ಮತ್ತೆ ಆಪರೇಷನ್ ಹಸ್ತದ ಸುಳಿವು ನೀಡಿದ ಡಿಕೆಶಿ
ಶಿರಹಟ್ಟಿಯ ಬಿಜೆಪಿ ಮಾಜಿ ಶಾಸಕ ರಾಮಣ್ಣ ಲಮಾಣಿ, ಮೂಡಿಗೆರೆ ಮಾಜಿ ಶಾಸಕ ಹಾಗೂ ಜೆಡಿಎಸ್ ಪರಾಜಿತ ಅಭ್ಯರ್ಥಿ ಎಂ.ಪಿ.ಕುಮಾರಸ್ವಾಮಿ ಅವರು ಮಾಜಿ ಸಿಎಂ ಜಗದೀಶ್ ಶೆಟ್ಟರ್ ನೇತೃತ್ವದಲ್ಲಿ ಡಿಕೆಶಿ ಅವರನ್ನು ಭೇಟಿಯಾಗಿದ್ದಾರೆ

ಬೆಂಗಳೂರು(ಸೆ.28): ಬಿಜೆಪಿ- ಜೆಡಿಎಸ್ ಮೈತ್ರಿ ವಿರೋಧಿಸಿ ಆ ಪಕ್ಷಗಳನ್ನು ತೊರೆಯಲು ಹಲವು ಮಂದಿ ನಿರ್ಧರಿಸಿದ್ದಾರೆ. ಆ ಪೈಕಿ ಮಂಗಳವಾರ ರಾತ್ರಿ ಮೂವರು ಮಾಜಿ ಶಾಸಕರ ಜತೆ ಮಾತುಕತೆ ನಡೆಸಿದ್ದೇನೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ತಿಳಿಸಿದ್ದಾರೆ.
ಇದರ ಬೆನ್ನಲ್ಲೇ ಬುಧವಾರ ಸಂಜೆ ಶಿರಹಟ್ಟಿಯ ಬಿಜೆಪಿ ಮಾಜಿ ಶಾಸಕ ರಾಮಣ್ಣ ಲಮಾಣಿ, ಮೂಡಿಗೆರೆ ಮಾಜಿ ಶಾಸಕ ಹಾಗೂ ಜೆಡಿಎಸ್ ಪರಾಜಿತ ಅಭ್ಯರ್ಥಿ ಎಂ.ಪಿ.ಕುಮಾರಸ್ವಾಮಿ ಅವರು ಮಾಜಿ ಸಿಎಂ ಜಗದೀಶ್ ಶೆಟ್ಟರ್ ನೇತೃತ್ವದಲ್ಲಿ ಡಿಕೆಶಿ ಅವರನ್ನು ಭೇಟಿಯಾಗಿದ್ದಾರೆ. ಇದು ಸಂಚಲನಕ್ಕೆ ಕಾರಣವಾಗಿದೆ.
ಕಾವೇರಿ ವಿವಾದ ಡಿಕೆ ಶಿವಕುಮಾರ್ ಹೆಗಲಿಗಿಟ್ಟು ಸೈಲೆಂಟ್ ಆದ ಸಿದ್ದರಾಮಯ್ಯ!
ಮತ್ತೊಂದು ಬಂದ್ ಅಗತ್ಯವಿಲ್ಲ, ಮಳೆಗಾಗಿ ಪ್ರಾರ್ಥನೆ ಮಾಡೋಣ
ವಿವಿಧ ಸಂಘಟನೆಗಳು ಮಂಗಳವಾರ ಕರೆ ನೀಡಿದ್ದ ಬೆಂಗಳೂರು ಬಂದ್ ವೇಳೆ ರಾಜ್ಯದ ಶಾಂತಿಯುತ ಪ್ರತಿಭಟನೆ ಮೂಲಕ ತಮ್ಮ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಹಾಗಾಗಿ ಸೆ.29ರಂದು ಮತ್ತೊಂದು ಬಂದ್ ಮಾಡುವ ಅಗತ್ಯವಿಲ್ಲ. ನ್ಯಾಯಾಲಯ ಕೂಡ ಇದಕ್ಕೆ ಅವಕಾಶ ನೀಡುವುದಿಲ್ಲ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾವೇರಿ ವಿಚಾರವಾಗಿ ಪಕ್ಷಾತೀತವಾಗಿ ಹೋರಾಟ ಮಾಡಿದ ಎಲ್ಲರಿಗೂ ಧನ್ಯವಾದ ತಿಳಿಸುತ್ತೇನೆ. ಎಲ್ಲವೂ ಶಾಂತಿಯುತವಾಗಿ ನಡೆದಿದೆ.
ಈ ಮಧ್ಯೆ, ಕೆಲ ಸಂಘಟನೆಗಳು ಸೆ.29ಕ್ಕೆ ಮತ್ತೆ ರಾಜ್ಯ ಬಂದ್ ಮಾಡುವ ಹೇಳಿಕೆಗಳನ್ನು ನೀಡುತ್ತಿದ್ದಾರೆ. ಇದರ ಅಗತ್ಯವಿಲ್ಲ. ನ್ಯಾಯಾಲಯ ಕೂಡ ಇದಕ್ಕೆ ಅವಕಾಶ ನೀಡುವುದಿಲ್ಲ ಎಂದು ಭಾವಿಸಿದ್ದೇನೆ. ಹಾಗಾಗಿ ಮುಂದೆ ರಾಜ್ಯದ ಜನರೆಲ್ಲರೂ ಮಳೆಗಾಗಿ ಪ್ರಾರ್ಥನೆ ಮಾಡೋಣ ಎಂದರು. ಇನ್ನು, ಬಂದ್ ವೇಳೆ ಜಯನಗರದ ಹೋಟೆಲ್ ವೊಂದರ ಮೇಲೆ ಕಲ್ಲು ತೂರಿ ಕೆಲ ಕಿಡಿಗೇಡಿಗಳು ದಾಂಧಲೆ ನಡೆಸಿರುವ ಪ್ರಕರಣ ಸಂಬಂಧ ಅವರು ಯಾರೇ ಆಗಿದ್ದರು ಪತ್ತೆ ಹಚ್ಚಿ ಕಾನೂನು ಕ್ರಮ ಜರುಗಿಸಲಾಗುವುದು ಎಂದು ಇದೇ ವೇಳೆ ಡಿ.ಕೆ.ಶಿವಕುಮಾರ್ ಹೇಳಿದರು.