Asianet Suvarna News Asianet Suvarna News

ಕಾವೇರಿ ಅನ್ಯಾಯಕ್ಕೆ ರಾಜ್ಯ ಬಿಜೆಪಿಗರು ಕಾರಣ: ಮತ್ತೆ ತ.ನಾಡಿಗೆ 2 ದಿನ ನೀರು ಹರಿಸುತ್ತೇವೆಂದ ಡಿಕೆಶಿ

ಪ್ರಧಾನಮಂತ್ರಿ ನರೇಂದ್ರ ಮೋದಿ ಎದುರು ಮಾತಾಡುವ ಧೈರ್ಯವಿಲ್ಲದ ಬಿಜೆಪಿ ನಾಯಕರು, ಸಂಸದರಿಂದಲೇ ರಾಜ್ಯದ ಹಿತಕ್ಕೆ ಧಕ್ಕೆಯಾಗಿದೆ. ಕಾವೇರಿ ವಿಚಾರ, ರಾಜ್ಯದ ಹಿತಾಸಕ್ತಿಯ ವಿಚಾರಗಳಲ್ಲಿ ರಾಜ್ಯಕ್ಕೆ ತೊಂದರೆ, ಅನ್ಯಾಯ ಆಗುತ್ತಿರುವುದು ಬಿಜೆಪಿಯವರಿಂದಲೇ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಕಿಡಿಕಾರಿದ್ದಾರೆ. 

DCM DK Shivakumar Slams On BJP Over Cauvery Water Issue gvd
Author
First Published Sep 16, 2023, 4:45 AM IST

ಬೆಂಗಳೂರು (ಸೆ.16): ಪ್ರಧಾನಮಂತ್ರಿ ನರೇಂದ್ರ ಮೋದಿ ಎದುರು ಮಾತಾಡುವ ಧೈರ್ಯವಿಲ್ಲದ ಬಿಜೆಪಿ ನಾಯಕರು, ಸಂಸದರಿಂದಲೇ ರಾಜ್ಯದ ಹಿತಕ್ಕೆ ಧಕ್ಕೆಯಾಗಿದೆ. ಕಾವೇರಿ ವಿಚಾರ, ರಾಜ್ಯದ ಹಿತಾಸಕ್ತಿಯ ವಿಚಾರಗಳಲ್ಲಿ ರಾಜ್ಯಕ್ಕೆ ತೊಂದರೆ, ಅನ್ಯಾಯ ಆಗುತ್ತಿರುವುದು ಬಿಜೆಪಿಯವರಿಂದಲೇ ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌ ಕಿಡಿಕಾರಿದ್ದಾರೆ. ಬೆಂಗಳೂರಿನ ಕುಮಾರಕೃಪಾ ಅತಿಥಿಗೃಹದ ಬಳಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾವೇರಿ ನೀರಿನ ವಿಚಾರದಲ್ಲಿ ಕಾಂಗ್ರೆಸ್ ರಾಜಕೀಯ ಮಾಡುತ್ತಿದೆ ಎಂದು ಬಿಜೆಪಿ ಆರೋಪ ಮಾಡುತ್ತಿದೆ. ಈ ಬಗ್ಗೆ ಮಾತನಾಡುವ ನೈತಿಕತೆ ಅವರಿಗೆ ಇಲ್ಲ.

