ಚನ್ನಪಟ್ಟಣ ಬೈಎಲೆಕ್ಷನ್‌: ಟಿಕೆಟ್ ಕಗ್ಗಂಟಿನ ಮಧ್ಯೆ ಯೋಗೇಶ್ವ‌ರ್ ಸಭೆ, ಬಂಡಾಯದ ಕಹಳೆ ಮೊಳಗಿಸ್ತಾರಾ ಸೈನಿಕ?

ಟಿಕೆಟ್ ವಿಚಾರವಾಗಿ ಅಸಮಾಧಾನಗೊಂಡಿರುವ ಯೋಗೇಶ್ವರ್ ಬಂಡಾಯದ ಅಸ್ತ್ರ ಪ್ರಯೋಗಿಸುತ್ತಾರೆಯೇ ಎಂಬ ಕುತೂಹಲ ಮೂಡಿದೆ. ಈಗಾಗಲೇ ಎಚ್.ಡಿ.ಕುಮಾರಸ್ವಾಮಿ ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದಲ್ಲಿ ಪಕ್ಷದ ಅಭ್ಯರ್ಥಿಯನ್ನು ಕಣಕ್ಕಿಳಿಸುವ ಕುರಿತು ಸ್ಪಷ್ಟ ಸಂದೇಶ ನೀಡಿದ್ದು, ಜೆಡಿಎಸ್ ಮುಖಂಡರು ಹಾಗೂ ಕಾರ್ಯಕರ್ತರ ಸಭೆ ನಡೆಸಿ, ನಾಡಿಮಿಡಿತ ಅರಿಯುವ ಪ್ರಯತ್ನ ನಡೆಸಿದ್ದಾರೆ. 

CP Yogeshwar will be Attend BJP Leaders and Activists Meeting at Channapatna amid Ticket row grg

ವಿಜಯ್ ಕೇಸರಿ 

ಚನ್ನಪಟ್ಟಣ(ಅ.15): ಚನ್ನಪಟ್ಟಣ ಉಪಚುನಾವಣೆ ಟಿಕೆಟ್‌ ಗಾಗಿ ಜೆಡಿಎಸ್-ಬಿಜೆಪಿ ಹಗ್ಗಜಗ್ಗಾಟದ ನಡುವೆ ಟಿಕೆಟ್ ಆಕಾಂಕ್ಷಿ ಮಾಜಿ ಸಚಿವ, ವಿಧಾನ ಪರಿಷತ್ ಸದಸ್ಯ ಸಿ.ಪಿ.ಯೋಗೇಶ್ವರ್‌ ಬುಧವಾರ ಬಿಜೆಪಿ ಮುಖಂಡರು, ಕಾರ್ಯ ಕರ್ತ ರ ಸಭೆ ಕರೆದಿದ್ದಾರೆ. 

ಟಿಕೆಟ್ ವಿಚಾರವಾಗಿ ಅಸಮಾಧಾನಗೊಂಡಿರುವ ಯೋಗೇಶ್ವರ್ ಬಂಡಾಯದ ಅಸ್ತ್ರ ಪ್ರಯೋಗಿಸುತ್ತಾರೆಯೇ ಎಂಬ ಕುತೂಹಲ ಮೂಡಿದೆ. ಈಗಾಗಲೇ ಎಚ್.ಡಿ.ಕುಮಾರಸ್ವಾಮಿ ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದಲ್ಲಿ ಪಕ್ಷದ ಅಭ್ಯರ್ಥಿಯನ್ನು ಕಣಕ್ಕಿಳಿಸುವ ಕುರಿತು ಸ್ಪಷ್ಟ ಸಂದೇಶ ನೀಡಿದ್ದು, ಜೆಡಿಎಸ್ ಮುಖಂಡರು ಹಾಗೂ ಕಾರ್ಯಕರ್ತರ ಸಭೆ ನಡೆಸಿ, ನಾಡಿಮಿಡಿತ ಅರಿಯುವ ಪ್ರಯತ್ನ ನಡೆಸಿದ್ದಾರೆ. 

