Asianet Suvarna News Asianet Suvarna News

ಯೋಗೇಶ್ವರ್ ದೊಡ್ಡವರು, ಅವರ ಮಾತಿಗೆ ಪ್ರತಿಕ್ರಿಯೆ ನೀಡುವಷ್ಟು ಸಮಯ ನನ್ನ ಬಳಿ ಇಲ್ಲ:ಡಿ.ಕೆ. ಶಿವಕುಮಾ‌ರ್

ನಮ್ಮ ರಾಜಕೀಯ ಅಂತ್ಯ ತೀರ್ಮಾನ ಮಾಡುವವರು ಜನರು. ಯೋಗೇಶ್ವರ್ ದೊಡ್ಡವರು. ಅವರ ಮಾತಿಗೆ ಪ್ರತಿಕ್ರಿಯೆ ನೀಡುವಷ್ಟು ಸಮಯ ನನ್ನ ಬಳಿ ಇಲ್ಲ. ನಾನೂ ರಾಮನಗರ ಜಿಲ್ಲೆಯವನು. ನಿಮ್ಮ ಋಣ ತೀರಿಸಲು ಬದ್ಧನಿದ್ದೇನೆ, ಶಕ್ತಿ ಕೊಡಿ ಎಂದು ಆ ಕ್ಷೇತ್ರದ ಜನರ ಬಳಿ ಕೇಳಿಕೊಂಡಿದ್ದೇನೆ. ನನ್ನ ಮೇಲೆ ವಿಶ್ವಾಸವಿದ್ದರೆ ಬೆಂಬಲ ನೀಡುತ್ತಾರೆ ಎಂದ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾ‌ರ್ 

DCM DK Shiavakumar React to BJP MLC CP Yogeshwar Statement grg
Author
First Published Jun 22, 2024, 6:17 AM IST

ಬೆಂಗಳೂರು(ಜೂ.22):  ರಾಜಕಾರಣಿಗಳ ಅಂತ್ಯವನ್ನು ತೀರ್ಮಾನಿಸುತ್ತಾರೆ. ನನ್ನ ರಾಜಕೀಯ ತೀರ್ಮಾನ ಮಾಡುವವರು ಜನರು ಎಂದು ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾ‌ರ್ ಅವರು ಮಾಜಿ ಸಚಿವ ಸಿ.ಪಿ.ಯೋಗೇಶ್ವರ್ ತಿರುಗೇಟು ನೀಡಿದರು. ಅವರಿಗೆ ಅಂತ್ಯ ಅಲ್ಲದೆ, ಉಪ ಚುನಾವಣೆಯನ್ನು ಕಾಂಗ್ರೆಸ್ ಪಕ್ಷ ನನ್ನ ನಾಯಕತ್ವದಲ್ಲಿ ಎದುರಿಸಲಿದೆ. ನಾನು ಹಾಗೂ ಸಿದ್ದರಾಮಯ್ಯ ಸೇರಿ ಚುನಾವಣೆ ನಡೆಸುತ್ತೇವೆ ಎಂದರು.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜನರೇ ನನ್ನ ಹಿಂದಿರುವ ಶಕ್ತಿ. ರಾಮನಗರ, ಚನ್ನಪಟ್ಟಣದ ಜನರ ಮೇಲೆ ನನಗೆ ನಂಬಿಕೆ ಇದೆ. ಅವರ ಋಣ ತೀರಿಸಬೇಕಿದೆ. 'ಚನ್ನಪಟ್ಟಣದಿಂದ ಸ್ಪರ್ಧೆ ಮಾಡಿದರೆ ಶಿವಕುಮಾರ್‌ ಅವರ ರಾಜಕೀಯ ಭವಿಷ್ಯ ಅಂತ್ಯವಾಗಲಿದೆ' ಎಂದು ಯೋಗೇಶ್ವರ್ ಹೇಳಿಕೆ ನೀಡಿದ್ದಾರೆ. 

ಡಿಸಿಎಂ ಡಿ.ಕೆ. ಶಿವಕುಮಾರ್ ಚನ್ನಪಟ್ಟಣಕ್ಕೆ ಬರುತ್ತಿರುವುದಕ್ಕೆ ಭಯ ಶುರುವಾಗಿದೆ: ಸಿ.ಪಿ. ಯೋಗೇಶ್ವರ್

ನಮ್ಮ ರಾಜಕೀಯ ಅಂತ್ಯ ತೀರ್ಮಾನ ಮಾಡುವವರು ಜನರು. ಯೋಗೇಶ್ವರ್ ದೊಡ್ಡವರು. ಅವರ ಮಾತಿಗೆ ಪ್ರತಿಕ್ರಿಯೆ ನೀಡುವಷ್ಟು ಸಮಯ ನನ್ನ ಬಳಿ ಇಲ್ಲ. ನಾನೂ ರಾಮನಗರ ಜಿಲ್ಲೆಯವನು. ನಿಮ್ಮ ಋಣ ತೀರಿಸಲು ಬದ್ಧನಿದ್ದೇನೆ, ಶಕ್ತಿ ಕೊಡಿ ಎಂದು ಆ ಕ್ಷೇತ್ರದ ಜನರ ಬಳಿ ಕೇಳಿಕೊಂಡಿದ್ದೇನೆ. ನನ್ನ ಮೇಲೆ ವಿಶ್ವಾಸವಿದ್ದರೆ ಬೆಂಬಲ ನೀಡುತ್ತಾರೆ ಎಂದು ಪ್ರತಿಕ್ರಿಯಿಸಿದರು.

ಸ್ವಪ್ರತಿಷ್ಠೆಗಾಗಿ ದೇಶದ ಸಂಪತ್ತು ಹಾಳು ಮಾಡುತ್ತಿದ್ದಾರೆ ಎಂಬ ಬಿಜೆಪಿ ಶಾಸಕ ಸುರೇಶ್ ಕುಮಾರ್‌ಹೇಳಿಕೆಗೆ ಪ್ರತಿಕ್ರಿಯಿಸಿ, 'ಚನ್ನಪಟ್ಟಣದಲ್ಲಿ ಉಪಚುನಾವಣೆ ನಡೆದರೆ ಕನಕಪುರದಲ್ಲಿ ಯಾಕೆ ಉಪಚುನಾವಣೆ ನಡೆಯುತ್ತದೆ? ನಾನು ಕನಕಪುರದ ಶಾಸಕ, ಪಕ್ಷದ ಅಧ್ಯಕ್ಷನಾಗಿ ನನ್ನ ಮೇಲೆ ಜವಾಬ್ದಾರಿ ಇದೆ. ಇದೂ ನನ್ನದೇಕ್ಷೇತ್ರ, ನನ್ನದೇ ನಾಯಕತ್ವ, ಸಿದ್ದರಾಮಯ್ಯ ಹಾಗೂ ನಾನು ಸೇರಿ ಚುನಾವಣೆ ನಡೆಸುತ್ತೇವೆ ಎಂದು ಉತ್ತರಿಸಿದರು.

Latest Videos
Follow Us:
Download App:
  • android
  • ios