Asianet Suvarna News Asianet Suvarna News

ಸಂಕಷ್ಟದಲ್ಲಿರೋ ಜನರ ಪರವಾಗಿ ಮೋದಿಗೆ ವಿಶೇಷ ಮನವಿ ಮಾಡಿಕೊಂಡ ಕುಮಾರಸ್ವಾಮಿ

ಕೊರೋನಾ ಲಾಕ್‌ಡೌನ್‌ನಿಂದಾಗಿ ಸಂಕಷ್ಟದಲ್ಲಿರುವ ಜನರ ಪರವಾಗಿ ಮಾಜಿ ಸಿಎಂ ಎಚ್‌ಡಿ ಕುಮಾರಸ್ವಾಮಿ ಅವರು ಪ್ರಧಾನಿ ನರೇಂದ್ರ ಮೋದಿಗೆ ವಿಶೇಷ ಮನವಿಯೊಂದನ್ನು ಮಾಡಿಕೊಂಡಿದ್ದಾರೆ.

Covid 19 hd kumaraswamy requests pm modi to announce 3 month rent relief
Author
Bengaluru, First Published Apr 12, 2020, 3:18 PM IST

ಬೆಂಗಳೂರು, (ಏ.12): ಕೊರೋನಾ ಲಾಕ್‌ಡೌನ್‌ನಿಂದಾಗಿ ಜನರು ಸಂಕಷ್ಟದಲ್ಲಿದ್ದಾರೆ. ಈ ಹಿನ್ನೆಲೆಯಲ್ಲಿ 3 ತಿಂಗಳ ಬಾಡಿಗೆ ವಿನಾಯಿತಿ ಘೋಷಿಸಿ ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿಗೆ ಮಾಜಿ ಸಿಎಂ ಎಚ್‌ಡಿ ಕುಮಾರಸ್ವಾಮಿ ಮನವಿ ಮಾಡಿಕೊಂಡಿದ್ದಾರೆ.

ಮಾಜಿ ಸಿಎಂ ಕುಮಾರಸ್ವಾಮಿ ಸರಣಿ ಟ್ವೀಟ್ ಮೂಲಕ ನರೇಂದ್ರ ಮೋದಿಗೆ ಆಗ್ರಹಿಸಿದ್ದಾರೆ. 

ಲಾಕ್‌ಡೌನ್ ವಿಸ್ತರಣೆ: ಪಡಿತರ ಚೀಟಿಗೆ ಅರ್ಜಿ ಸಲ್ಲಿಸಿದವರಿಗೂ ಸರ್ಕಾರದಿಂದ ಮಹತ್ವದ ಘೋಷಣೆ

ಈಗಾಗಲೇ ಅನೇಕ ದೇಶಗಳು ಆರ್ಥಿಕ ಮುಗ್ಗಟ್ಟಿನಿಂದ ಬಾಡಿಗೆದಾರರನ್ನು ಕಾಪಾಡಲು ಕೊರೋನಾ ವೈರಸ್ ಸಂಕಟದ ಅವಧಿಗೆ ಬಾಡಿಗೆ ವಿನಾಯಿತಿಯನ್ನು ಘೋಷಿಸಿವೆ.  ದೆಹಲಿಯ ಸರಕಾರ 3 ತಿಂಗಳ ಬಾಡಿಗೆಯನ್ನು ತಾನೇ ಕೊಡುವ ಯೋಜನೆ ಘೋಷಿಸಿದೆ. ಇಡೀ ದೇಶಕ್ಕೆ ಅನ್ವಯವಾಗುವಂತೆ ಮೂರು ತಿಂಗಳು ಬಾಡಿಗೆ ವಿನಾಯಿತಿಯನ್ನು ಪ್ರಧಾನ ಮಂತ್ರಿ ನರೇಂದ್ರ ಮೋದಿ ಘೋಷಿಸಬೇಕೆಂದು ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಮನವಿ ಮಾಡಿಕೊಂಡಿದ್ದಾರೆ.

 ದೆಹಲಿ, ಮುಂಬೈ, ಬೆಂಗಳೂರಿನಂತಹ ನಗರಗಳಲ್ಲಿ ವೃತ್ತಿ ಮಾಡುವ ಹಾಗೂ ಇಲ್ಲಿನ ಸಂಸ್ಥೆಗಳಲ್ಲಿ ಓದುತ್ತಿರುವ ಅನೇಕ ಜನರ ಆರ್ಥಿಕ ಸ್ಥಿತಿ ನಾಜೂಕಾಗಿದೆ. ಇಂತಹ ಸಂದರ್ಭದಲ್ಲಿ ಮನೆ, ಪಿಜಿ, ಹಾಸ್ಟೆಲ್ ಮಾಲೀಕರು ಎಂದಿನಂತೆ ಬಾಡಿಗೆ ವಸೂಲಿಗೆ ಇಳಿಯದೆ ಉದಾರತೆ ತೋರಲಿ. ಸರಕಾರ ಬಾಡಿಗೆ ವಿನಾಯಿತಿ ಘೋಷಿಸಿ ಜನಸಾಮಾನ್ಯನ ಕಷ್ಟಗಳಿಗೆ ಸ್ಪಂದಿಸಬೇಕು ಎಂದು ಆಗ್ರಹಿಸಿದರು.

ಆರ್ಥಿಕ ಚಟುವಟಿಕೆಯೇ ಸಮಗ್ರವಾಗಿ ಸ್ಥಗಿತಗೊಂಡ ಈ ದಿನಗಳಲ್ಲಿ ಎಂದಿನಂತೆ ಪ್ರತಿ ತಿಂಗಳು ಮನೆ ಬಾಡಿಗೆಯನ್ನು ಕೊಡಲೇಬೇಕು ಅಂತ ಮನೆ ಮಾಲೀಕರು ಪಟ್ಟು ಹಿಡಿದರೆ ಆರ್ಥಿಕ ಹೊರೆಯನ್ನು ತಾಳಲಾರದ ಬಾಡಿಗೆದಾರ ಇನ್ನೊಂದು ಮನೆ ಹುಡುಕಿಕೊಂಡು ಹೋಗುವ ಸ್ಥಿತಿಯೂ ಇಲ್ಲವಾದ್ದರಿಂದ, ಕೇಂದ್ರ ಸರಕಾರ ಈ ಕೂಡಲೇ ಬಾಡಿಗೆ ವಿನಾಯಿತಿ ಯೋಜನೆಯನ್ನು ಘೋಷಿಸಬೇಕು ಎಂದು ಒತ್ತಾಯಿಸಿದ್ದಾರೆ.

Follow Us:
Download App:
  • android
  • ios