ಕೇಂದ್ರ ಪರಿಸರ ಇಲಾಖೆಯಿಂದ ಅನೇಕ ಕಾಮಗಾರಿ ಹಾಗೂ ಯೋಜನೆಗಳಿಗೆ ಅನುಮತಿ ದೊರೆಯುವುದು ಬಾಕಿಯಿದೆ. ಅವುಗಳಿಗೆ ನಿರಪೇಕ್ಷಣಾ ಪತ್ರ ತರಲು ಬಿಜೆಪಿ ಕೈಯಲ್ಲಿ ಆಗಿಲ್ಲ. ರಾಜ್ಯದ ಅಭಿವೃದ್ದಿಗೆ ಅವರಿಂದಲೇ ತೊಂದರೆ ಆಗುತ್ತಿದೆ. ನೀರಿನ ವಿಚಾರದಲ್ಲಿ ರಾಜಕಾರಣ ನಮಗೆ ಬೇಕಿಲ್ಲ. ಎಲ್ಲರೂ ಒಟ್ಟಿಗೆ ಸೇರಿ ಕೆಲಸ ಮಾಡೋಣ ಎನ್ನುವುದು ನನ್ನ ಧೋರಣೆ. ಬಿಜೆಪಿಯವರು ನನಗೆ ಬೈಯಲಿ, ಉಗಿಯಲಿ, ಏನು ಬೇಕಾದರೂ ಹೇಳಲಿ, ನಾನು ರಾಜ್ಯದ ಹಿತಾಸಕ್ತಿಗೆ ಕೆಲಸ ಮಾಡುತ್ತೇನೆ ಎಂದು ಸ್ಪಷ್ಟಪಡಿಸಿದರು. ಎಲ್ಲಾ ನದಿ ವ್ಯಾಜ್ಯಗಳು ಮೂರು ವರ್ಷಗಳಲ್ಲಿ ಇಥ್ಯರ್ತವಾಗಬೇಕು ಎಂದು ಕೇಂದ್ರ ಸರ್ಕಾರವೇ ಕಾನೂನು ಮಾಡಿದೆ. 

ಬಿಜೆಪಿಯವರ ತಟ್ಟೆಯಲ್ಲಿ ಹೆಗ್ಗಣ ಬಿದ್ದಿದೆ: ಸಚಿವ ಭೈರತಿ ಸುರೇಶ್ ಹೀಗೆ ಹೇಳಿದ್ಯಾಕೆ?

ಅವರೇ ಎರಡೂ ರಾಜ್ಯಗಳನ್ನು ಕೂರಿಸಿಕೊಂಡು ಸಮಸ್ಯೆ ಬಗೆಹರಿಸಬಹುದಲ್ಲವೇ? ಎಂಥೆಂಥ ಸಮಸ್ಯೆಗಳನ್ನು ಬಗೆಹರಿಸಲಾಗುತ್ತದೆ, ಇದು ಆಗುವುದಿಲ್ಲವೇ? ಮೇಕೆದಾಟು ಯೋಜನೆ ಆಗಿದ್ದರೆ ಈ ಸಮಸ್ಯೆ ಬರುತ್ತಿರಲಿಲ್ಲ ಎಂದು ಕೇಂದ್ರದ ವಿರುದ್ಧವೂ ಅಸಮಾಧಾನ ವ್ಯಕ್ತಪಡಿಸಿದರು. ಇಂಡಿಯಾ ಒಕ್ಕೂಟಕ್ಕಾಗಿ ಸಭೆ ನಡೆಸುತ್ತಾರೆ, ನೀರಿನ ವಿಚಾರಕ್ಕೆ ತಮಿಳುನಾಡು ಜತೆ ಸಭೆ ನಡೆಸಲು ಆಗುವುದಿಲ್ಲವೇ ಎಂಬ ಪ್ರತಿಪಕ್ಷಗಳ ಹೇಳಿಕೆಗೆ, ನಾವು ಎಲ್ಲಾ ಸಭೆ ಮಾಡಿದ್ದೇವೆ. ಆಯಾಯ ನಾಯಕರಿಗೆ ಅವರವರ ರಾಜ್ಯಗಳ ಹಿತಾಸಕ್ತಿ ಮುಖ್ಯ. ಮೇಲೆ ಕುಳಿತಿರುವ ಕೇಂದ್ರ ಸರ್ಕಾರಕ್ಕೆ ವಾಸ್ತವಾಂಶ ಗೊತ್ತಿದೆ. ಇಬ್ಬರನ್ನು ಕರೆಸಿ ಮಾತುಕತೆ ನಡೆಸಲಿ ಎಂದು ಹೇಳಿದರು.

