ರೈತರ ಅನುಕೂಲಕ್ಕೆ ತಕ್ಕಂತೆ ಗೋಹತ್ಯೆ ನಿಷೇಧ ಕಾಯ್ದೆಗೆ ಚಿಂತನೆ: ಸಚಿವ ರಾಜಣ್ಣ
ಗೋಹತ್ಯೆ ನಿಷೇಧ ಕಾಯ್ದೆ ರದ್ದುಗೊಳಿಸುವ ವಿಚಾರದಲ್ಲಿ ರೈತರ ಅನುಕೂಲಕ್ಕೆ ತಕ್ಕಂತೆ ಕಾಯ್ದೆ ರೂಪಿಸಬೇಕಿದೆ. ಮುಂದಿನ ದಿನಗಳಲ್ಲಿ ಎಲ್ಲರೊಂದಿಗೆ ಚರ್ಚೆ ನಡೆಸಿ ಈ ಬಗ್ಗೆ ಸೂಕ್ತ ತೀರ್ಮಾನ ಕೈಗೊಳ್ಳುತ್ತೇವೆ ಎಂದು ಸಹಕಾರ ಸಚಿವ ಕೆ.ಎನ್.ರಾಜಣ್ಣ ತಿಳಿಸಿದ್ದಾರೆ.
ಮೈಸೂರು (ಜು.09): ಗೋಹತ್ಯೆ ನಿಷೇಧ ಕಾಯ್ದೆ ರದ್ದುಗೊಳಿಸುವ ವಿಚಾರದಲ್ಲಿ ರೈತರ ಅನುಕೂಲಕ್ಕೆ ತಕ್ಕಂತೆ ಕಾಯ್ದೆ ರೂಪಿಸಬೇಕಿದೆ. ಮುಂದಿನ ದಿನಗಳಲ್ಲಿ ಎಲ್ಲರೊಂದಿಗೆ ಚರ್ಚೆ ನಡೆಸಿ ಈ ಬಗ್ಗೆ ಸೂಕ್ತ ತೀರ್ಮಾನ ಕೈಗೊಳ್ಳುತ್ತೇವೆ ಎಂದು ಸಹಕಾರ ಸಚಿವ ಕೆ.ಎನ್.ರಾಜಣ್ಣ ತಿಳಿಸಿದ್ದಾರೆ. ನಗರದಲ್ಲಿ ಸುದ್ದಿಗಾರರ ಜೊತೆ ಅವರು ಮಾತನಾಡಿದರು. ಗೋಹತ್ಯೆ ನಿಷೇಧ ಕಾಯ್ದೆ ರದ್ದುಗೊಳಿಸುವ ವಿಚಾರಕ್ಕೆ ಪ್ರತಿಕ್ರಿಯಿಸಿ, ನಾನು ಮಾಂಸ ತಿನ್ನುತ್ತೇನೆ.
ನೀವು ಬೇಡ ಎಂದರೂ ನಿಲ್ಲಿಸುವುದಿಲ್ಲ. ಹಿಂದಿನಿಂದಲೂ ಏನು ನಡೆದುಕೊಂಡು ಬಂದಿದೆಯೋ ಅದು ಸರಿಯಿದೆ. ಗೋಹತ್ಯೆ ಎನ್ನುವುದು ಅತ್ಯಂತ ಸೂಕ್ಷ್ಮ ವಿಚಾರ. ಇದು ಭಾವನಾತ್ಮಕ ವಿಷಯವೂ ಹೌದು. ಹಸು ಕಡಿಯಬೇಕು ಎಂದು ನಾನು ಹೇಳುವುದಿಲ್ಲ. ಕಡಿಯಬಾರದು ಎಂದೂ ಹೇಳಲ್ಲ. ಆದರೆ, ರೈತರ ಅನುಕೂಲಕ್ಕೆ ತಕ್ಕಂತೆ ಕಾಯ್ದೆ ಮಾಡಬೇಕಿದೆ. ಮುಂದಿನ ದಿನಗಳಲ್ಲಿ ಎಲ್ಲರೊಂದಿಗೆ ಚರ್ಚೆ ನಡೆಸಿ ಈ ಬಗ್ಗೆ ಸೂಕ್ತ ತೀರ್ಮಾನ ಕೈಗೊಳ್ಳುತ್ತೇವೆ ಎಂದರು.
