Asianet Suvarna News Asianet Suvarna News

ನಾವಲ್ಲ, ಬಿಜೆಪಿಗರೇ ಕಿತ್ತಾಡ್ತಿದ್ದಾರೆ: ಯಡಿಯೂರಪ್ಪಗೆ ಡಿಕೆಶಿ ತಿರುಗೇಟು

‘ಬಿಜೆಪಿಯವರು ಪರಸ್ಪರ ಕಿತ್ತಾಡುತ್ತಿದ್ದಾರೆ. ಕಿತ್ತಾಟದಿಂದಾಗಿ ಆರು ತಿಂಗಳಿಂದ ಕನಿಷ್ಠ ವಿರೋಧಪಕ್ಷದ ನಾಯಕನನ್ನು ನೇಮಕ ಮಾಡಲೂ ಅವರಿಗೆ ಸಾಧ್ಯವಾಗಿಲ್ಲ. ತಮ್ಮ ಜಗಳ ಮುಚ್ಚಿಡಲು ಯಡಿಯೂರಪ್ಪ ಅವರು ಕಾಂಗ್ರೆಸ್‌ ವಿರುದ್ಧ ಆರೋಪಿಸಿದ್ದಾರೆ’ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ತಿರುಗೇಟು ನೀಡಿದ್ದಾರೆ. 

DCM DK Shivakumar Slams On BS Yediyurappa gvd
Author
First Published Nov 3, 2023, 10:08 AM IST

ಬೆಂಗಳೂರು (ನ.03): ‘ಬಿಜೆಪಿಯವರು ಪರಸ್ಪರ ಕಿತ್ತಾಡುತ್ತಿದ್ದಾರೆ. ಕಿತ್ತಾಟದಿಂದಾಗಿ ಆರು ತಿಂಗಳಿಂದ ಕನಿಷ್ಠ ವಿರೋಧಪಕ್ಷದ ನಾಯಕನನ್ನು ನೇಮಕ ಮಾಡಲೂ ಅವರಿಗೆ ಸಾಧ್ಯವಾಗಿಲ್ಲ. ತಮ್ಮ ಜಗಳ ಮುಚ್ಚಿಡಲು ಯಡಿಯೂರಪ್ಪ ಅವರು ಕಾಂಗ್ರೆಸ್‌ ವಿರುದ್ಧ ಆರೋಪಿಸಿದ್ದಾರೆ’ ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿರುಗೇಟು ನೀಡಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್‌ನವರು ನಾಯಿ-ನರಿಗಳಂತೆ ಕಚ್ಚಾಡುತ್ತಿದ್ದಾರೆ ಎಂಬ ಮಾಜಿ ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪ ಹೇಳಿಕೆಗೆ ಪ್ರತಿಕ್ರಿಯಿಸಿದರು.

ಬಿಜೆಪಿಯವರಿಗೆ ಕನಿಷ್ಠ ವಿರೋಧಪಕ್ಷದ ನಾಯಕನ ನೇಮಕ ಮಾಡಲೂ ಸಹ ಆಗಿಲ್ಲ. ವಿಪಕ್ಷ ನಾಯಕನ ಸ್ಥಾನಕ್ಕಾಗಿ ಪರಸ್ಪರ ಕಚ್ಚಾಡುತ್ತಿದ್ದಾರೆ. ಅದನ್ನು ಮುಚ್ಚಿ ಹಾಕಿಕೊಳ್ಳಲು ಯಡಿಯೂರಪ್ಪ ನಮ್ಮ ಬಗ್ಗೆ ಮಾತನಾಡಿದ್ದಾರೆ. ನಮ್ಮ ಶಾಸಕರಿಗೆ ಚಾಕೋಲೇಟ್‌ ಕೊಡಲು ಬರುತ್ತಿದ್ದಾರೆ ಎಂದರು. ‘ಆಪರೇಷನ್‌ ಕಮಲ’ ಕುರಿತು ಯಡಿಯೂರಪ್ಪ ಅವರ ಹೇಳಿಕೆಗೆ ಪ್ರತಿಕ್ರಿಯಿಸಿದ ಅವರು, ಯಡಿಯೂರಪ್ಪ ಅವರ ಸಲಹೆಯನ್ನು ಗಮನದಲ್ಲಿ ಇಟ್ಟುಕೊಳ್ಳುತ್ತೇವೆ ಎಂದಷ್ಟೇ ಹೇಳಿದರು.

