ಬಿಜೆಪಿ-ಜೆಡಿಎಸ್‌ ಮೈತ್ರಿ ಬಗ್ಗೆ ವರಿಷ್ಠರಾದ ಬಿ.ಎಸ್‌.ಯಡಿಯೂರಪ್ಪ, ಎಚ್‌.ಡಿ.ಕುಮಾರಸ್ವಾಮಿ ಆಡಿದ ಮಾತುಗಳನ್ನೂ ಕೇಳಿದ್ದೇನೆ. ಆದರೆ, ಈ ಕುರಿತು ಇನ್ನೂ ಅಧಿಕೃತ ಮಾಹಿತಿ ಹೊರಬಿದ್ದಿಲ್ಲ ಎಂದ ಮಾಜಿ ಸಚಿವ ಸಿ.ಟಿ.ರವಿ 

ಶಿವಮೊಗ್ಗ(ಸೆ.11): ಬಿ.ವೈ.ವಿಜಯೇಂದ್ರ ಅವರಿಗೆ ಪಕ್ಷದ ರಾಜ್ಯಾಧ್ಯಕ್ಷ ಸ್ಥಾನ ನೀಡಬೇಕು ಎಂದು ಒಂದೆಡೆ ಕಾರ್ಯಕರ್ತರು ಚರ್ಚೆ ಮಾಡುತ್ತಿದ್ದಾರೆ. ಆದರೆ ಅಂತಿಮವಾಗಿ ಪಕ್ಷದ ನಾಯಕರು ಈ ಬಗ್ಗೆ ತೀರ್ಮಾನ ತೆಗೆದುಕೊಳ್ಳುತ್ತಾರೆ. ಆದ್ದರಿಂದ ಈ ವಿಚಾರವಾಗಿ ಹೆಚ್ಚು ಮಾತನಾಡುವುದಿಲ್ಲ ಎಂದು ಮಾಜಿ ಸಚಿವ ಸಿ.ಟಿ.ರವಿ ಹೇಳಿದರು. 

ಭಾನುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜೆಡಿಎಸ್‌ ಜೊತೆಗಿನ ಮೈತ್ರಿ ಬಗ್ಗೆಯೂ ಇನ್ನೂ ಅಧಿಕೃತ ಮಾಹಿತಿ ಇಲ್ಲ ಎಂದೂ ಹೇಳಿದರು. 

ಕಾಂಗ್ರೆಸ್‌ ಅಧಿಕಾರಕ್ಕೆ ಬಂದಾಗ ರಾಜ್ಯದಲ್ಲಿ ಬರಗಾಲ ನಿಶ್ಚಿತ ಎಂಬುದು ಪುನಃ ಸಾಬೀತು: ಬಿ.ವೈ. ವಿಜಯೇಂದ್ರ

ಬಿಜೆಪಿ-ಜೆಡಿಎಸ್‌ ಮೈತ್ರಿ ಬಗ್ಗೆ ವರಿಷ್ಠರಾದ ಬಿ.ಎಸ್‌.ಯಡಿಯೂರಪ್ಪ, ಎಚ್‌.ಡಿ.ಕುಮಾರಸ್ವಾಮಿ ಆಡಿದ ಮಾತುಗಳನ್ನೂ ಕೇಳಿದ್ದೇನೆ. ಆದರೆ, ಈ ಕುರಿತು ಇನ್ನೂ ಅಧಿಕೃತ ಮಾಹಿತಿ ಹೊರಬಿದ್ದಿಲ್ಲ ಎಂದರು. ಇನ್ನು, ವಿಪಕ್ಷ ನಾಯಕನ ಆಯ್ಕೆ ವಿಚಾರದಲ್ಲಿ ಯಾಕೆ ವಿಳಂಬವಾಗುತ್ತಿದೆ ಎಂಬುದು ಸ್ಪಷ್ಟವಿಲ್ಲ. ಆದರೆ, ಕಾರಣವಿಲ್ಲದೇ ಕೇಂದ್ರದ ನಾಯಕರು ವಿಳಂಬ ಮಾಡುತ್ತಿಲ್ಲ ಎಂದಷ್ಟೆ ಹೇಳಿದರು.