ಜನರ ಸಮಸ್ಯೆ ಆಲಿಸಲು ತನ್ನದೇ ಹೆಸರಿನಲ್ಲಿ ವೆಬ್‌ಸೈಟ್ ಆರಂಭಿಸಿದ ಶಾಸಕ ಪ್ರದೀಪ್ ಈಶ್ವರ್
ಪೆನ್ ಡ್ರೈವ್ ಹೆಸರಿನಲ್ಲಿ ಕುಮಾರಸ್ವಾಮಿ ದಂಧೆ: ಪೆನ್ ಡ್ರೈವ್ ಹೆಸರಿನಲ್ಲಿ ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ದಂಧೆ ನಡೆಸುತ್ತಿದ್ದಾರೆ ಎಂದು ಸಹಕಾರ ಸಚಿವ ಕೆ.ಎನ್. ರಾಜಣ್ಣ ಆರೋಪಿಸಿದರು. ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ತಾಕತ್ ಇದ್ರೆ ಈಗಲೇ ಪೆನ್ ಡ್ರೈವ್‌ನಲ್ಲಿ ಏನಿದೆ ತೋರಿಸಲಿ. ವಿಳಂಬ ಮಾಡುತ್ತಿರುವುದರ ಹಿಂದಿನ ಉದ್ದೇಶ ಏನು? ಪೆನ್ ಡ್ರೈವ್ ಇಟ್ಕೊಂಡು ಅವ್ರೇನಾದ್ರೂ ದಂಧೆ ಮಾಡ್ತಾ ಇದ್ದಾರಾ ಎಂದು ಪ್ರಶ್ನಿಸಿದರು.
ನನಗೆ ಆ ಪೆನ್‌ಡ್ರೈವ್ ವಿಚಾರದಲ್ಲಿ ಯಾವ ಕುತೂಹಲವೂ ಇಲ್ಲ. ಹಳ್ಳಿ ಜಾತ್ರೆಗಳಲ್ಲಿ ಬುಟ್ಟಿಹಿಡ್ಕೊಂಡು ಹಾವಿದೆ, ಹಾವಿದೆ ಅಂತಾ ಹೇಳ್ತಾರೆ. ಬುಟ್ಟಿಯಲ್ಲಿ ಯಾವ ಹಾವೂ ಇರುವುದಿಲ್ಲ. ಪೆನ್ ಡ್ರೈವ್ ಹಿಡ್ಕೊಂಡು ಸುಮ್ಮನೆ ಓಡಾಡುತ್ತಿದ್ದಾರೆ. ಒಂದು ವೇಳೆ ಪೆನ್ ಡ್ರೈವ್‌ನಲ್ಲಿ ಅಂತಹ ಮಹತ್ವದ ವಿಚಾರ ಇದ್ರೇ ತಡ ಯಾಕೆ? ನಾನು ಇದನ್ನು ಬ್ಲಾಕ್ ಮೇಲ್ ಅಂತಾ ಹೇಳುವುದಿಲ್ಲ. ಮುಂದೆ ಗೊತ್ತಾಗುತ್ತದೆ ಎಂದು ಅವರು ಹೇಳಿದರು.
ವರ್ಗಾವಣೆ ಆಗುತ್ತಿದೆ ಆದರೆ ದಂಧೆಯಲ್ಲ: ರಾಜ್ಯದಲ್ಲಿ ಅಧಿಕಾರಿಗಳ ವರ್ಗಾವಣೆಯಾಗುತ್ತಿದೆ, ಆದರೆ ಅದು ದಂಧೆಯಲ್ಲ. ವರ್ಗಾವಣೆ ಅವರ ಸರ್ಕಾರವಿದ್ದಾಗ ಆಗಿರ್ಲಿಲ್ವಾ? ಎಲ್ಲಾ ಕಾಲಕ್ಕೂ ವರ್ಗಾವಣೆ ನಡೆಯುತ್ತೇ. ಅದನ್ನು ದಂಧೆ ಅನ್ನೋದು ತಪ್ಪು. ವೈಎಸ್‌ಟಿ ಅಂದ್ರೆ ಏನು ಅಂತಾ ನಂಗೆ ಗೊತ್ತಿಲ್ಲ. ಅವ್ರನ್ನೇ ಕೇಳಬೇಕು ಎಂದು ಅವರು ಕುಮಾರಸ್ವಾಮಿಗೆ ತಿರುಗೇಟು ನೀಡಿದರು.
