Asianet Suvarna News Asianet Suvarna News

‘ಗೃಹಲಕ್ಷ್ಮಿ’ಗೆ ದುಡ್ಡು ಪಡೆದರೆ ಕ್ರಿಮಿನಲ್‌ ಕೇಸ್‌: ಸಚಿವೆ ಲಕ್ಷ್ಮಿ

‘ಗೃಹಲಕ್ಷ್ಮಿ’ ಯೋಜನೆಗೆ ಸಂಬಂಧಿಸಿದಂತೆ ಯಾರೇ ಅಸಡ್ಡೆ ತೋರಿದರೆ, ಜನರಿಂದ ದುಡ್ಡು ಪಡೆದರೆ ಅಂತವರ ಮೇಲೆ ಕ್ರಿಮಿನಲ… ಪ್ರಕರಣ ದಾಖಲಿಸಲಾಗುವುದು ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳಕರ ಎಚ್ಚರಿಕೆ ನೀಡಿದರು. 

Criminal case if gruha lakshmi scheme gets money Says Minister laxmi hebbalkar gvd
Author
First Published Jul 25, 2023, 2:00 AM IST

ಬೆಳಗಾವಿ (ಜು.25): ‘ಗೃಹಲಕ್ಷ್ಮಿ’ ಯೋಜನೆಗೆ ಸಂಬಂಧಿಸಿದಂತೆ ಯಾರೇ ಅಸಡ್ಡೆ ತೋರಿದರೆ, ಜನರಿಂದ ದುಡ್ಡು ಪಡೆದರೆ ಅಂತವರ ಮೇಲೆ ಕ್ರಿಮಿನಲ… ಪ್ರಕರಣ ದಾಖಲಿಸಲಾಗುವುದು ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳಕರ ಎಚ್ಚರಿಕೆ ನೀಡಿದರು. ಬೆಳಗಾವಿಯ ಸುವರ್ಣ ವಿಧಾನಸೌಧದಲ್ಲಿ ಸೋಮವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈಗಾಗಲೆ 3 ಜನರ ಲಾಗಿನ್‌ ಐಡಿಯನ್ನು ವಾಪಸ್‌ ಪಡೆಯಲಾಗಿದೆ. ಸರ್ಕಾರವಾಗಲಿ, ಇಲಾಖೆಯಾಗಲಿ ಸುಮ್ಮನೆ ಕುಳಿತಿಲ್ಲ. ಅಂತವರ ಮೇಲೆ ಕ್ರಿಮಿನಲ್ ಪ್ರಕರಣವನ್ನು ಸಹ ದಾಖಲಿಸಲಾಗುವುದು ಎಂದು ಹೇಳಿದರು.

ಗೃಹಲಕ್ಷ್ಮಿ ಯೋಜನೆಯನ್ನು ಮಹಿಳೆಯರು ಉಚಿತವಾಗಿ ಮಾಡಿಸಿಕೊಳ್ಳಬೇಕೆಂದು ಬಹಳಷ್ಟುಕಷ್ಟಪಟ್ಟು ಜಾರಿ ಮಾಡಿದ್ದೇವೆ. ಇದರಲ್ಲೂ ದುಡ್ಡು ಪಡೆಯುತ್ತಿರುವುದು ಗಮನಕ್ಕೆ ಬಂದರೆ ಅಂತವರ ಲಾಗಿನ್‌ ಐಡಿ ಮತ್ತು ಪಾಸ್‌ವರ್ಡ್‌ನ್ನು ವಾಪಸ್‌ ಪಡೆಯಲು ಸೂಚನೆ ಕೊಡಲಾಗಿದೆ. ಪ್ರಕರಣ ದಾಖಲಿಸಲು ಸೂಚಿಸಲಾಗಿದೆ. ತಹಸೀಲ್ದಾರ, ಪಿಡಿಒ, ಗ್ರಾಮ ಲೆಕ್ಕಾಧಿಕಾರಿ ಸೇರಿದಂತೆ ಯಾರಿಗೇ ಆಗಲಿ ಹಣ ಪಡೆಯುವುದು ಗಮನಕ್ಕೆ ಬಂದರೆ ತಕ್ಷಣ ಜಿಲ್ಲಾಧಿಕಾರಿಗಳ ಗಮನಕ್ಕೆ ತರಬೇಕು. ಸ್ಥಳೀಯ ಪೊಲೀಸ್‌ ಠಾಣೆಗೆ ತಿಳಿಸಬೇಕು. ಅಸಡ್ಡೆ ಮಾಡಿದರೆ ಅವರೂ ಜವಾಬ್ದಾರರಾಗುತ್ತಾರೆ ಎಂದು ಹೇಳಿದರು.

