ಕೇಸರೀಕರಣಕ್ಕೆ ಬೊಮ್ಮಾಯಿ ಬೆಂಬಲ ನೀಡಿದ್ದರು: ಡಿ.ಕೆ.ಶಿವಕುಮಾರ್‌ ಆರೋಪ

ಹಿಂದಿನ ಸರ್ಕಾರದ ಅವಧಿಯಲ್ಲಿ ಮುಖ್ಯಮಂತ್ರಿಯಾಗಿದ್ದ ಬಸವರಾಜ ಬೊಮ್ಮಾಯಿ ಅವರು ಪೊಲೀಸ್‌ ಇಲಾಖೆಯ ಕೇಸರೀಕರಣ ಹಾಗೂ ನೈತಿಕ ಪೊಲೀಸ್‌ಗಿರಿಗೆ ಬೆಂಬಲ ನೀಡಿದ್ದರು. 
 

DCM DK Shivakumar Slams On Ex CM Basavaraj Bommai gvd

ಬೆಂಗಳೂರು (ಮೇ.25): ‘ಹಿಂದಿನ ಸರ್ಕಾರದ ಅವಧಿಯಲ್ಲಿ ಮುಖ್ಯಮಂತ್ರಿಯಾಗಿದ್ದ ಬಸವರಾಜ ಬೊಮ್ಮಾಯಿ ಅವರು ಪೊಲೀಸ್‌ ಇಲಾಖೆಯ ಕೇಸರೀಕರಣ ಹಾಗೂ ನೈತಿಕ ಪೊಲೀಸ್‌ಗಿರಿಗೆ ಬೆಂಬಲ ನೀಡಿದ್ದರು. ನಮ್ಮ ಅವಧಿಯಲ್ಲಿ ಯಾವುದೇ ಕಾರಣಕ್ಕೂ ಪೊಲೀಸರನ್ನು ಹೊರತುಪಡಿಸಿ ಬೇರೆ ಯಾರೊಬ್ಬರಿಗೂ ಕಾನೂನು ಕೈಗೆತ್ತಿಕೊಳ್ಳಲು ಬಿಡುವುದಿಲ್ಲ’ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಹೇಳಿದ್ದಾರೆ. ವಿಧಾನಸೌಧದಲ್ಲಿ ಶಾಸಕಾಂಗ ಪಕ್ಷದ ಸಭೆ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್‌ ಪಕ್ಷದವರಾಗಲಿ, ಬೇರೆ ಪಕ್ಷದವರಾಗಲಿ ಕಾನೂನು ಕೈಗೆ ತೆಗೆದುಕೊಳ್ಳಬಾರದು, ಪೊಲೀಸರಿಂದ ಮಾತ್ರ ಕಾನೂನು ಚಲಾವಣೆ ಆಗಬೇಕು. 

ಈ ನಿಯಮವನ್ನು ಎಲ್ಲರೂ ಪಾಲಿಸಬೇಕು. ಯಾರಾದರೂ ನೈತಿಕ ಪೊಲೀಸ್‌ಗಿರಿಗೆ ಮುಂದಾದರೆ ಕ್ರಮ ಖಚಿತ ಎಂದರು. ಹಿಂದೆ ರಾಜ್ಯದ ಮೂರ್ನಾಲ್ಕು ಕಡೆಗಳಲ್ಲಿ ಪೊಲೀಸ್‌ ಅಧಿಕಾರಿಗಳು ತಮ್ಮ ಸಮವಸ್ತ್ರ ಕಳಚಿ ರಾಜಕೀಯ ಸಂಘಟನೆಗಳ ರೀತಿಯಲ್ಲಿ ವಸ್ತ್ರ ಧರಿಸಿದ್ದರು. ಇದು ಸಂವಿಧಾನ ಪಾಲನೆ ಅಲ್ಲ. ಕರ್ನಾಟಕ ಪೊಲೀಸ್‌ ಇಲಾಖೆಗೆ ಇರುವ ಘನತೆ ಕಾಪಾಡಿಕೊಳ್ಳಬೇಕು. ಪಕ್ಷದ ಮಾಧ್ಯಮ ವಿಭಾಗದ ಮುಖ್ಯಸ್ಥರಾಗಿದ್ದ ಪ್ರಿಯಾಂಕ್‌ ಖರ್ಗೆ ರಾಜ್ಯದ ಅತ್ಯಂತ ದೊಡ್ಡ ಭ್ರಷ್ಟಾಚಾರದ ಬಗ್ಗೆ ಧ್ವನಿ ಎತ್ತಿದಾಗ ಅವರಿಗೆ ಸಮನ್ಸ್‌ ನೀಡಲಾಗಿತ್ತು. 

