Asianet Suvarna News Asianet Suvarna News

ಕಾಂಗ್ರೆಸ್‌ಗೆ ಎಸ್‌ಡಿಪಿಐ ದಯೆಯಲ್ಲಿ ಬದುಕುವ ಸ್ಥಿತಿ ಬಂದಿದೆ: ಸಂಸದ ಕ್ಯಾ. ಬ್ರಿಜೇಶ್‌ ಚೌಟ ಲೇವಡಿ

ಕಾಂಗ್ರೆಸ್‌ ಸಹಜವಾಗಿಯೇ ತನ್ನ ಡಿಎನ್‌ಎಗೆ ಅನುಗುಣವಾಗಿ ಎಸ್‌ಡಿಪಿಐ ಜತೆಗೆ ಮೈತ್ರಿ ಮಾಡಿಕೊಂಡು ಬಂಟ್ವಾಳ ಪುರಸಭೆಯ ಅಧ್ಯಕ್ಷ ಹಾಗೂ ಉಪಾಧ್ಯಕ್ಷ ಸ್ಥಾನವನ್ನು ಗೆದ್ದುಕೊಂಡಿದೆ. ಆ ಮೂಲಕ ಕಾಂಗ್ರೆಸ್‌ ತಾವು ಯಾರ ಜತೆಗಿದ್ದೇವೆ ಎನ್ನುವ ಸ್ಪಷ್ಟ ಸಂದೇಶವನ್ನು ಸಮಾಜಕ್ಕೆ ರವಾನಿಸಿದೆ: ದಕ್ಷಿಣ ಕನ್ನಡ ಸಂಸದ ಕ್ಯಾ. ಬ್ರಿಜೇಶ್‌ ಚೌಟ 

Dakshina Kannada bjp mp Captain Brijesh Chowta slams congress grg
Author
First Published Aug 23, 2024, 5:00 AM IST | Last Updated Aug 23, 2024, 5:00 AM IST

ಬಂಟ್ವಾಳ(ಆ.23):  ಮಾಜಿ ಸಚಿವ ರಮಾನಾಥ ರೈ ಕೃಪಾಪೋಷಿತ ‘ಬಂಟ್ವಾಳ ಕಾಂಗ್ರೆಸ್‌’ಗೆ ಇವತ್ತು ಎಸ್‌ಡಿಪಿಐನ ದಯೆಯಲ್ಲಿ ಬದುಕುವ ಶೋಚನೀಯ ಪರಿಸ್ಥಿತಿ ಬಂದಿದೆ ಎಂದು ದಕ್ಷಿಣ ಕನ್ನಡ ಸಂಸದ ಕ್ಯಾ. ಬ್ರಿಜೇಶ್‌ ಚೌಟ ಲೇವಡಿ ಮಾಡಿದ್ದಾರೆ.

ಬಂಟ್ವಾಳ ಪುರಸಭಾ ಅಧ್ಯಕ್ಷ- ಉಪಾಧ್ಯಕ್ಷರ ಚುನಾವಣಾ ಫಲಿತಾಂಶದ ಬಳಿಕ ಮಾಧ್ಯಮದ ಜತೆಗೆ ಮಾತನಾಡಿದ ಕ್ಯಾ. ಚೌಟ, ಕಾಂಗ್ರೆಸ್‌ ಸಹಜವಾಗಿಯೇ ತನ್ನ ಡಿಎನ್‌ಎಗೆ ಅನುಗುಣವಾಗಿ ಎಸ್‌ಡಿಪಿಐ ಜತೆಗೆ ಮೈತ್ರಿ ಮಾಡಿಕೊಂಡು ಬಂಟ್ವಾಳ ಪುರಸಭೆಯ ಅಧ್ಯಕ್ಷ ಹಾಗೂ ಉಪಾಧ್ಯಕ್ಷ ಸ್ಥಾನವನ್ನು ಗೆದ್ದುಕೊಂಡಿದೆ. ಆ ಮೂಲಕ ಕಾಂಗ್ರೆಸ್‌ ತಾವು ಯಾರ ಜತೆಗಿದ್ದೇವೆ ಎನ್ನುವ ಸ್ಪಷ್ಟ ಸಂದೇಶವನ್ನು ಸಮಾಜಕ್ಕೆ ರವಾನಿಸಿದೆ ಎಂದರು.

ನೈತಿಕತೆ ಇದ್ದರೆ ಸಿದ್ದರಾಮಯ್ಯ ರಾಜೀನಾಮೆ ನೀಡಬೇಕು: ನಳಿನ್‌ ಕುಮಾರ್‌ ಕಟೀಲ್‌

ಶಾಸಕ ರಾಜೇಶ್‌ ನಾಯ್ಕ್‌ ಮಾತನಾಡಿ, ಹೊಂದಾಣಿಕೆಯಿಂದ ಪುರಸಭೆಯ ಅಧಿಕಾರ ಪಡೆದುಕೊಂಡಿರುವ ಕಾಂಗ್ರೆಸ್‌ ನಡೆಯಿಂದ ಜನತೆಗೆ ಸ್ಪಷ್ಟವಾದ ಸಂದೇಶ ರವಾನೆ ಆಗಿದೆ ಎಂದರು. ಬಹಳಷ್ಟು ಸಮಯದಿಂದ ನಾವು ಮತೀಯವಾದಿಗಳೊಂದಿಗೆ ಇಲ್ಲ ಎಂದು ಹೇಳಿಕೊಂಡು ಬರುತ್ತಿದ್ದ ಕಾಂಗ್ರೆಸ್ ಒಳಗಿಂದ ಒಳಗೆ ಒಪ್ಪಂದ ಮಾಡಿಕೊಂಡೇ ಬರುತ್ತಿತ್ತು ಎಂದು ಆರೋಪಿಸಿದರು.

Latest Videos
Follow Us:
Download App:
  • android
  • ios