ಬೆಂಗಳೂರು (ನ.04):  ರಾಜ್ಯ ವಿಧಾನಸಭಾ ಚುನಾವಣೆಗೆ ನಡೆದ ಮತದಾನದಲ್ಲಿ ಇದೇ ಮೊದಲ ಬಾರಿಗೆ ಕೋವಿಡ್‌ ಸೋಂಕಿತರಿಗೆ ಮತದಾನ ಮಾಡಲು ಅವಕಾಶ ನೀಡಲಾಗಿದ್ದು, ಆರ್‌.ಆರ್‌.ನಗರ ಮತ್ತು ಶಿರಾ ವಿಧಾನಸಭಾ ಕ್ಷೇತ್ರದಲ್ಲಿ ಒಟ್ಟು 147 ಸೋಂಕಿತರು ಮತ ಚಲಾಯಿಸಿದ್ದಾರೆ.

ಆರ್‌.ಆರ್‌.ನಗರ ಕ್ಷೇತ್ರದಲ್ಲಿ 148 ಮಂದಿಯನ್ನು ಕೊರೋನಾ ಸೋಂಕಿತರು ಎಂದು ಗುರುತಿಸಲಾಗಿದ್ದು, ಕೇವಲ 4 ಮಂದಿ ಮಾತ್ರ ಕೊರೋನಾ ಸೋಂಕಿತರು ಮತದಾನ ಮಾಡಿದ್ದರೆ, ಶಿರಾ ಕ್ಷೇತ್ರದಲ್ಲಿ 143 ಸೋಂಕಿತರು ತಮ್ಮ ಹಕ್ಕು ಚಲಾಯಿಸಿದ್ದಾರೆ. ಶಿರಾ ಕ್ಷೇತ್ರದಲ್ಲಿ ಮತಗಟ್ಟೆಗೆ ಆಗಮಿಸಿ 38 ಸೋಂಕಿತರು ಮತ ಚಲಾಯಿಸಿದರೆ 105 ಸೋಂಕಿತರು ಅಂಚೆ ಮೂಲಕ ಮತ ಹಾಕಿದ್ದಾರೆ. ಆರ್‌.ಆರ್‌.ನಗರ ಕ್ಷೇತ್ರದಲ್ಲಿ ಮತಚಲಾಯಿಸಿದ 4 ಮತದಾರರು ಪುರುಷರಾಗಿದ್ದಾರೆ. ಶಿರಾ ಕ್ಷೇತ್ರದಲ್ಲಿ 38 ಮಂದಿಯ ಪೈಕಿ 22 ಪುರುಷರು ಮತ್ತು 6 ಮಹಿಳೆಯರು ಮತ ಹಾಕಿದ್ದಾರೆ.

ದೇಶದ ಪ್ರತಿ ಪ್ರಜೆಗೂ ಕೊರೊನಾ ಲಸಿಕೆ: ಪ್ರಧಾನಿ ಮೋದಿ ವಾಗ್ದಾನ

ಸಂಜೆ 5 ಗಂಟೆಯಿಂದ 6 ಗಂಟೆಯವರೆಗೆ ಸೋಂಕಿತರಿಗೆ ಮತದಾನ ಮಾಡಲು ಅವಕಾಶ ನೀಡಲಾಗಿತ್ತು. ಮತಗಟ್ಟೆಗೆ ಬಂದು ತಮ್ಮ ಹಕ್ಕು ಚಲಾಯಿಸುವ ಸೋಂಕಿತರಿಗೆ ಪಿಪಿಇ ಕಿಟ್‌ ವ್ಯವಸ್ಥೆ ಮಾಡಲಾಗಿತ್ತು. ಅಲ್ಲದೇ, ಮತಗಟ್ಟೆಯಲ್ಲಿ ಸೂಕ್ತ ವ್ಯವಸ್ಥೆ ಮಾಡಲಾಗಿತ್ತು. ವಿಧಾನಪರಿಷತ್‌ನ ನಾಲ್ಕು ಸ್ಥಾನಗಳಿಗೆ ನಡೆದ ಚುನಾವಣೆ ವೇಳೆಯೂ ಸೋಂಕಿತರಿಗೆ ಮತದಾನ ಮಾಡಲು ಅವಕಾಶ ನೀಡಲಾಗಿತ್ತು. ಆದರೆ, ಕೇವಲ 3-4 ಮಂದಿ ಮಾತ್ರ ಸೋಂಕಿತರು ಮತಚಲಾಯಿಸಿದ್ದರು ಎಂದು ಆಯೋಗದ ಮೂಲಗಳು ಹೇಳಿವೆ.