ಸಹಕಾರ ಸಂಸ್ಥೆ, ಬ್ಯಾಂಕ್‌ಗಳಲ್ಲಿ ಹಣ ದುರುಪಯೋಗ ಕಂಡರೆ ಕ್ರಮ: ಸಹಕಾರ ಸಂಸ್ಥೆಗಳು ಹಾಗೂ ಸಹಕಾರ ಬ್ಯಾಂಕ್‌ಗಳಲ್ಲಿ ಯಾವುದೇ ರೀತಿಯ ಹಣ ದುರುಪಯೋಗ ಕಂಡುಬಂದರೆ ಸಂಬಂಧಿಸಿದ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಸಹಕಾರ ಸಚಿವ ಕೆ.ಎನ್. ರಾಜಣ್ಣ ಎಚ್ಚರಿಸಿದರು. ಮೈಸೂರಿನ ಪ್ರಾದೇಶಿಕ ಆಯುಕ್ತರ ಕಚೇರಿಯ ಸಭಾಂಗಣದಲ್ಲಿ ಶನಿವಾರ ನಡೆದ ಮೈಸೂರು ಪ್ರಾಂತ್ಯದ ಇಲಾಖಾಧಿಕಾರಿಗಳ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಬ್ಯಾಂಕ್ ಸಿಬ್ಬಂದಿ ಪರಿಶೀಲಿಸಿ ಸಾಲ ವಿತರಣೆ ಮಾಡಬೇಕು. ಎಲ್ಲಾ ಸಿಬ್ಬಂದಿಗೆ ಬಯೋಮೆಟ್ರಿಕ್ ಹಾಜರಾತಿ ಇರಬೇಕು.
ಅಧಿಕಾರಿಗಳು ಹಾಗೂ ಸಿಬ್ಬಂದಿ ಪಾಸ್‌ವರ್ಡ್‌ಗಳು ದುರುಪಯೋಗ ಆಗಬಾರದು ಎಂದರು. ಯಾವುದೇ ಅಧಿಕಾರಿಗಳ ಮೇಲೆ ಹಣ ದುರುಪಯೋಗದ ದೂರುಗಳು ಬಂದರೆ ಕಠಿಣ ಕ್ರಮ ಕೈಗೊಳ್ಳಲಾಗುವುದು. ಈ ಹಿಂದಿನ ಹಣ ದುರುಪಯೋಗದ ಪ್ರಕರಣಗಳು ಇದ್ದರೆ, ಪ್ರಕರಣಗಳನ್ನು ಬೇಗ ಇತ್ಯರ್ಥ ಪಡಿಸಿ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸಚಿವರು ಸೂಚಿಸಿದರು.
ಜೈನಮುನಿ ಹತ್ಯೆ ಸಮಗ್ರ ತನಿಖೆಗೆ ಸಿಎಂ ಸಿದ್ದರಾಮಯ್ಯ ಸೂಚನೆ
ಸಹಕಾರ ಇಲಾಖೆಯಲ್ಲಿ ಹಣ ದುರುಪಯೋಗದ ಕುರಿತು ದಾಖಲಾಗಿರುವ ಸಿವಿಲ್ ಹಾಗೂ ಕ್ರಿಮಿನಲ್ ಪ್ರಕರಣಗಳ ಕುರಿತು ಮಾಹಿತಿ ಪಡೆದುಕೊಂಡ ಸಚಿವರು, ತುಂಬಾ ಪ್ರಕರಣಗಳು ಇನ್ನೂ ಇತ್ಯರ್ಥ ಆಗದೆ ಹಾಗೆ ಉಳಿದಿದ್ದು, ಕೆಲವು ಅಧಿಕಾರಿಗಳು ಕೋರ್ಚ್ ಪ್ರಕರಣಗಳಿಗೆ ಸರಿಯಾಗಿ ಹಾಜರು ಆಗುವುದಿಲ್ಲ. ಈ ರೀತಿ ಆಗಬಾರದು, ಸಂಬಂಧಿಸಿದ ಅಧಿಕಾರಿಗಳು ಕೋರ್ಚ್ ಪ್ರಕರಣಗಳಿಗೆ ಸೂಕ್ತ ದಾಖಲೆಗಳೊಂದಿಗೆ ಹಾಜರಾಗಿ ತಪ್ಪಿತಸ್ಥರಿಗೆ ಶಿಕ್ಷೆಯಾಗುವಂತೆ ನೋಡಿಕೊಳ್ಳಿ. ಇದರಿಂದ ಸಹಕಾರ ಸಂಸ್ಥೆಗಳಲ್ಲಿ ಅಕ್ರಮವನ್ನು ತಡೆಗಟ್ಟಲು ಸಾಧ್ಯವಾಗುತ್ತದೆ ಎಂದು ತಿಳಿಸಿದರು.