Asianet Suvarna News Asianet Suvarna News

ಬಂದ್‌ನಿಂದ ಯಾರಿಗೇನು ಲಾಭ, ಇದರಿಂದ ಬೆಂಗಳೂರಿನ ಘನತೆಗೆ ಧಕ್ಕೆ: ಡಿಕೆಶಿ

ರಾಜ್ಯದ ರೈತರ ಹಿತ ಕಾಯಲು ಸರ್ಕಾರ ಬದ್ಧವಾಗಿದೆ. ಆದರೂ ವಿರೋಧ ಪಕ್ಷಗಳು ಕಾವೇರಿ ಸಮಸ್ಯೆಗೆ ರಾಜಕೀಯ ಆಯಾಮ ನೀಡುತ್ತಿವೆ. ಯಡಿಯೂರಪ್ಪ, ಬೊಮ್ಮಾಯಿ, ಕುಮಾರಸ್ವಾಮಿ ಅವರು ಹೊಸ ಹುರುಪಿನಲ್ಲಿ ಅವರದೇ ರಾಜಕೀಯ ಮಾಡಲು ಮುಂದಾಗಿದ್ದಾರೆ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

DCM DK Shivakumar Reaction On Bengaluru Bandh gvd
Author
First Published Sep 24, 2023, 7:23 AM IST

ಬೆಂಗಳೂರು (ಸೆ.24): ರಾಜ್ಯದ ರೈತರ ಹಿತ ಕಾಯಲು ಸರ್ಕಾರ ಬದ್ಧವಾಗಿದೆ. ಆದರೂ ವಿರೋಧ ಪಕ್ಷಗಳು ಕಾವೇರಿ ಸಮಸ್ಯೆಗೆ ರಾಜಕೀಯ ಆಯಾಮ ನೀಡುತ್ತಿವೆ. ಯಡಿಯೂರಪ್ಪ, ಬೊಮ್ಮಾಯಿ, ಕುಮಾರಸ್ವಾಮಿ ಅವರು ಹೊಸ ಹುರುಪಿನಲ್ಲಿ ಅವರದೇ ರಾಜಕೀಯ ಮಾಡಲು ಮುಂದಾಗಿದ್ದಾರೆ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಇದೇ ವೇಳೆ ಬೆಂಗಳೂರು ಬಂದ್‌ಗೆ ಕರೆ ನೀಡಿರುವುದಕ್ಕೆ ಆಕ್ಷೇಪ ವ್ಯಕ್ತಪಡಿಸಿರುವ ಅವರು, ‘ಬೆಂಗಳೂರಿನ ಘನತೆಗೆ ಧಕ್ಕೆ ಮಾಡಿದರೆ ನಿಮ್ಮ ಹೃದಯಕ್ಕೆ ನೀವೇ ಚುಚ್ಚಿಕೊಂಡಂತೆ. 

ನಾವು ಎಲ್ಲಾ ರೀತಿಯಲ್ಲಿ ರೈತರ ಹಿತ ಕಾಯುತ್ತಿದ್ದೇವೆ. ಈ ಬಂದ್‌ನಿಂದ ಯಾರಿಗೇನು ಲಾಭ? ಹೋರಾಟಕ್ಕೆ ನಮ್ಮ ಆಕ್ಷೇಪವಿಲ್ಲ. ಆದರೆ ಅನಗತ್ಯ ಬಂದ್‌ ಯಾಕೆ? ದಯಮಾಡಿ ಬಂದ್‌ನಂತಹ ತಪ್ಪು ಮಾಡಬೇಡಿ’ ಎಂದು ಮನವಿ ಮಾಡಿದ್ದಾರೆ. ಕಾಂಗ್ರೆಸ್ ನಾಯಕರು ತಮಿಳುನಾಡಿನ ಏಜೆಂಟರಂತೆ ವರ್ತಿಸುತ್ತಿದ್ದಾರೆ ಎಂಬ ಯಡಿಯೂರಪ್ಪ ಅವರ ಹೇಳಿಕೆಗೆ, ‘ನಾವೇನು ಮೂರ್ಖರೇ? ರಾಜ್ಯದ ಹಾಗೂ ಎಲ್ಲಾ ರೈತರ ರಕ್ಷಣೆಯ ಕೆಲಸ ಮಾಡುತ್ತಿದ್ದೇವೆ’ ಎಂದು ತಿಳಿಸಿದರು.

