Asianet Suvarna News Asianet Suvarna News

ದೋಷ ಸರಿಪಡಿಸಿ ಜಾತಿ ಗಣತಿ ವರದಿ ಸ್ವೀಕಾರ: ಸಿಎಂ ಸಿದ್ದರಾಮಯ್ಯ

ರಾಜ್ಯ ಹಿಂದುಳಿದ ವರ್ಗಗಳ ಶಾಶ್ವತ ಆಯೋಗವು ಸಿದ್ಧಪಡಿಸಿರುವ ಜಾತಿವಾರು ಸಾಮಾಜಿಕ ಹಾಗೂ ಶೈಕ್ಷಣಿಕ (ಜಾತಿ ಗಣತಿ) ವರದಿಯನ್ನು ಕೆಲವು ತಾಂತ್ರಿಕ ದೋಷಗಳನ್ನು ಸರಿಪಡಿಸಿದ ನಂತರ ರಾಜ್ಯ ಸರ್ಕಾರ ಸ್ವೀಕರಿಸಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.

Correct Error Caste Census Report Acceptance Says CM Siddaramaiah gvd
Author
First Published Jul 3, 2023, 3:20 AM IST | Last Updated Jul 3, 2023, 3:20 AM IST

ಬೆಂಗಳೂರು (ಜು.03): ರಾಜ್ಯ ಹಿಂದುಳಿದ ವರ್ಗಗಳ ಶಾಶ್ವತ ಆಯೋಗವು ಸಿದ್ಧಪಡಿಸಿರುವ ಜಾತಿವಾರು ಸಾಮಾಜಿಕ ಹಾಗೂ ಶೈಕ್ಷಣಿಕ (ಜಾತಿ ಗಣತಿ) ವರದಿಯನ್ನು ಕೆಲವು ತಾಂತ್ರಿಕ ದೋಷಗಳನ್ನು ಸರಿಪಡಿಸಿದ ನಂತರ ರಾಜ್ಯ ಸರ್ಕಾರ ಸ್ವೀಕರಿಸಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ. ಯಶವಂತಪುರ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಕೇತೋಹಳ್ಳಿಯಲ್ಲಿ ಶ್ರೀ ಕಾಗಿನೆಲೆ ಮಹಾಸಂಸ್ಥಾನ ಕನಕ ಗುರುಪೀಠ ಬೆಂಗಳೂರು ಶಾಖಾ ಮಠದ ಭೂಮಿ ಪೂಜೆ ಮತ್ತು ನೂತನ ಸಚಿವ-ಶಾಸಕರ ಅಭಿನಂದನಾ ಸಮಾರಂಭದಲ್ಲಿ ಅವರು ಮಾತನಾಡಿದರು.

ಸಮಾಜದಲ್ಲಿ ಜಾತಿ ವ್ಯವಸ್ಥೆಯ ಕಾರಣಕ್ಕೆ ಅನ್ಯಾಯಕ್ಕೆ ಒಳಪಟ್ಟು ಅವಕಾಶ ವಂಚಿತರಾಗಿ ಆರ್ಥಿಕ, ಸಾಮಾಜಿಕ ಮತ್ತು ರಾಜಕೀಯ ವ್ಯವಸ್ಥೆಗೆ ಬಲಿ ಪಶುಗಳಾಗಿರುವವರ ಏಳಿಗೆಗೆ ಜಾತಿಗಣತಿ ವರದಿ ಸಹಕಾರಿಯಾಗಲಿದೆ. ಸಮಾಜದ ತಾರತಮ್ಯ ನಿವಾರಣೆಗೆ ಈ ರೀತಿಯ ಗಣತಿ ಮತ್ತು ಅಧ್ಯಯನಗಳು ಅಗತ್ಯ. ಜೆಡಿಎಸ್‌-ಕಾಂಗ್ರೆಸ್‌ ಅವಧಿಯಲ್ಲಿ ಮುಖ್ಯಮಂತ್ರಿಯಾಗಿದ್ದ ಕುಮಾರಸ್ವಾಮಿ ಅವರೇ ಜಾತಿಗಣತಿಯನ್ನು ಪಡೆಯಬಾರದೆಂದು ಆಗ ಸಚಿವರಾಗಿದ್ದ ಪುಟ್ಟರಂಗಶೆಟ್ಟಿಗೆ ಹೇಳಿದ್ದರು. ಜಾತಿ ಗಣತಿ ವರದಿ ಬಹಿರಂಗವಾಗಿದೆ ಎಂಬುದಾಗಿ ವಿರೋಧ ಪಕ್ಷದವರು ಸುಳ್ಳು ಸುದ್ದಿ ಹಬ್ಬಿಸುತ್ತಿದ್ದಾರೆ. ಯಾರು ಏನೇ ಹೇಳಿದರು ಕೆಲವು ತಾಂತ್ರಿಕ ದೋಷಗಳನ್ನು ಸರಿಪಡಿಸಿದ ನಂತರ ಜಾತಿ ಗಣತಿ ವರದಿಯನ್ನು ನಮ್ಮ ಸರ್ಕಾರ ಸ್ವೀಕರಿಸಲಿದೆ ಎಂದು ಭರವಸೆ ನೀಡಿದರು.