ನಾನೇ ಕನಕಪುರಕ್ಕೆ ಬರುತ್ತೇನೆ, ನೀವು ಬೆಂಗಳೂರಿಗೆ ಬರಬೇಡಿ ಎಂದು ಡಿಕೆಶಿ ಮನವಿ ಮಾಡಿದ್ದೇಕೆ?

ಭ್ರಷ್ಟಾಚಾರದ ವಿರುದ್ಧ ಧ್ವನಿ ಎತ್ತಿದವರಿಗೆ ಸಮನ್ಸ್‌ ನೀಡಿ ಕಾಟ ನೀಡಿದ್ದ ಪೊಲೀಸರು ಇನ್ನಾದರೂ ಕಾನೂನು ರೀತಿಯಲ್ಲಿ ಕೆಲಸ ಮಾಡಬೇಕು ಎಂದು ಹೇಳಿದ್ದೇನೆ ಎಂದರು. ಪೊಲೀಸ್‌ ಇಲಾಖೆಯನ್ನು ಕಾಂಗ್ರೆಸ್ಸೀಕರಣ ಮಾಡಲು ಹೊರಟಿದ್ದಾರೆ ಎಂದು ಮಾಜಿ ಗೃಹ ಸಚಿವ ಅರಗ ಜ್ಞಾನೇಂದ್ರ ಹೇಳಿಕೆಗೆ, ಪ್ರತಿಕ್ರಿಯಿಸಿದ ಅವರು ‘ಯಾವುದೇ ನಾಯಕರಿಗೆ ನಾನು ಉತ್ತರ ನೀಡುವುದಿಲ್ಲ. ಅವರ ಆಡಳಿತ ನೋಡಿ ಜನರೇ ಉತ್ತರ ಕೊಟ್ಟಾಗಿದೆ’ ಎಂದು ಹೇಳಿದರು.

ಶಾಸಕರಿಗೆ ತರಬೇತಿ: ಶಾಸಕಾಂಗ ಪಕ್ಷದ ಸಭೆಯಲ್ಲಿ ಗ್ಯಾರಂಟಿ ಯೋಜನೆಗಳನ್ನು ಜನರಿಗೆ ತಲುಪಿಸಲು ತಿಳಿಸಿದ್ದೇವೆ. ಲೋಕಸಭೆ ಚುನಾವಣೆ ಪ್ರಮುಖವಾಗಿದ್ದು, ದ್ವೇಷ- ಅಸೂಯೆ ಎಲ್ಲವನ್ನೂ ಮರೆತು ಎಲ್ಲರೂ ವಿಶ್ವಾಸಕ್ಕೆ ತೆಗೆದುಕೊಳ್ಳಬೇಕು. ಅಧಿಕಾರ ಬಂದಾಗ ಎಲ್ಲಾ ಅಧಿಕಾರಿಗಳು, ಗುತ್ತಿಗೆದಾರರು ನಿಮ್ಮನ್ನು ಸಂಪರ್ಕಿಸುತ್ತಾರೆ, ನೀವು ಯಾವುದರಲ್ಲೂ ಸಿಲುಕಿಕೊಳ್ಳಬೇಡಿ ಎಂಬ ಸಲಹೆ ನೀಡಿದ್ದೇವೆ. ಈ ಬಗ್ಗೆ ಶಾಸಕರಿಗೆ ತರಬೇತಿಯನ್ನೂ ನೀಡುತ್ತೇವೆ ಎಂದು ಹೇಳಿದರು.

ಮೊದಲ ಸಭೆಯಲ್ಲೇ ಅಧಿಕಾರಿಗಳಿಗೆ ಡಿಸಿಎಂ ಡಿಕೆಶಿ ಫುಲ್‌ ಚಾರ್ಜ್‌!

ಕಾಂಗ್ರೆಸ್‌ ಪಕ್ಷದವರಾಗಲಿ, ಬೇರೆ ಪಕ್ಷದವರಾಗಲಿ ಕಾನೂನು ಕೈಗೆ ತೆಗೆದುಕೊಳ್ಳಬಾರದು. ಪೊಲೀಸರಿಂದ ಮಾತ್ರ ಕಾನೂನು ಚಲಾವಣೆ ಆಗಬೇಕು. ಈ ನಿಯಮವನ್ನು ಎಲ್ಲರೂ ಪಾಲಿಸಬೇಕು. ಯಾರಾದರೂ ನೈತಿಕ ಪೊಲೀಸ್‌ಗಿರಿಗೆ ಮುಂದಾದರೆ ಕ್ರಮ ಖಚಿತ.
- ಡಿ.ಕೆ.ಶಿವಕುಮಾರ್‌, ಡಿಸಿಎಂ

Latest Videos
Follow Us:
Download App:
  • android
  • ios