಕೆಗೆ ಪ್ರೋತ್ಸಾಹಿಸಲು ಜಾನುವಾರುಗಳಿಗೆ ಸಮರ್ಪಕವಾಗಿ ಮೇವು ಸಿಗುವಂತೆ ಮಾಡಲು ಯೋಜನೆ ರೂಪಿಸುವಂತೆ ಸರ್ಕಾರದ ಗಮನ ಸೆಳೆದರು. 

ಅದಕ್ಕೆ ಪಶುಸಂಗೋಪನಾ ಸಚಿವ ವೆಂಕಟೇಶ್‌ ಪರವಾಗಿ ಉತ್ತರಿಸಿದ ಕೃಷ್ಣ ಬೈರೇಗೌಡ, ರಾಜ್ಯದಲ್ಲಿ ಅರಣ್ಯ ಪ್ರದೇಶ ಹೊರತುಪಡಿಸಿ ಖಾಸಗಿ ಮತ್ತು ಸರ್ಕಾರಿ ಭೂಮಿಯಲ್ಲಿರುವ ಅರ್ಹ ವಸತಿ ಪ್ರದೇಶಗಳನ್ನು ಕಂದಾಯ ಗ್ರಾಮಗಳನ್ನಾಗಿ ಘೋಷಿಸಲು ಕ್ರಮ ಕೈಗೊಳ್ಳಲಾಗುತ್ತಿದೆ. ಈ ಹಿಂದೆ ರಾಜ್ಯದಲ್ಲಿ 3,294 ವಸತಿ ಪ್ರದೇಶಗಳ ಪಟ್ಟಿ ಮಾಡಿದ್ದು, ಅದರಲ್ಲಿ 3 ಸಾವಿರ ವಸತಿ ಪ್ರದೇಶಗಳನ್ನು ಕಂದಾಯ ಗ್ರಾಮವಾಗಿ ಪರಿವರ್ತಿಸಲಾಗಿದೆ. ಅದರ ಜತೆಗೆ ಹೆಚ್ಚುವರಿಯಾಗಿ 850 ವಸತಿ ಪ್ರದೇಶಗಳ ಪಟ್ಟಿ ಸಿದ್ಧಪಡಿಸಲಾಗಿದ್ದು, ಅವುಗಳನ್ನೂ ಕಂದಾಯ ಗ್ರಾಮಗಳನ್ನಾಗಿ ಮಾಡಲಾಗುವುದು ಎಂದು ವಿವರಿಸಿದರು. 

ಬೆಂಗಳೂರು: ಬೈಯಪ್ಪನಹಳ್ಳಿ ಫ್ಲೈಓವರ್‌ ವೆಚ್ಚ ಭಾರಿ ಹೆಚ್ಚಳ!

ಹಳೇ ಮತ್ತು ಹೊಸ ಪಟ್ಟಿಯಲ್ಲಿ ಗೌಳಿ ವಾಡಾಗಳು ಇಲ್ಲದಿರುವ ಬಗ್ಗೆ ಪರಿಶೀಲಿಸಲಾಗುವುದು. ಆ ವಾಡಾಗಳು ಅರಣ್ಯ ಪ್ರದೇಶದಲ್ಲಿಲ್ಲದಿದ್ದರೆ ಅವುಗಳನ್ನು ಕಂದಾಯ ಗ್ರಾಮಗಳೆಂದು ಘೋಷಿಸಲಾಗುವುದು. ಜತೆಗೆ ಗೌಳಿ ಸಮುದಾಯದವರ ಹೈನುಗಾರಿಕೆಗೆ ಅನುಕೂಲವಾಗುವಂತೆ ಯೋಜನೆ ರೂಪಿಸಲು ಸಂಬಂಧಪಟ್ಟ ಸಚಿವರು ಹಾಗೂ ಅಧಿಕಾರಿಗಳೊಂದಿಗೆ ಚರ್ಚಿಸಲಾಗುವುದು ಎಂದು ಭರವಸೆ ನೀಡಿದರು.