WATCH: ಚನ್ನಪಟ್ಟಣ ಪಗಡೆ ಗೆಲ್ಲಲು ದಳಪತಿಯ ರೋಚಕ ದಾಳ: 80 ಸಾವಿರ ಮತಗಳ ಲೆಕ್ಕ ಬಿಚ್ಚಿಟ್ಟ ನಿಖಿಲ್!

ಇದೇ ವೇಳೆ, ಚನ್ನಪಟ್ಟಣ ಬಿಜೆಪಿಗೆ ಬಿಟ್ಟು ಕೊಡುವ ಕುರಿತು ಯಾವುದೇ ಒಪ್ಪಂದ ಈ ಆಗಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. ಮತ್ತೊಂದೆಡೆ ಬಿಜೆಪಿ ಪದಾಧಿಕಾರಿಗಳು ಸಭೆ ನಡೆಸಿ ಜಿಲ್ಲೆಯಲ್ಲಿ ಚನ್ನಪಟ್ಟಣದಲ್ಲಿ ಮಾತ್ರ ಬಿಜೆಪಿ ಬಲಿಷ್ಠವಾಗಿದೆ. ಕ್ಷೇತ್ರ ಬಿಜೆಪಿ ಉಳಿಸಿಕೊಂಡು ಯೋಗೇಶ್ವ‌ರ್ ಕಣಕ್ಕಿಳಿಸಲು ಆಗ್ರಹಿಸಿದ್ದಾರೆ. ಈ ನಡುವೆಯೇ ಯೋಗೇಶ್ವರ್ ಸಭೆ ಕರೆದಿರುವುದು ಕುತೂಹಲಕ್ಕೆ ಮೂಡಿಸಿದೆ. 

ಸೈಲೆಂಟ್ ಆಗಿದ್ದ ಸೈನಿಕ: 

ಕುಮಾರಸ್ವಾಮಿ ಮಂಡ್ಯ ಲೋಕಸಭಾ ಕ್ಷೇತ್ರದಿಂದ ಆಯ್ಕೆಯಾಗಿ ಕೇಂದ್ರ ಸಚಿವರಾದ ನಂತರ ಯೋಗೇಶ್ವ‌ರ್‌ ಸಾಕಷ್ಟು ಚುರುಕಾಗಿದ್ದರು. ಕ್ಷೇತ್ರದ ಉಪ ಚುನಾವಣೆ ಟಿಕೆಟ್ ವಿಚಾರಕ್ಕೆ ಸಂಬಂಧಿಸಿ ಅವರು ಹಲವು ಬಾರಿ ದೆಹಲಿಗೂ ಹೋಗಿ ಬಂದಿದ್ದರು. ಉಪಚುನಾವಣೆ ಹಿನ್ನೆಲೆಯಲ್ಲಿ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಕ್ಷೇತ್ರಕ್ಕೆ ಸಾಕಷ್ಟು ಬಾರಿ ಭೇಟಿ ನೀಡುತ್ತಿದ್ದು, ಆದಷ್ಟು ಬೇಗ ಎನ್‌ಡಿಎ ಅಭ್ಯರ್ಥಿ ಹೆಸರು ಘೋಷಿಸುವಂತೆ ಪಕ್ಷದ ವರಿಷ್ಠರನ್ನು ಒತ್ತಾಯಿಸಿದ್ದರು. ಆದರೆ, ಒಂದು ತಿಂಗಳ ಹಿಂದೆ ದೆಹಲಿಯಲ್ಲಿ ವರಿಷ್ಠರನ್ನು ಭೇಟಿಯಾಗಿ ಬಂದ ಬಳಿಕ ಸುಮ್ಮನಿದ್ದ ಯೋಗೇಶ್ವರ್, ಕಾದು ನೋಡುವ ತಂತ್ರಕ್ಕೆ ಶರಣಾಗಿದ್ದರು.

Latest Videos
Follow Us:
Download App:
  • android
  • ios