ಪಹಲ್ಗಾಂ ಭಯೋತ್ಪಾದಕ ದಾಳಿಗೆ ಸಂಬಂಧಿಸಿದಂತೆ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಕೈಗೊಳ್ಳುತ್ತಿರುವ ಎಲ್ಲಾ ಕ್ರಮಗಳಿಗೂ ಸಂಪೂರ್ಣ ಬೆಂಬಲ ನೀಡುವುದಾಗಿ ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷ ಹಾಗೂ ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡರು ಘೋಷಿಸಿದ್ದಾರೆ.
ನವದೆಹಲಿ (ಮೇ.07): ಪಹಲ್ಗಾಂ ಭಯೋತ್ಪಾದಕ ದಾಳಿಗೆ ಸಂಬಂಧಿಸಿದಂತೆ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಕೈಗೊಳ್ಳುತ್ತಿರುವ ಎಲ್ಲಾ ಕ್ರಮಗಳಿಗೂ ಸಂಪೂರ್ಣ ಬೆಂಬಲ ನೀಡುವುದಾಗಿ ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷ ಹಾಗೂ ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡರು ಘೋಷಿಸಿದ್ದಾರೆ. ನವದೆಹಲಿಯಲ್ಲಿ ಮಂಗಳವಾರ ಬೆಳಗ್ಗೆ ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿ, ಪೆಹಲ್ಗಾಂನಲ್ಲಿ ಹಿಂದೂಗಳ ಹತ್ಯೆಗೈದವರಿಗೆ ತಕ್ಕ ಶಾಸ್ತಿ ಆಗಲೇಬೇಕು. ರಕ್ಷಣಾ ಪಡೆಗಳಿಗೆ ಮೋದಿ ಮುಕ್ತ ಸ್ವಾತಂತ್ರ್ಯ ನೀಡಿದ್ದಾರೆ. ಇತಿಹಾಸದಲ್ಲಿ ಇದೇ ಮೊದಲ ಬಾರಿಗೆ ದೇಶದ ಪ್ರಧಾನಿ ಮೋದಿ ದಿಟ್ಟ ನಿರ್ಧಾರ ಮಾಡಿದ್ದಾರೆ. ಪಾಕಿಸ್ತಾನ ಪ್ರೇರಿತ ಉಗ್ರರನ್ನು ಸದೆಬಡಿಯುವವರೆಗೆ ವಿರಮಿಸುವುದಿಲ್ಲ ಎಂದು ಮೋದಿ ಹೇಳಿದ್ದಾರೆ. ನಾನು, ನಮ್ಮ ಪಕ್ಷ, ಇಡೀ ದೇಶ ಪ್ರಧಾನಿ ಮೋದಿ ಜೊತೆಗಿರುತ್ತೇವೆಂದು ದೇವೇಗೌಡರು ಹೇಳಿದರು.
ಜಾತಿ ಗಣತಿ: ನರೇಂದ್ರ ಮೋದಿಯವರ ನೇತೃತ್ವದ ಕೇಂದ್ರ ಸರಕಾರ ಮುಂದಿನ ಜನಗಣತಿ ಜೊತೆಯಲ್ಲಿಯೇ ಜಾತಿ ಗಣತಿ ಮಾಡುತ್ತಿರುವುದು ಸ್ವಾಗತಾರ್ಹ ಎಂದು ಮಾಜಿ ಪ್ರಧಾನಿ ದೇವೇಗೌಡರು ಹೇಳಿದರು. ಕರ್ನಾಟಕದ ಜಾತಿಗಣತಿಗೆ ಸಿದ್ದರಾಮಯ್ಯ ಅವರ ಸಂಪುಟದಲ್ಲಿಯೇ ಸಹಮತ ಇಲ್ಲ. ಈ ಬಗ್ಗೆ ಸಿದ್ದರಾಮಯ್ಯ ಅವರಿಗೆ ನಾನು ಪತ್ರ ಬರೆದಿದ್ದೆ. ನನಗೆ ಅವರು ಈವರೆಗೆ ಉತ್ತರ ಕೊಟ್ಟಿಲ್ಲ ಎಂದು ಹೇಳಿದರು. ಜನರು ಎಲ್ಲವನ್ನೂ ಗಮನಿಸುತ್ತಿದ್ದಾರೆ ಎಂದು ಅವರು ಹೇಳಿದರು.