ಸೈಬರ್‌ ಕ್ರೈಂ ಹಾಗೂ ಫೇಕ್‌ ನ್ಯೂಸ್‌ ತಡೆಗಟ್ಟಲು ರೂಪುರೇಷೆಗೆ ಸಿದ್ಧತೆ: ಸಚಿವ ಪರಮೇಶ್ವರ್‌

ಎಷ್ಟೇ ಕಷ್ಟ ಬಂದರೂ ಐದು ಗ್ಯಾರಂಟಿ ಜಾರಿ: ನಮ್ಮ ಸರ್ಕಾರ ಘೋಷಣೆ ಮಾಡಿರುವ ಐದು ಗ್ಯಾರಂಟಿ ಯೋಜನೆಗಳನ್ನು ಎಷ್ಟೇ ಕಷ್ಟಬಂದರೂ ಜಾರಿ ಮಾಡಿಯೇ ತೀರುತ್ತೇವೆ. ವಿರೋಧ ಪಕ್ಷದವರು ಎಷ್ಟೇ ಅಪಪ್ರಚಾರ ಮಾಡಿದರೂ ಈ ವರ್ಷದ ಬಜೆಟ್‌ನಲ್ಲೇ ಐದೂ ಘೋಷಣೆಗಳಿಗೂ ಹಣ ಕೊಡುತ್ತೇವೆ ಎಂದು ಇದೇ ವೇಳೆ ಸಿದ್ದರಾಮಯ್ಯ ಸ್ಪಷ್ಟಪಡಿಸಿದರು.

ನಮ್ಮ ಐದೂ ಘೋಷಣೆಗಳು ಜಾತಿ-ಧರ್ಮ ಮೀರಿದವುಗಳು. ಸರ್ವ ಜನಾಂಗದ ಬಡವರು ಮತ್ತು ಮಧ್ಯಮ ವರ್ಗದವರು ಬಹಳ ಸಂಕಷ್ಟದಲ್ಲಿದ್ದಾರೆ. ನಾನು ಅಧಿಕಾರದಲ್ಲಿರುವವರೆಗೂ ಶೋಷಿತ, ದಲಿತ ಹಾಗೂ ಅಲ್ಪಸಂಖ್ಯಾತ ಸಮುದಾಯಗಳು ಸೇರಿದಂತೆ ಎಲ್ಲಾ ಜಾತಿಯ ಬಡವರ ಏಳಿಗೆಗೆ ಶ್ರಮಿಸುತ್ತೇನೆ. ಅವರ ಸಂಕಷ್ಟನಿವಾರಣೆಗೆ ಈ ಐದು ಘೋಷಣೆಗಳನ್ನು ಈಡೇರಿಸುತ್ತೇವೆ. ನಮ್ಮ ಸರ್ಕಾರ ನುಡಿದಂತೆ ನಡೆದು ಜನರ ನಿರೀಕ್ಷೆಗೆ ತಕ್ಕಂತೆ ಕಾರ್ಯನಿರ್ವಹಿಸುತ್ತದೆ ಎಂದರು.

ಜೆಡಿಎಸ್‌ನಿಂದ ಹಣ ಪಡೆದು ಪಕ್ಷ ವಿರೋಧಿ ಚಟುವಟಿಕೆ: ಸಚಿವ ಚಲುವರಾಯಸ್ವಾಮಿ

ನಾನು ಮತ್ತೆ ಚುನಾವಣೆಗೆ ನಿಲ್ಲುವುದಿಲ್ಲ. ಕೊನೆಯವರೆಗೂ ರಾಜಕಾರಣದಲ್ಲಿ ಕ್ರಿಯಾಶೀಲವಾಗಿರುತ್ತೇನೆ. ಬಡವರ ಪರ ರಾಜಕಾರಣ ಹಾಗೂ ಹೋರಾಟ ಮುಂದುವರೆಸುತ್ತೇನೆ.
- ಮುಖ್ಯಮಂತ್ರಿ ಸಿದ್ದರಾಮಯ್ಯ

Latest Videos
Follow Us:
Download App:
  • android
  • ios