ಜಮ್ಮಾಬಾಣೆ ಭೂಮಿ ಸರ್ವೆ ಮಾಡಿ, ಪಹಣಿ ಒದಗಿಸಲು ಮುಂದಾಗಿ: ಜಿಲ್ಲೆಯಲ್ಲಿ ಹಲವು ದಶಕಗಳಿಂದ ಜಮ್ಮಾಬಾಣೆ ಭೂಮಿ ಸರ್ವೆ ಮಾಡಲು ಬಾಕಿ ಇದ್ದು, ಆ ನಿಟ್ಟಿನಲ್ಲಿ ಸಾಗುವಳಿ ಮಾಡುವವರಿಗೆ ಆರ್‌ಟಿಸಿ (ಪಹಣಿ) ಮಾಡಿಕೊಡಲು ಮುಂದಾಗಿದ್ದು, ಆ ನಿಟ್ಟಿನಲ್ಲಿ ಅಧಿಕಾರಿಗಳು ಸರ್ವೆ ಕಾರ್ಯ ಕೈಗೊಳ್ಳಲು ಮುಂದಾಗುವಂತೆ ಕಂದಾಯ ಸಚಿವ ಕೃಷ್ಣ ಬೈರೇಗೌಡ ಸೂಚಿಸಿದ್ದಾರೆ. ನಗರದ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಕಂದಾಯ ಇಲಾಖೆಗೆ ಸಂಬಂಧಿಸಿದಂತೆ ಹಲವು ಮಹತ್ವದ ವಿಷಯಗಳ ಕುರಿತು ಸುದೀರ್ಘವಾಗಿ ಸೋಮವಾರ ಪ್ರಗತಿ ಪರಿಶೀಲನೆ ನಡೆಸಿದರು.

ಜಮ್ಮಾ ಭೂಮಿ ಹಿಡುವಳಿದಾರರಿಗೆ ಆರ್‌ಟಿಸಿ ಇಲ್ಲದಿರುವುದರಿಂದ ಸಾಲ ಸೌಲಭ್ಯ ಹಾಗೂ ಸರ್ಕಾರದ ಸೌಲಭ್ಯ ಪಡೆಯಲು ಸಾಧ್ಯವಾಗುತ್ತಿಲ್ಲ. ಆದ್ದರಿಂದ ಕೃಷಿ ಮಾಡುವ ಕುಟುಂಬದವರಿಗೆ ಆರ್‌ಟಿಸಿ ಮಾಡಿಕೊಡಬೇಕಿದ್ದು, ಆ ನಿಟ್ಟಿನಲ್ಲಿ ಸರ್ವೇ ಕಾರ್ಯವನ್ನು ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸ್ಪಷ್ಟ ನಿರ್ದೇಶನ ನೀಡಿದರು. ಕೊಡಗು ಜಿಲ್ಲೆಯಲ್ಲಿ 25 ಸಾವಿರ ಜನರು ಜಮ್ಮಬಾಣೆ ಭೂಮಿಯಲ್ಲಿ ಕೃಷಿ ಮಾಡುತ್ತಿದ್ದು, ಪಟ್ಟೆದಾರ ಕುಟುಂಬದ ಒಬ್ಬರ ಹೆಸರಿಗೆ ಮಾತ್ರ ಭೂಮಿ ಇದ್ದು, ಆ ಕುಟುಂಬದ ಇತರರಿಗೂ ಆರ್‌ಟಿಸಿ ಮಾಡಬೇಕಿದೆ. ಆ ನಿಟ್ಟಿನಲ್ಲಿ ಸರ್ವೇ ಕಾರ್ಯ ಕೈಗೊಳ್ಳುವಂತೆ ನಿರ್ದೇಶನ ನೀಡಿದರು.

ಆಡಳಿತ ಸುಧಾರಣೆಗೆ ಗ್ರಾಪಂಗಳಿಗೆ ರೇಟಿಂಗ್‌ ವ್ಯವಸ್ಥೆ: ಸಚಿವ ಪ್ರಿಯಾಂಕ್‌ ಖರ್ಗೆ

ಜಮ್ಮಾಬಾಣೆ ಭೂಮಿ ಸಂಬಂಧ ತಕರಾರು ಇಲ್ಲದಿದ್ದಲ್ಲಿ ನೇರವಾಗಿ ಸರ್ವೆ ಮಾಡಬಹುದಾಗಿದೆ. ತಕರಾರು ಇದ್ದಲ್ಲಿ ಗ್ರಾಮ ಸಭೆಯಲ್ಲಿ ಇಟ್ಟು ಗ್ರಾಮಸ್ಥರ ಸಹಕಾರ ಪಡೆಯಬಹುದಾಗಿದೆ. ಇದೊಂದು ಆಂದೋಲನ ರೂಪದಲ್ಲಿ ಕೈಗೊಳ್ಳಬೇಕಿದ್ದು, ತಹಸೀಲ್ದಾರರು ಮತ್ತು ಭೂ ದಾಖಲೆಗಳ ಸಹಾಯಕ ನಿರ್ದೇಶಕರ ತಂಡವು ಸಮರೋಪಾದಿಯಲ್ಲಿ ಕೈಗೊಳ್ಳಬೇಕು ಎಂದರು.

Follow Us:
Download App:
  • android
  • ios