ಸರ್ಕಾರ ರಚನೆಯಾಗಿ 5 ತಿಂಗಳಾದರೂ ವಿಪಕ್ಷ ನಾಯಕನ ನೇಮಕ ಮಾಡುವ ಸಾಮರ್ಥ್ಯ ಬಿಜೆಪಿಗಿಲ್ಲ: ಡಿಕೆಶಿ

ನಮ್ಮ‌ ಪಕ್ಷದಲ್ಲಿ ಯಾವುದೇ ರೀತಿಯ ಅಸಮಾಧಾನ ಇಲ್ಲ, ನಮ್ಮಲ್ಲಿ ಅಸಮಾಧಾನ ಎಲ್ಲಿ ಇದೆ? ಎಂದು ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳಿದರು. ಬಿಜೆಪಿಯವರಿಗೆ ವಿರೋಧ ಪಕ್ಷದ ನಾಯಕನನ್ನ ಮಾಡಲು ಆಗುತ್ತಿಲ್ಲ. 

dcm dk shivakumar slams on bjp over congress dispute statement gvd

ಹುಬ್ಬಳ್ಳಿ (ನ.03): ನಮ್ಮ‌ ಪಕ್ಷದಲ್ಲಿ ಯಾವುದೇ ರೀತಿಯ ಅಸಮಾಧಾನ ಇಲ್ಲ, ನಮ್ಮಲ್ಲಿ ಅಸಮಾಧಾನ ಎಲ್ಲಿ ಇದೆ? ಎಂದು ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳಿದರು. ಬಿಜೆಪಿಯವರಿಗೆ ವಿರೋಧ ಪಕ್ಷದ ನಾಯಕನನ್ನ ಮಾಡಲು ಆಗುತ್ತಿಲ್ಲ. ದೇಶದ, ರಾಜ್ಯದ ಇತಿಹಾಸದಲ್ಲಿ ಸರ್ಕಾರ ರಚನೆ ಆಗಿ ಐದು ತಿಂಗಳು ಕಳೆದ್ರು ವಿರೋಧ ಪಕ್ಷದ ನಾಯಕನನ್ನ ನೇಮಕ ಮಾಡುವ ಸಾಮರ್ಥ್ಯ ಇಲ್ಲ. ಮೂರ್ನಾಲ್ಕು ದಿನಗಳಲ್ಲಿ ಲೋಕಸಭಾ ಚುನಾವಣೆಯ ಅಭ್ಯರ್ಥಿಗಳ ಸಂಭಾವ್ಯ ಪಟ್ಟಿ ಸಿದ್ದವಾಗಲಿದೆ. ಈಗಾಗಲೇ ಎಲ್ಲಾ ಲೋಕಸಭಾ ಕ್ಷೇತ್ರಗಳಿಗೆ ವೀಕ್ಷಕರನ್ನ ನೇಮಕ ಮಾಡಲಾಗಿತ್ತು ಎಂದರು.

75% ಕ್ಷೇತ್ರಕ್ಕೆ ಹೋಗಿ ಕಾರ್ಯಕರ್ತರುಗಳನ್ನು ಭೇಟಿ ಆಗಿ ಬಂದಿದ್ದಾರೆ. ಅವರೆಲ್ಲರೂ ಈಗಾಗಲೇ ಅಭ್ಯರ್ಥಿಗಳ ವರದಿ ಸಿದ್ದ ಮಾಡಿಕೊಂಡಿದ್ದಾರೆ. ಅವರು ಇನ್ನೂ ವರದಿಯನ್ನ ಕೊಟ್ಟಿಲ್ಲ. ನಮ್ಮ ವರಿಷ್ಠರು ಸಹ ಕೆಲವು ಸಲಹೆ ನೀಡಿದ್ದಾರೆ. ಕರ್ನಾಟಕಕ್ಕೆ 50 ವರ್ಷ ಎಲ್ಲರಿಗೂ ಇದೊಂದು ಸುವರ್ಣಾವಕಾಶ. ಇಡೀ ವರ್ಷ ಹಬ್ಬದ ಆಚರಣೆಗೆ ತೀರ್ಮಾನ ಮಾಡಿದ್ದೇವೆ. ವಿಜಯನಗರ ನಾಡು ಹಂಪಿಯಿಂದ ಜ್ಯೋತಿ ಶುರುವಾಗಿದೆ. ನಿನ್ನೆ ರಾತ್ರಿ ಮುಖ್ಯಮಂತ್ರಿಗಳು ಚಾಲನೆ ನೀಡಿದ್ದಾರೆ,ಮುಂದಿನ ಭಾಗವಾಗಿ ಇವತ್ತು ಗದಗನಲ್ಲಿ ಕಾರ್ಯಕ್ರಮ ಇಟ್ಟುಕೊಂಡಿದ್ದೇವೆ ಎಂದು ಡಿಕೆಶಿ ತಿಳಿಸಿದರು.

ಮುಂದಿನ 5 ವರ್ಷ ನಾನೇ ಸಿಎಂ: ಸಿದ್ದರಾಮಯ್ಯ ಹೇಳಿಕೆಗೆ ಪರಮೇಶ್ವರ್ ಏನೆಂದರು?

ಈಗಾಗಲೇ ಮುಖ್ಯಮಂತ್ರಿಗಳು ಭುವನೇಶ್ವರಿ ಭವನವನ್ನು ಕಟ್ಟಿಸಲು ತೀರ್ಮಾನ ಮಾಡಿದ್ದಾರೆ. ಇವತ್ತು 10 ಜನ ಮಂತ್ರಿಗಳು ಗದಗ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುತ್ತಿದ್ದೇವೆ. ಬಿಜೆಪಿಯವರು ಬರ ಸಮೀಕ್ಷೆ ಮಾಡಲಿ, ಅವರು ದೆಹಲಿಗೆ ಹೋಗಿ ವರದಿ ಕೊಡಲಿ. ಚಲುವರಾಯ ಸ್ವಾಮಿ, ಕೃಷ್ಣ ಭೈರೆಗೌಡ್ರು ತಂಡ ಬರ ಅಧ್ಯಯನ ಮಾಡಿದೆ. ಎಲ್ಲಾ ಜಿಲ್ಲೆಗಳಿಗೆ ಹೋಗಿ ಅಧ್ಯಯನ ಮಾಡಿ, 175 ತಾಲೂಕಗಳನ್ನ ಬರ ಎಂದು ಘೋಷಣೆ ಮಾಡಿದೆ. ಈಗಾಗಲೇ ಎಲ್ಲಾ ಜಿಲ್ಲಾಧಿಕಾರಿ ಖಾತೆಯಲ್ಲಿ ಒಂದು ಸಾವಿರ ಕೋಟಿಗು ಹೆಚ್ಚು ಹಣ ಮೀಸಲಿಡಲಾಗಿದೆ ಎಂದರು. ಇನ್ನು ನಿಗಮ ಮಂಡಳಿ ನೇಮಕ ವಿಚಾರದಲ್ಲಿ ಡಿಕೆಶಿ ಏನು ಹೇಳದೆ ಜಾರಿಕೊಂಡರು.

Latest Videos
Follow Us:
Download App:
  • android
  • ios