ಮೋದಿಯಿಂದ ಸಕಲ ಕ್ರಮ: ಕಾಶ್ಮೀರದ ಪಹಲ್ಗಾಂಗೆ ತೆರಳಿದ್ದ ಪ್ರವಾಸಿಗರನ್ನು ನಿಷ್ಕರುಣೆಯಿಂದ ಹತ್ಯೆ ಮಾಡಿದ ಉಗ್ರಗಾಮಿಗಳ ನಾಶ ಮಾಡಲು ಪ್ರಧಾನಮಂತ್ರಿಗಳು ಏನೆಲ್ಲಾ ಕ್ರಮ ತೆಗೆದುಕೊಳ್ಳಬೇಕು ಎಲ್ಲವನ್ನು ತೆಗೆದುಕೊಂಡಿದ್ದಾರೆ ಎಂದು ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರು ತಿಳಿಸಿದರು. ಹಾಸನ ತಾಲೂಕಿನ ದ್ಯಾಪಲಾಪುರದ ದೇವಾಲಯ ಉದ್ಘಾಟನೆಗೆ ಆಗಮಿಸಿದ ವೇಳೆ ಮಾಧ್ಯಮದೊಂದಿಗೆ ಮಾತನಾಡಿದ ಅವರು ಪಹಲ್ಗಾಂನಲ್ಲಿ 28 ಪ್ರವಾಸಿಗರನ್ನು ಹತ್ಯೆ ಮಾಡಿದ್ದಾರೆ.
'ಸೋಲಿನ' ಅಂಬೇಡ್ಕರ್ ಪತ್ರ ಬಿಡುಗಡೆ: ಬಿಜೆಪಿ ವಿರುದ್ಧ ಪ್ರಿಯಾಂಕ್ ಕಿಡಿ
ಇಬ್ಬರು ವಿದೇಶಿಗರು, ನಮ್ಮ ದೇಶದವರು 26 ಜನ. ಹತ್ಯೆ ಮಾಡಿದ ಉಗ್ರಗಾಮಿಗಳ ನಾಶ ಮಾಡಲು ಪ್ರಧಾನಮಂತ್ರಿಗಳು ಏನೆಲ್ಲಾ ಕ್ರಮ ತೆಗೆದುಕೊಳ್ಳಬೇಕೋ ತೆಗೆದುಕೊಂಡಿದ್ದಾರೆ. ಈ ವಿಷಯದಲ್ಲಿ ನನ್ನ ಅನುಭವದಿಂದ ಅಭಿಪ್ರಾಯವನ್ನು ತಿಳಿಸಿದ್ದೇನೆ. ಇದು ಸೂಕ್ಷ್ಮವಾದ ವಿಚಾರ. ಈ ವಿಷಯದಲ್ಲಿ ಏನು ಕ್ರಮ ತೆಗೆದುಕೊಳ್ಳುತ್ತಾರೋ ಅದಕ್ಕೆ ಜೆಡಿಎಸ್‌ನ ಸಂಪೂರ್ಣ ಬೆಂಬಲ ಇದೆ. ಮುಂದೆ ಇಂತಹ ದುಷ್ಕ್ರತ್ಯ ನಡೆಯಬಾರದು. ಅವರಿಗೆ ಪಾಠ ಕಲಿಸಬೇಕು ಎಂದು ಪ್ರಧಾನಮಂತ್ರಿಗಳು ಪ್ರತಿಜ್ಞೆ ಮಾಡಿದ್ದಾರೆ ಅವರ ಹಿಂದೆ ನಾವು ನಿಲ್ಲುತ್ತೇವೆ ಎಂದು ಹೇಳಿದರು.