ಭದ್ರಾ ಮೇಲ್ದಂಡೆ ಶೀಘ್ರ ಪೂರ್ಣಗೊಳಿಸುವುದೇ ನಮ್ಮ ಗುರಿ: ಸಚಿವ ಡಿ.ಸುಧಾಕರ್‌

ನಾವು ಯಾರಿಂದಲೂ ಉಚಿತವಾಗಿ ಕೆಲಸ ಮಾಡಿಸಿಕೊಳ್ಳುತ್ತಿಲ್ಲ. ಅಪ್‌ಲೋಡ್‌ ಮಾಡುವವರಿಗೆ ಸರ್ಕಾರದಿಂದಲೇ ಪ್ರತಿ ಅರ್ಜಿಗೆ .12 ನೀಡಲಾಗುತ್ತಿದೆ. .10 ಅಪ್‌ಲೋಡ್‌ ಮಾಡಲು, .2 ಪ್ರಿಂಚ್‌ ಔಟ್‌ ಕೊಡಲು ನೀಡಲಾಗುತ್ತಿದೆ. ಹಾಗಾಗಿ, ಜನರು ಯಾರಿಗೂ ದುಡ್ಡು ಕೊಡಬೇಕಾಗಿಲ್ಲ ಎಂದು ಅವರು ಸ್ಪಷ್ಟಪಡಿಸಿದರು. ರಾಜ್ಯ ಸರ್ಕಾರ ಉರುಳಿಸಲು ಸಿಂಗಾಪುರದಲ್ಲಿ ತಂತ್ರ ರೂಪಿಸಲಾಗುತ್ತಿದೆ ಎನ್ನುವ ಸುದ್ದಿಯ ಕುರಿತು ಪತ್ರಕರ್ತರು ಪ್ರಶ್ನಿಸಿದಾಗ, ‘ನಾನು ಗೃಹಲಕ್ಷ್ಮೀ ಯೋಜನೆ ಜಾರಿಗೊಳಿಸುವುದರಲ್ಲಿ, ಕೆಡಿಪಿ ಮೀಟಿಂಗ್‌ನಲ್ಲಿ ಮತ್ತು ಜನರನ್ನು ಭೇಟಿಯಾಗುವುದರಲ್ಲಿ ಬ್ಯುಸಿಯಾಗಿದ್ದೇನೆ. ಆ ಬಗ್ಗೆ ನನಗೆ ಯಾವುದೇ ಮಾಹಿತಿ ಇಲ್ಲ. ಡಿ.ಕೆ.ಶಿವಕುಮಾರ ಅವರು ನಮ್ಮ ಅಧ್ಯಕ್ಷರು. ಅವರಿಗೆ ಎಲ್ಲ ಮಾಹಿತಿ ಇರುತ್ತದೆ. ಅದರ ಆಧಾರದ ಮೇಲೆ ಅವರು ಪ್ರತಿಕ್ರಿಯಿಸಿರಬಹುದು’ ಎಂದರು.

ಚಿಕ್ಕಮಗಳೂರು ಜಿಲ್ಲೆಯಲ್ಲಿ ಇಂದು ಕೂಡ ವರುಣಾರ್ಭಟ: ಭೂಕುಸಿತ, ಕಾರು ಪಲ್ಟಿ

ಹಣ ಪಡೆದ ಗ್ರಾಮ ಒನ್‌ ಸಿಬ್ಬಂದಿ: ಗೃಹಲಕ್ಷ್ಮೀ ಯೋಜನೆ ಅರ್ಜಿ ಸಲ್ಲಿಕೆಗೆ ಹಣ ಪಡೆದ ಹಿನ್ನೆಲೆಯಲ್ಲಿ ಗ್ರಾಮ ಒನ್‌ ಸಿಬ್ಬಂದಿಯೊಬ್ಬರ ಲಾಗಿನ್‌ ರದ್ದುಪಡಿಸಲಾಗಿದೆ. ಜಿಲ್ಲೆಯ ಜಮಖಂಡಿ ತಾಲೂಕಿನ ಶೂರ್ಪಾಲಿ ಗ್ರಾಮದ ಗ್ರಾಮ ಒನ್‌ ಕೇಂದ್ರದ ಸಿಬ್ಬಂದಿ ಲಾಗಿನ್‌ ರದ್ದು ಪಡಿಸಲಾಗಿದೆ. ಈ ಮಾಹಿತಿಯನ್ನು ಖುದ್ದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳಕರ್‌ ಅವರೇ ತಮ್ಮ ಫೇಸ್‌ಬುಕ್‌ ಖಾತೆಯಲ್ಲಿ ಮಾಹಿತಿ ಹಂಚಿಕೊಂಡಿದ್ದಾರೆ. ಅಲ್ಲದೇ, ಈ ಮೂಲಕ ಸಚಿವರು, ಗೃಹಲಕ್ಷ್ಮೀ ಯೋಜನೆ ಪಡೆಯಲು ಅರ್ಜಿ ಸಲ್ಲಿಸುವ ಫಲಾನುಭವಿಗಳಿಂದ ಹಣ ಪಡೆಯುವವರಿಗೆ ಖಡಕ್‌ ಸಂದೇಶ ರವಾನಿಸಿದ್ದಾರೆ. ಸರ್ಕಾರದ ಯೋಜನೆಗಳಲ್ಲಿ ಯಾವುದೇ ಅಕ್ರಮ, ಅವ್ಯವಹಾರವನ್ನು ನಾವು ಸಹಿಸುವುದಿಲ್ಲ. ಅಂತವರ ವಿರುದ್ಧ ಕ್ರಿಮಿನಲ್‌ ಮೊಕದ್ದಮೆ ದಾಖಲಿಸಲೂ ಸರ್ಕಾರ ಹಿಂಜರಿಯುವುದಿಲ್ಲ ಎಂದು ಎಚ್ಚರಿಸಿದ್ದಾರೆ.

Follow Us:
Download App:
  • android
  • ios