ಚನ್ನಪಟ್ಟಣಕ್ಕೆ ಯೋಗೇಶ್ವರ್, ಸಂಡೂರಿಗೆ ಅನ್ನಪೂರ್ಣ: ಉಪಚುನಾವಣೆಗೆ ಕಾಂಗ್ರೆಸ್ ಟಿಕೆಟ್ ಘೋಷಣೆ

ಮೂರು ಕ್ಷೇತ್ರಗಳ ಉಪಚುನಾವಣೆ ಹಿನ್ನೆಲೆಯಲ್ಲಿ ಎರಡು ಕ್ಷೇತ್ರಗಳಿಗೆ ಕಾಂಗ್ರೆಸ್ ಅಭ್ಯರ್ಥಿ ಹೆಸರು ಘೋಷಣೆ ಆಗಿದೆ. ಚನ್ನಪಟ್ಟಣಕ್ಕೆ ಸಿ.ಪಿ.ಯೋಗೇಶ್ವರ್ ಹಾಗೂ ಇ.ಅನ್ನಪೂರ್ಣಗೆ ಸಂಡೂರು ವಿಧಾನಸಭಾ ಕ್ಷೇತ್ರಕ್ಕೆ ಅಭ್ಯರ್ಥಿಯನ್ನಾಗಿ ಘೋಷಣೆ ಮಾಡಲಾಗಿದೆ. 

CP Yogeshwar for Channapatna E Annapurna for Sandur Congress ticket announced for the By Elections gvd

ಬೆಂಗಳೂರು (ಅ.23): ಮೂರು ಕ್ಷೇತ್ರಗಳ ಉಪಚುನಾವಣೆ ಹಿನ್ನೆಲೆಯಲ್ಲಿ ಎರಡು ಕ್ಷೇತ್ರಗಳಿಗೆ ಕಾಂಗ್ರೆಸ್ ಅಭ್ಯರ್ಥಿ ಹೆಸರು ಘೋಷಣೆ ಆಗಿದೆ. ಚನ್ನಪಟ್ಟಣಕ್ಕೆ ಸಿ.ಪಿ.ಯೋಗೇಶ್ವರ್ ಹಾಗೂ ಸಂಸದ ಇ.ತುಕಾರಾಂ ಪತ್ನಿ ಇ.ಅನ್ನಪೂರ್ಣಗೆ ಸಂಡೂರು ವಿಧಾನಸಭಾ ಕ್ಷೇತ್ರಕ್ಕೆ ಅಭ್ಯರ್ಥಿಯನ್ನಾಗಿ ಘೋಷಣೆ ಮಾಡಲಾಗಿದೆ. 

ಎಐಸಿಸಿ ಪ್ರಧಾನ ಕಾರ್ಯದರ್ಶಿ ವೇಣುಗೋಪಾಲ್‌ ಅವರು ಕರ್ನಾಟಕ ಹಾಗೂ ಅಸ್ಸಾಂ ಉಪ ಚುನಾವಣೆಗಳ ಟಿಕೆಟ್‌ ಘೋಷಣೆ ಮಾಡಿದ್ದಾರೆ. ಚನ್ನಪಟ್ಟಣಕ್ಕೆ ಸಿ.ಪಿ.ಯೋಗೇಶ್ವರ್, ಸಂಡೂರಿಗೆ ಇ.ಅನ್ನಪೂರ್ಣಗೆ ಟಿಕೆಟ್‌ ನೀಡಲಾಗಿದೆ. ಇನ್ನು ಬಸವರಾಜ ಬೊಮ್ಮಾಯಿಯಿಂದ ತೆರವಾಗಿದ್ದ ಶಿಗ್ಗಾಂವಿ ಕ್ಷೇತ್ರದ ಟಿಕೆಟ್‌ ಘೋಷಣೆಯಾಗಿಲ್ಲ. ಮೂರು ಕ್ಷೇತ್ರಗಳ ಉಪಚುನಾವಣೆಯಲ್ಲಿ ಪಕ್ಷವನ್ನು ಗೆಲ್ಲಿಸಲು ಸಚಿವರಿಗೆ ಜವಾಬ್ದಾರಿ ನೀಡಲಾಗಿದೆ ಎಂದು ಕಾಂಗ್ರೆಸ್ ಡಿಸಿಎಂ ಡಿ.ಕೆ.ಶಿವಕುಮಾರ್ ತಿಳಿಸಿದ್ದಾರೆ. 

ರಾಜ್ಯದಲ್ಲಿ ಸತ್ತವರ ಹೆಸರಿನಲ್ಲಿ 48 ಲಕ್ಷ ಆರ್‌ಟಿಸಿ: ಕಂದಾಯ ಸಚಿವ ಕೃಷ್ಣ ಭೈರೇಗೌಡ

ಸಂಡೂರು, ಶಿಗ್ಗಾಂವ್ ಮತ್ತು ಚನ್ನಪಟ್ಟಣಕ್ಕೆ ನವೆಂಬರ್ 13ರಂದು ಉಪಚುನಾವಣೆ ನಡೆಯುತ್ತಿದ್ದು, ನಾಮಪತ್ರ ಸಲ್ಲಿಸಲು ಅಕ್ಟೋಬರ್ 25 ಕೊನೆಯ ದಿನವಾಗಿದೆ. ಮತ್ತು ನಾಮಪತ್ರ ಹಿಂಪಡೆಯಲು ಅಕ್ಟೋಬರ್ 30 ಕೊನೆಯ ದಿನವಾಗಿದೆ. ಸಂಡೂರು ಮತ್ತು ಶಿಗ್ಗಾಂವ್ ಕ್ಷೇತ್ರಗಳಿಗೆ ಬಿಜೆಪಿ ಈಗಾಗಲೇ ತನ್ನ ಅಭ್ಯರ್ಥಿಗಳನ್ನು ಘೋಷಿಸಿದ್ದರೆ, ತನ್ನ ಮಿತ್ರ ಪಕ್ಷ ಜೆಡಿಎಸ್‌ಗೆ ಹೈ ಪ್ರೊಫೈಲ್ ಚನ್ನಪಟ್ಟಣ ಕ್ಷೇತ್ರವನ್ನು ಬಿಟ್ಟುಕೊಟ್ಟಿದೆ.

Latest Videos
Follow Us:
Download App:
  • android
  • ios