ವರ್ಷಕ್ಕೊಮ್ಮೆ ತೆರೆವ ಹಾಸನಾಂಬೆ ದೇಗುಲದಲ್ಲಿ ನ.14 ವರೆಗೆ ದರ್ಶನ

ಅಡ್ಡದಾರಿಯೇ ಬಿಜೆಪಿಯವರ ಮನೆದೇವರು: ಬಿಜೆಪಿಯವರು ನೇರವಾಗಿ ಜನರಿಂದ ಆಯ್ಕೆಯಾಗಿ ಸರ್ಕಾರವನ್ನು ರಚನೆ ಮಾಡಲು ಇಲ್ಲಿಯವರೆಗೆ ಸಾಧ್ಯವಾಗಿಲ್ಲ. ಅವರು ಆಪರೇಷನ್ ಅಡ್ಡದಾರಿಯ ಮೂಲಕ ಅಧಿಕಾರ ಬಂದವರಾಗಿದ್ದಾರೆ. ಅಡ್ಡದಾರಿಯೇ ಬಿಜೆಪಿಯ ಮನೆದೇವರಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಆರ್.ಬಿ.ತಿಮ್ಮಾಪೂರ ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದರು. ಬಾಗಲಕೋಟೆಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಜೆಪಿಗೆ ಜನ ಬೆಂಬಲದ ಬಹುಮತ ಪಡೆದು ಸರ್ಕಾರ ರಚಿಸುವ ತಾಕತ್ತಿಲ್ಲ. ಹೀಗಾಗಿ, ಅವರು ಕುತಂತ್ರ ಮಾಡಿಯೇ ಅಧಿಕಾರಕ್ಕೆ ಬಂದಿರುವುದು ಹೆಚ್ಚು ಎಂದು ಹೇಳಿದರು.

ಬಿಜೆಪಿಯವರು ತಮ್ಮ ಕೇಂದ್ರ ಸರ್ಕಾರದ ಬೆಂಬಲದಿಂದ ಐಟಿ, ಇಡಿ ದಾಳಿಗಳನ್ನು ನಡೆಸಿ ಆಟವಾಡುತ್ತಾರೆ. ನೆರೆಯ ಮಹಾರಾಷ್ಟ್ರದಲ್ಲಿ ಇದೇ ರೀತಿಯಾಗಿದೆ. ಆದರೆ, ನಾವು ಬಹಳ ಕ್ಲೀನ್ ಆಗಿದ್ದೇವಿ. ನಮ್ಮ ಸರ್ಕಾರ 5 ವರ್ಷ ಸಂಪೂರ್ಣ ಕಾರ್ಯನಿರ್ವಹಿಸುತ್ತದೆ ಎಂದರು. ಬಿಜೆಪಿಗರು ನಮ್ಮ ಸರ್ಕಾರವನ್ನು ಪತನಗೊಳಿಸುವ ಭ್ರಮೆಯಲ್ಲಿ ಇದ್ದಾರೆ. ಸರ್ಕಾರ ಆಗ ಬೀಳುತ್ತೆ, ಈಗ ಬೀಳುತ್ತೆ ಎಂದು ಅವರು ಕಾಯುತ್ತಿದ್ದಾರೆ. ಆದರೆ, ರಾಜ್ಯದ ಜನ ನಮಗೆ ಪೂರ್ಣ ಪ್ರಮಾಣದ ಅಧಿಕಾರ ನೀಡಿದ್ದಾರೆ. ನಾವು ಐದು ವರ್ಷದ ಅಧಿಕಾರ ಪೂರೈಸಲಿದ್ದೇವೆ ಎಂದರು.

ಎಚ್ಚರ.. ಅನುಮತಿ ಇಲ್ಲದೆ ರಸ್ತೆ ಅಗೆದರೆ ದಂಡ: BBMP ಖಡಕ್ ಸೂಚನೆ

ಒಂದು ವಾರದಲ್ಲಿ ಸಿಡಿ ಸ್ಫೋಟ ಮಾಡುತ್ತೇನೆ ಎಂಬ ರಮೇಶ್ ಜಾರಕಿಹೊಳಿ ಅವರ ಹೇಳಿಕೆಗೆ ಪ್ರತಿಕ್ರಿಯಿಸಿದ ಸಚಿವರು, ಪಾಪ ರಮೇಶ್ ಜಾರಕಿಹೊಳಿ ಬಿಜೆಪಿಗೆ ಹೋದರು. ಅಲ್ಲಿ ಏನೂ ಸಾಧ್ಯವಾಗಲಿಲ್ಲ. ಅವರಿಗೆ ನೀಡಿದ್ದ ನೀರಾವರಿ ಖಾತೆಯನ್ನೂ ಬಿಜೆಪಿಯವರು ಕಿತ್ತುಕೊಂಡರು, ಅಧಿಕಾರದಿಂದ ವಂಚಿತರಾಗಿರುವ ರಮೇಶ್ ಜಾರಕಿಹೊಳಿ ಭ್ರಮನಿರಸನಗೊಂಡು ಏನೇನೋ ಮಾತನಾಡುತ್ತಿದ್ದಾರೆ. ಏನಾದರೂ ಮಾತನಾಡಿ ಸುದ್ದಿಯಲ್ಲಿ ಇರಬೇಕು ಎಂಬುದಷ್ಟೇ ಅವರ ಉದ್ದೇವಾಗಿದೆ. ಅವರು ನನ್ನ ಆತ್ಮೀಯ ಗೆಳೆಯ. ಡಿಸಿಎಂ ಡಿಕೆಶಿ, ರಮೇಶ್ ಜಾರಕಿಹೊಳಿ ಪರಸ್ಪರ ವಾಗ್ದಾಳಿ ಅವರ ವೈಯಕ್ತಿಕ ವಿಚಾರ ಅದನ್ನು ಕೈಬಿಡಿ ಎಂದರು.

Follow Us:
Download App:
  • android
  • ios