DK Shivakumar Special Interview: ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಏಷ್ಯಾನೆಟ್ ಸುವರ್ಣನ್ಯೂಸ್‌ಗೆ ನೀಡಿದ ವಿಶೇಷ ಸಂದರ್ಶನದಲ್ಲಿ, ಅಧಿಕಾರ ಹಂಚಿಕೆ, ಸಂಪುಟ ಪುನಾರಚನೆ ಮತ್ತು ಸಿಎಂ ಸ್ಥಾನದ ಬಗ್ಗೆ ಮಾತನಾಡಿದ್ದಾರೆ.
ಬೆಂಗಳೂರು: ಡಿಸಿಎಂ ಡಿ.ಕೆ.ಶಿವಕುಮಾರ್ ಏಷ್ಯಾನೆಟ್ ಸುವರ್ಣನ್ಯೂಸ್‌ಗೆ ಮೆಗಾ ಎಕ್ಸ್‌ಕ್ಲೂಸಿವ್ ಸಂದರ್ಶನ ನೀಡಿದ್ದಾರೆ. ನವೆಂಬರ್ ಕ್ರಾಂತಿ ಸೇರಿದಂತೆ ರಾಜ್ಯ ರಾಜಕಾರಣದಲ್ಲಾಗುತ್ತಿರುವ ಬೆಳವಣಿಗೆ ಕುರಿತು ನೇರಾನೇರವಾಗಿ ಮಾತನಾಡಲಾಗಿದೆ. ಗ್ರೇಟರ್ ಬೆಂಗಳೂರು ಪ್ರಾಧಿಕಾರದ ರಚನೆ, ಸಂಪುಟ ಪುನಾರಚನೆ ಮತ್ತು ಅಧಿಕಾರ ಹಂಚಿಕೆಯ ಕುರಿತು ಕೇಳಲಾದ ಎಲ್ಲಾ ಕುತೂಹಲಕಾರಿ ಪ್ರಶ್ನೆಗಳಿಗೆ ಡಿಕೆ ಶಿವಕುಮಾರ್ ಉತ್ತರಿಸಿದ್ದಾರೆ.
ಡಿಕೆ ಶಿವಕುಮಾರ್ ಸ್ಪಷ್ಟ ಅಭಿಪ್ರಾಯ
ಶಾಸಕರ ಬಲಾಬಲದ ಮೇಲೆ ಸಿಎಂ ಸ್ಥಾನ ಸ್ಥಾನ ನಿರ್ಧಾರವಾಗಲ್ಲ. ಶಾಸಕರ ಬಲ ಸಿದ್ದರಾಮಯ್ಯ ಅವರಿಗಿದೆ ಎಂಬ ಚರ್ಚೆಗೂ ಡಿಕೆ ಶಿವಕುಮಾರ್ ಸ್ಪಷ್ಟಪಡಿಸಿದ್ದಾರೆ.ಹೈಕಮಾಂಡ್ ಮಾತೇ ಅಂತಿಮ, ವರಿಷ್ಠರು ಹೇಳಿದ್ದನ್ನು ನಾವಿಬ್ಬರೂ ಕೇಳಬೇಕು. ಹೈಕಮಾಂಡ್ ಏನ್ ಕೆಲಸ ಕೊಡ್ತಾರೆ, ಅದನ್ನ ನಾವು ಒಪ್ಪಿಕೊಳ್ಳಲೇಬೇಕು ಎಂದು ಅಧಿಕಾರ ಹಸ್ತಾಂತರದ ಬಗ್ಗೆ ಡಿಕೆ ಶಿವಕುಮಾರ್ ಸ್ಪಷ್ಟ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.
ಇದನ್ನೂ ಓದಿ: RSSಗೆ ಅವಮಾನ ಮಾಡಿದ್ದು ನಾನಲ್ಲ, ಮುನಿರತ್ನ; ಡಿಸಿಎಂ ಡಿಕೆ ಶಿವಕುಮಾರ್ ಫಸ್ಟ್ ರಿಯಾಕ್ಷನ್
ಸಂದರ್ಶನ ಪ್ರಸಾರದ ಸಮಯ
ಹೈಕಮಾಂಡ್ ನಿರ್ಧರಿಸುತ್ತೆ ಎಂಬ ಸಿದ್ದರಾಮಯ್ಯ ಮಾತಿನಲ್ಲೇ ಉತ್ತರ ಇದೆ ಎಂದು ಡಿಕೆ ಶಿವಕುಮಾರ್ ಹೇಳಿದ್ದಾರೆ. ಇದೇ ಸಂದರ್ಶನದಲ್ಲಿ ತಮ್ಮ ವಿರುದ್ಧ ಬಿಜೆಪಿ ಮಾಡುತ್ತಿರುವ ಆರೋಪಗಳಿಗೆ ತಿರುಗೇಟು ನೀಡಿರುವ ಸಿದ್ದರಾಮಯ್ಯ, ಬಿಜೆಪಿ ಯುವ ಸಂಸದರಿಗೂ ಸವಾಲು ಹಾಕಿದ್ದಾರೆ. ರಾಜಕೀಯ ಕುರಿತು ಸಂದರ್ಶನದಲ್ಲಿ ಡಿಕೆ ಶಿವಕುಮಾರ್ ಮಾತನಾಡಿದ್ದು, ಈ ಕಾರ್ಯಕ್ರಮ ಇಂದು ರಾತ್ರಿ 8.30 ಗಂಟೆಗೆ ಏಷ್ಯಾನೆಟ್ ಸುವರ್ಣ ನ್ಯೂಸ್‌ನಲ್ಲಿ ಪ್ರಸಾರವಾಗಲಿದೆ.
ಇದನ್ನೂ ಓದಿ: ಬಿಜೆಪಿ ಶಾಸಕ ಮುನಿರತ್ನ ಆರೋಪಗಳಿಗೆ ಕುಸುಮಾ ಹನುಮಂತರಾಯಪ್ಪ ಮೊದಲ ಪ್ರತಿಕ್ರಿಯೆ
