Breaking: ಬಿಜೆಪಿ ಎಂಎಲ್‌ಸಿ ಸ್ಥಾನಕ್ಕೆ ಸಿಪಿ ಯೋಗೇಶ್ವರ್ ರಾಜೀನಾಮೆ
ಚನ್ನಪಟ್ಟಣ ಉಪಚುನಾವಣೆ ಟಿಕೆಟ್ ಫೈಟ್ ನಡುವೆ ಸಿಪಿ ಯೋಗೇಶ್ವರ್ ಬಿಜೆಪಿ ಎಂಎಲ್‌ಸಿ ಸ್ಥಾನಕ್ಕೆ ಸೋಮವಾರ ರಾಜೀನಾಮೆ ಸಲ್ಲಿಸಿದ್ದಾರೆ. ಅದರೊಂದಿಗೆ ಚನ್ನಪಟ್ಟಣ ಅಖಾಡದಲ್ಲಿ ಅತಿದೊಡ್ಡ ಬೆಳವಣಿಗೆ ನಡೆದಿದೆ.
ಬೆಂಗಳೂರು (ಅ.21): ಬಿಜೆಪಿ ವಿಧಾನಪರಿಷತ್ ಸದಸ್ಯರಾದ ಸಿ.ಪಿ.ಯೋಗೇಶ್ವರ್ ಅವರು ವಿಧಾನ ಪರಿಷತ್ ಸ್ಥಾನಕ್ಕೆ ಇಂದು ರಾಜೀನಾಮೆ ಸಲ್ಲಿಸಲಿದ್ದಾರೆ. ಇಂದು ನಾಲ್ಕು ಗಂಟೆಗೆ ಹುಬ್ಬಳ್ಳಿಯಲ್ಲಿ ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಅವರನ್ನು ಭೇಟಿ ಮಾಡಿ ತಮ್ಮ ರಾಜೀನಾಮೆ ಪತ್ರವನ್ನು ನೀಡಲಿದ್ದಾರೆ.ಅದರೊಂದಿಗೆ ಚನ್ನಪಟ್ಟಣ ಉಪಚುನಾವಣೆ ಅಖಾಡ ಇನ್ನಷ್ಟು ಜೋರಾಗಿದೆ. ಅದರೊಂದಿಗೆ ಚನ್ನಪಟ್ಟಣದಲ್ಲಿ ಸಿಪಿವೈ ಸ್ವತಂತ್ರ ಸ್ಪರ್ಧೆ ಮಾಡೋದು ಖಚಿತವಾದಂತಾಗಿದೆ. ಕ್ಷೇತ್ರದಿಂದ ಟಿಕೆಟ್ ಸಿಗದ ಕಾರಣಕ್ಕಾಗಿ ಸಿಪಿವೈ ರೊಚ್ಚಿಗೆದ್ದಿದ್ದು ತಮ್ಮ ಎಂಎಲ್‌ಸಿ ಸ್ಥಾನಕ್ಕೆ ಗುಡ್‌ಬೈ ಹೇಳಿದ್ದಾರೆ. ರಾಜೀನಾಮೆ ನೀಡಲು ಸಭಾಪತಿ ಹೊರಟ್ಟಿ ಅವರ ಭೇಟಿಗೆ ತೆರಳಿದ್ದಾರೆ.
ಇದಕ್ಕೂ ಮುನ್ನ ಏಷ್ಯಾನೆಟ್ ಸುವರ್ಣ ನ್ಯೂಸ್ ಜೊತೆ ಮಾತನಾಡಿಸಿದ ಸಿಪಿ ಯೋಗೇಶ್ವರ್, 'ಎನ್‌ಡಿಎ ಅಭ್ಯರ್ಥಿಯಾಗಿ ಚುನಾವಣೆಗೆ ಕಣಕ್ಕಿಳಿಯುವ ಸಾಧ್ಯತೆ ಬಹಳ ಕ್ಷೀಣಿಸುತ್ತಿದೆ. ಜೆಡಿಎಸ್ ಹಾಗೂ ನಾವು ಒಟ್ಟಿಗೆ ಚುನಾವಣೆ ಮಾಡಬೇಕು. ನನಗೆ ಮೊದಲಿನಿಂದಲೂ ಬಿಜೆಪಿಯಿಂದ ನಿಲ್ಲಬೇಕು ಅನ್ನೋದು ಆಶಯ. ಜೆಡಿಎಸ್‌ನಿಂದ ನಿಂತುಕೊಳ್ಳುವಂತೆ ಮಾತನಾಡಿದ್ದಾರ. ಆದರೆ, ಜೆಡಿಎಸ್ ಟಿಕೆಟ್‌ನಲ್ಲಿ ಹೋರಾಟ ಮಾಡಲು ನಮ್ಮ ಕಾರ್ಯಕರ್ತರು ಕೂಡ ಒಪ್ಪುತ್ತಿಲ್ಲ.ಬಹಳ ಸಾರಿ ಚಿಹ್ನೆ ಬದಲಾಯಿಸಿದ್ದು, ಪಕ್ಷಾಂತರ ಮಾಡಿದ್ದು ಆಗಿದೆ..' ಎಂದು ಹೇಳಿದ್ದಾರೆ. ವೈಯಕ್ತಿಕವಾಗಿ ನನಗೆ ಯಾವುದೇ ಟಿಕೆಟ್‌ನಿಂದ ಸ್ಪರ್ಧೆ ಮಾಡೋಕೆ ಹಿಂಜರಿಕೆಯಿಲ್ಲ. ಆದರೆ, ಜೆಡಿಎಸ್ ಟಿಕೆಟ್‌ನಿಂದ ಸ್ಪರ್ಧೆ ಮಾಡೋಕೆ ಕಾರ್ಯಕರ್ತರು ಒಪ್ಪುತ್ತಿಲ್ಲ ಎಂದಿದ್ದರು.
ಸಂಡೂರು ಸಮರದಲ್ಲಿ ರೆಡ್ಡಿ Vs ನಾಗ ಯುದ್ಧ; ಮಾಜಿ ಗುರು-ಶಿಷ್ಯರ ಕಾಳಗದಲ್ಲಿ ಗೆಲುವು ಯಾರಿಗೆ?
ಗುರುವಾರ ನಾಮಪತ್ರ ಸಲ್ಲಿಕೆ: ಪಕ್ಷೇತರವಾಗಿ ಸ್ಪರ್ಧೆ ಮಾಡಲು ಇಚ್ಚಿಸಿರುವ ಸಿಪಿ ಯೋಗೇಶ್ವರ್, ಗುರುವಾರ ನಾಮಪತ್ರ ಸಲ್ಲಿಕೆ ಮಾಡುವ ಸಾಧ್ಯತೆ ಇದೆ. ಆ ಮೂಲಕ ದೋಸ್ತಿ ನಾಯಕರಿಗೆ ಸಿಪಿವೈ ಸಡ್ಡು ಹೊಡೆದಿದ್ದಾರೆ.
ಶಿಗ್ಗಾಂವಿ ಟಿಕೆಟ್ ಸಿಕ್ಕ ಖುಷಿಯಲ್ಲೇ ತಂದೆ, ಅಜ್ಜನಿಂದ ಕಲಿತಿದ್ದೇನೆ ಎಂದ ಭರತ್ ಬೊಮ್ಮಾಯಿ