ಸಿ.ಪಿ.ಯೋಗೇಶ್ವರ್ ಕಾಂಗ್ರೆಸ್ ಸೇರ್ಪಡೆ ಹೈಕಮಾಂಡ್ ನಿರ್ಧಾರ: ಸಚಿವ ಜಮೀರ್ ಅಹ್ಮದ್
ಮಾಜಿ ಸಚಿವ ಸಿ.ಪಿ.ಯೋಗೇಶ್ವರ್ ಅವರನ್ನು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆ ಮಾಡಿಕೊಳ್ಳುವ ಬಗ್ಗೆ ಪಕ್ಷದ ಹೈಕಮಾಂಡ್ ನಿರ್ಧಾರ ಮಾಡಲಿದೆ ಎಂದು ವಸತಿ ಸಚಿವ ಜಮೀರ್ ಅಹ್ಮದ್ ಖಾನ್ ಹೇಳಿದರು.
ಹೊಸಪೇಟೆ (ಆ.15): ಮಾಜಿ ಸಚಿವ ಸಿ.ಪಿ.ಯೋಗೇಶ್ವರ್ ಅವರನ್ನು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆ ಮಾಡಿಕೊಳ್ಳುವ ಬಗ್ಗೆ ಪಕ್ಷದ ಹೈಕಮಾಂಡ್ ನಿರ್ಧಾರ ಮಾಡಲಿದೆ ಎಂದು ವಸತಿ ಸಚಿವ ಜಮೀರ್ ಅಹ್ಮದ್ ಖಾನ್ ಹೇಳಿದರು. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮುಖ್ಯಮಂತ್ರಿ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ. ಶಿವಕುಮಾರ ಈ ವಿಚಾರದಲ್ಲಿ ನಿರ್ಧಾರ ತೆಗೆದುಕೊಳ್ಳಲಿದ್ದಾರೆ ಎಂದರು. ರಾಜ್ಯ ಸಚಿವ ಸಂಪುಟ ಪುನಾರಚನೆಯಲ್ಲಿ ಐದಾರು ಸಚಿವರನ್ನು ಸಿಎಂ ಕೈಬಿಡಲಿದ್ದಾರೆ ಎಂದು ಕೇಳಲಾದ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ಈ ಬಗ್ಗೆ ನಮಗೆ ತಿಳಿದಿಲ್ಲ. ಚರ್ಚೆಯೂ ನಡೆದಿಲ್ಲ ಎಂದರು.
ಬಿಜೆಪಿಯಲ್ಲಿ ಬಣಗಳ ಜಗಳವಿದೆ. ಇದು ಅವರ ಪಕ್ಷದ ಆಂತರಿಕ ವಿಚಾರ. ಅವರು ಎಲ್ಲಿಂದ ಆದರೂ ಪಾದಯಾತ್ರೆ ಮಾಡಿಕೊಳ್ಳಲಿ, ನಾವು ಅವರ ಬಣ ಬಡಿದಾಟದ ಬಗ್ಗೆ ಮಾತನಾಡುವುದಿಲ್ಲ ಎಂದು ಸೂಚ್ಯವಾಗಿ ಹೇಳಿದರು. ರಾಜ್ಯದಲ್ಲಿ ಗೃಹಲಕ್ಷ್ಮಿ ಯೋಜನೆ ನಿಲ್ಲಿಸುವ ಬಗ್ಗೆ ಚರ್ಚೆ ಆಗಿಲ್ಲ. ಪಂಚ ಗ್ಯಾರಂಟಿಗಳನ್ನು ಯಾವುದೇ ಕಾರಣಕ್ಕೂ ನಿಲ್ಲಿಸಲಾಗುವುದಿಲ್ಲ ಎಂದು ಸಿಎಂ ಈಗಾಗಲೇ ಸ್ಪಷ್ಟಪಡಿಸಿದ್ದಾರೆ ಎಂದರು. ಈ ಸಂದರ್ಭದಲ್ಲಿ ಶಾಸಕರಾದ ಎಚ್.ಆರ್. ಗವಿಯಪ್ಪ, ಡಾ. ಎನ್.ಟಿ. ಶ್ರೀನಿವಾಸ್ ಇದ್ದರು.
ಬಾದ್‌ಷಾ ಕಿಚ್ಚನ ಜಾಗಕ್ಕೆ ಬರ್ತಾರಂತೆ ಕನ್ನಡದ ಮತ್ತೊಬ್ಬ ಸ್ಟಾರ್?: ರೆಡಿ ಆಯ್ತು ಬಿಗ್ ಬಾಸ್ 11ರ ಪ್ರೋಮೋ!