ರಾಜ್ಯ ಸರ್ಕಾರಕ್ಕೆ ಹಿಂದೂ ಚಟುವಟಿಕೆ, ಕಾರ್ಯಕರ್ತರೇ ಟಾರ್ಗೆಟ್‌: ಜೋಶಿ ಕಿಡಿ

ಬೇಕಿದ್ದರೆ ನಮಗೆ ಬೈಯಿರಿ: ತಮಿಳುನಾಡಿಗೆ ಕೆಆರ್‌ಎಸ್‌ನಿಂದ ಕಾವೇರಿ ನೀರು ಹರಿಸುತ್ತಿರುವ ಸರ್ಕಾರದ ಕ್ರಮ ವಿರೋಧಿಸಿ ಶುಕ್ರವಾರ ಕರೆ ನೀಡಿರುವ ಮಂಡ್ಯ ಬಂದ್ ಕುರಿತು ಪ್ರತಿಕ್ರಿಯೆ ನೀಡಿರುವ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌, ಬಂದ್‌ ಮಾಡುವುದರಿಂದ ಏನೂ ಪರಿಹಾರ ಸಿಗುವುದಿಲ್ಲ. ಬಂದ್‌ ಮಾಡಿ ಜನರಿಗೆ ತೊಂದರೆ ಮಾಡಬೇಡಿ. ಕೋಪ ಇದ್ದರೆ ಎಷ್ಟಾದ್ರೂ ಬೈಯಿರಿ. ನಾವು ಅಧಿಕಾರಲ್ಲಿ ಇರುವವರು ಬೈಸಿಕೊಳ್ಳಲು ಸಿದ್ಧರಿದ್ದೇವೆ ಎಂದಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಸರ್ಕಾರ ಜನರ ಪರವಾಗಿದೆ. ಅಹಿತಕರ ಘಟನೆಗಳು ನಡೆದರೆ ರಾಜ್ಯದ ಘನತೆಗೆ ಧಕ್ಕೆಯಾಗುತ್ತದೆ. ಈ ವಿಚಾರದಲ್ಲಿ ಕೇಂದ್ರ ಜಲಶಕ್ತಿ ಸಚಿವರು ತಮ್ಮ ಕೈಲಾದಷ್ಟು ಸಹಕಾರ ನೀಡುವುದಾಗಿ ಹೇಳಿದ್ದಾರೆ. ಎರಡೂ ರಾಜ್ಯದವರನ್ನು ಕರೆದು ಮಾತನಾಡುವುದಾಗಿ ತಿಳಿಸಿದ್ದಾರೆ. ಇನ್ನು ಸುಪ್ರೀಂ ಕೋರ್ಟ್‌ ಮುಂದೆ ನಾವು ವಾಸ್ತವಾಂಶವನ್ನು ಮತ್ತೊಮ್ಮೆ ಮನವರಿಕೆ ಮಾಡಿಕೊಡಬೇಕಿದೆ. ಆ ಕೆಲಸವನ್ನು ನಮ್ಮ ನ್ಯಾಯವಾದಿಗಳು ಮಾಡಲಿದ್ದಾರೆ. ಜನರು ಅರ್ಥಮಾಡಿಕೊಳ್ಳಬೇಕು’ ಎಂದರು.

ಮಂಡ್ಯ ನಗರ, ಮದ್ದೂರು ಬಂದ್‌ ಭರ್ಜರಿ ಯಶಸ್ವಿ: ಸ್ಟಾಲಿನ್ ಪ್ರತಿಕೃತಿ ದಹಿಸಿ ಆಕ್ರೋಶ

‘ತಮಿಳುನಾಡು ನಿತ್ಯ 24 ಸಾವಿರ ಕ್ಯೂಸೆಕ್‌ ನೀರು ಕೇಳಿತ್ತು. ನಮ್ಮ ಅಧಿಕಾರಿಗಳು ಎರಡು ಸಮಿತಿಗಳ ಮುಂದೆ ವಾಸ್ತವಾಂಶ ತಿಳಿಸಿ 10 ಸಾವಿರ ಕ್ಯೂಸೆಕ್‌ ನೀರಿಗೆ ಒಪ್ಪಿದ್ದೆವು. ನಂತರ ಮತ್ತೆ ಒತ್ತಡ ತಂದು ಅದನ್ನು 5000 ಕ್ಯೂಸೆಕ್‌ಗೆ ಇಳಿಸಿದೆವು. ಮಳೆಯಾಗುತ್ತದೆ ಎಂಬ ನಿರೀಕ್ಷೆ ಇತ್ತು. ಮಳೆಯಾಗದ್ದಕ್ಕೆ ಈಗ ಅಷ್ಟು ನೀರನ್ನೂ ಬಿಡಲಾಗುವುದಿಲ್ಲ ಎಂದು ಮೇಲ್ಮನವಿ ಹೋಗಿದ್ದೆವು. ಆದರೆ, ಮೇಲ್ಮನವಿಯನ್ನು ಸುಪ್ರೀಂ ಕೋರ್ಟ್‌ ತಿರಸ್ಕರಿಸಿದೆ. ಈಗ ಸೆ.27ರವರೆಗೆ 5000 ಕ್ಯೂಸೆಕ್‌ ನೀರು ಬಿಡಬೇಕಾಗಿದೆ. ಇಂತಹ ಪರಿಸ್ಥಿತಿ ಈಗಷ್ಟೇ ಅಲ್ಲ ಬೇರೆ ಬೇರೆ ಸರ್ಕಾರಗಳ ಕಾಲದಲ್ಲೂ ಉದ್ಭವಿಸಿತ್ತು. ಪ್ರತಿಪಕ್ಷದಲ್ಲಿರುವ ಕಾರಣಕ್ಕೆ ಮಾಜಿ ಮುಖ್ಯಮಂತ್ರಿಗಳಾದ ಯಡಿಯೂರಪ್ಪ, ಕುಮಾರಸ್ವಾಮಿ, ಬಸವರಾಜ ಬೊಮ್ಮಾಯಿ ಅವರು ನೀರು ಬಿಡಬಾರದು ಎಂದು ಹೇಳಬಹುದು. ಆದರೆ, ಅವರ ಅಧಿಕಾರಾವಧಿಯಲ್ಲಿ ಏನು ಮಾಡಿದ್ದಾರೆ ಎನ್ನುವ ದಾಖಲೆಗಳು ಸರ್ಕಾರದಲ್ಲಿವೆ’ ಎಂದರು.

Follow Us:
Download App:
  • android
  • ios