2 ದಿನ ಕಾವೇರಿ ನೀರು ಬಿಡಲು ತಜ್ಞರ ಸಲಹೆ: ಕಾವೇರಿ ನೀರು ಹರಿಸಲು ಸಾಧ್ಯವಿಲ್ಲ ಎಂದು ಕೇಂದ್ರ ಸರ್ಕಾರಕ್ಕೆ ಹಾಗೂ ಸುಪ್ರೀಂ ಕೋರ್ಟಿಗೆ ಮನವಿ ಸಲ್ಲಿಸುವ ಮೊದಲು ಎರಡು ದಿನ ನೀರು ಹರಿಸಿ ಎಂದು ಕಾನೂನು ತಜ್ಞರು ಸಲಹೆ ನೀಡಿದ್ದಾರೆ. ಹೀಗಾಗಿ ಕಾನೂನು ತಜ್ಞರ ಸಲಹೆ ಪಾಲಿಸುತ್ತೇವೆ ಎಂದು ಉಪಮುಖ್ಯಮಂತ್ರಿ ಹಾಗೂ ಜಲಸಂಪನ್ಮೂಲ ಸಚಿವರಾದ ಡಿ.ಕೆ. ಶಿವಕುಮಾರ್‌ ಹೇಳಿದ್ದಾರೆ. ನಾವು ನೀರು ಬಿಡುವುದಿಲ್ಲ ಎಂದು ಹೇಳಿದ್ದೆವು. ಆದರೆ ಸುಪ್ರೀಂ ಕೋರ್ಟಿನ ಮುಂದೆ ಹೋದಾಗ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರದ ಆದೇಶ ಪಾಲನೆ ಮಾಡಲಾಗಿದೆಯೇ ಎಂದು ಪರಿಶೀಲಿಸಲಾಗುತ್ತದೆ. ಪಾಲನೆ ಮಾಡದೆ ಇದ್ದರೆ ಕಾನೂನಾತ್ಮಕವಾಗಿ ತೊಂದರೆಯಾಗುತ್ತದೆ ಎನ್ನುವ ಅಭಿಪ್ರಾಯವನ್ನು ಕಾನೂನು ತಜ್ಞರು ನೀಡಿದ್ದಾರೆ. ಹೀಗಾಗಿ ಕಾನೂನು ತಜ್ಞರ ಸಲಹೆ ಪಾಲಿಸುತ್ತೇವೆ ಎಂದರು.

ಭಾರತ ದೇಶದಲ್ಲಿ ಸಂವಿಧಾನವೇ ಸಾರ್ವಭೌಮ: ಸಚಿವ ಚಲುವರಾಯಸ್ವಾಮಿ

ಕೇಂದ್ರ ಜಲಶಕ್ತಿ ಸಚಿವರಾದ ಗಜೇಂದ್ರ ಸಿಂಗ್ ಶೇಖಾವತ್ ಅವರಿಗೆ ವಸ್ತುಸ್ಥಿತಿ ವಿವರಿಸಿದ್ದೇನೆ. ಮುಂದೆ ನಾವು ಯಾವ ನಿರ್ಧಾರ ತೆಗೆದುಕೊಳ್ಳುತ್ತೇವೆ ಎನ್ನುವುದನ್ನೂ ಸಹ ತಿಳಿಸಿದ್ದೇವೆ. ದೆಹಲಿಯಲ್ಲಿ ಸಚಿವರ ಬಳಿ ಚರ್ಚೆ ಏನಾಯಿತು ಎಂದು ಸಂದರ್ಭ ಬಂದಾಗ ವಿವರಿಸುತ್ತೇನೆ ಎಂದು ಹೇಳಿದರು. ನೀರಾವರಿ ಸಮಿತಿಯು ನಿತ್ಯ 5000 ಕ್ಯುಸೆಕ್‌ ನೀರು ಬಿಡುವಂತೆ ಕರ್ನಾಟಕ್ಕೆ ಸೂಚಿಸಿದ್ದರಿಂದ ಸರ್ವಪಕ್ಷ ಸಭೆ ನಡೆಸಿದ್ದ ಸಿದ್ದರಾಮಯ್ಯ ಸರ್ಕಾರ, ಸಭೆಯ ಸಲಹೆಯಂತೆ ನೀರು ಬಿಡದಿರಲು ನಿರ್ಧರಿಸಿತ್ತು.

Follow Us:
Download App:
  • android
  • ios