ಮಂತ್ರಿ ಆಗಿ ಇರೋತ್ತೇನೋ ಇಲ್ಲವೋ ಗೊತ್ತಿಲ್ಲ: ‘ಮುಂದೆ ನಾನು ಮಂತ್ರಿ ಆಗಿಯೇ ಇರ್ತೀನೋ ಗೊತ್ತಿಲ್ಲ. ಜೀವಂತವಾಗಿ ಇರುತ್ತೇನೋ ಇಲ್ಲವೋ ಗೊತ್ತಿಲ್ಲ ಎಂದು ವಸತಿ ಸಚಿವ ಜಮೀರ್ ಅಹ್ಮದ್ ಖಾನ್ ಹೇಳಿದರು. ಸೋಮವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ ದೇವರು ಹಣೆಬರಹ ಬರೆದಿರುತ್ತಾರೆ. ಈಗ ನನ್ನನ್ನ ಅಲ್ಪಸಂಖ್ಯಾತ ಸಚಿವರಾಗಿ ಮಾಡಿದ್ದಾರೆ. ಮುಂದಿನ ನಾಲ್ಕು ವರ್ಷ ನಮ್ಮ ಸರ್ಕಾರ ಇರುತ್ತದೆ. ನಾನೇ ಅಲ್ಪಸಂಖ್ಯಾತ ಮಂತ್ರಿ ಆಗಿ ಇರುತ್ತೇನೆ ಎನ್ನುವ ವಿಶ್ವಾಸ ಇದೆ’ ಎಂದು ಮಾರ್ಮಿಕವಾಗಿ ನುಡಿದರು.
ಇದೇ ವೇಳೆ, ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ವಿರುದ್ಧ ಹರಿಹಾಯ್ದ ಜಮೀರ್, ‘ರಾಜ್ಯದ ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ ಇರುವುದನ್ನು ಸಹಿಸಲು ಸಾಧ್ಯವಾಗದೆ ಕುಮಾರಸ್ವಾಮಿ ಅವರು ಸಿದ್ದರಾಮಯ್ಯ ಅವರನ್ನು ಟಾರ್ಗೆಟ್ ಮಾಡುತ್ತಿದ್ದಾರೆ’ ಎಂದು ಆರೋಪಿಸಿದ್ದಾರೆ. ‘ಸಿದ್ದರಾಮಯ್ಯ ಮುಖ್ಯಮಂತ್ರಿ ಆಗಿದ್ದರೆ ಯಾವತ್ತೂ ಸಿಎಂ ಆಗುವ ಅವಕಾಶ ತಮಗೆ ಸಿಗಲ್ಲ ಎನ್ನುವುದು ಬಿಜೆಪಿಗೂ, ಕುಮಾರಸ್ವಾಮಿಗೂ ಗೊತ್ತು. ಅದಕ್ಕಾಗಿ ಇಲ್ಲದ ವಿಚಾರವನ್ನು ಕೆಣಕುತ್ತಿದ್ದಾರೆ. ಮುಡಾ ವಿಚಾರದಲ್ಲಿ ಮುಖ್ಯಮಂತ್ರಿಯವರ ಪಾತ್ರ ಏನಿಲ್ಲ.
ನಟನಿಗಾಗೇ ನಡೀತಾ ಈ ಹೋಮ ಹವನ?: ದರ್ಶನ್‌ಗೋಸ್ಕರ ಪೂಜೆ ಅಂದಿದ್ರೆ ನಾನು ಬರುತ್ತಿರಲಿಲ್ಲ ಎಂದು ಗುಡುಗಿದ ಜಗ್ಗೇಶ್
ಜಮೀನಿನ ಬದಲಿಗೆ ಪರ್ಯಾಯ ನಿವೇಶನಗಳನ್ನು ಕೊಟ್ಟಿರುವುದು ಬಿಜೆಪಿ ಸರ್ಕಾರದ ಅವಧಿಯಲ್ಲಿ. ಇದರಲ್ಲಿ ಸಿದ್ದರಾಮಯ್ಯ ಏನು ತಪ್ಪು ಮಾಡಿದ್ದಾರೆ? ಈಗಲೂ ಅವರ ಮೇಲೆ ಕಪ್ಪುಚುಕ್ಕೆ ಇಲ್ಲ. ಯಾಕೆ ರಾಜೀನಾಮೆ ಕೊಡುತ್ತಾರೆ’ ಎಂದು ಪ್ರಶ್ನಿಸಿದರು. ‘ಕಾಂಗ್ರೆಸ್ ವಿರುದ್ಧ ಮಾತನಾಡಲು ಬಿಜೆಪಿಯವರಿಗೆ ಬೇರೆ ವಿಷಯಗಳಿಲ್ಲ. ಆದ್ದರಿಂದ ಮುಡಾ ವಿಚಾರದ ಹಿಂದೆ ಬಿದ್ದಿದ್ದಾರೆ. ಅದಕ್ಕೆ ಕುಮಾರಸ್ವಾಮಿ ಬೆನ್ನೆಲುಬಾಗಿ ನಿಂತಿದ್ದಾರೆ. ಈ ಪ್ರಕರಣದಲ್ಲಿ ತಮ್ಮ ಯಾವುದೇ ಪಾತ್ರವಿಲ್ಲ ಎಂಬುದನ್ನು ಮುಖ್ಯಮಂತ್ರಿಯವರು ಈಗಾಗಲೇ ಸ್ಪಷ್ಟಪಡಿಸಿದ್ದಾರೆ. ಸರ್ಕಾರ ಬೀಳುವಂಥದ್ದೇನೂ ಇಲ್ಲ’ ಎಂದರು.