ಹೊಟ್ಟೆ ಉರಿ ತಾಳಲಾರದೆ ನನ್ನ ಮೇಲೆ ಲಂಚ ಆರೋಪ: ಎಚ್‌ಡಿಕೆಗೆ ಡಿಕೆಶಿ ತಿರುಗೇಟು

ತ್ಯಾಜ್ಯ ನಿರ್ವಹಣೆ ಕುರಿತಂತೆ ಬ್ಲ್ಯಾಕ್ ಲಿಸ್ಟ್‌ ಸೇರಿರುವ ಸಂಸ್ಥೆಗೆ ಗುತ್ತಿಗೆ ನೀಡಲು ಹೇಗೆ ಸಾಧ್ಯ ಎಂದು ಬೆಂಗಳೂರು ಅಭಿವೃದ್ಧಿ ಖಾತೆಯ ಹೊಣೆ ಹೊತ್ತಿರುವ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಖಾರವಾಗಿ ಪ್ರಶ್ನಿಸಿದ್ದಾರೆ. 

dcm dk shivakumar slams on hd kumaraswamy at bengaluru gvd

ಬೆಂಗಳೂರು (ಜು.18): ಘನತ್ಯಾಜ್ಯ ವಿಲೇವಾರಿ ಕೇಂದ್ರಗಳನ್ನು ನಗರದ ಹೊರಭಾಗಗಳಿಗೆ ಸ್ಥಳಾಂತರ ಮಾಡಲು ಇನ್ನೂ ಜಾಗವನ್ನೇ ನಿಗದಿ ಮಾಡಿಲ್ಲ. ಹೀಗಿರುವಾಗ ತ್ಯಾಜ್ಯ ನಿರ್ವಹಣೆ ಕುರಿತಂತೆ ಬ್ಲ್ಯಾಕ್ ಲಿಸ್ಟ್‌ ಸೇರಿರುವ ಸಂಸ್ಥೆಗೆ ಗುತ್ತಿಗೆ ನೀಡಲು ಹೇಗೆ ಸಾಧ್ಯ ಎಂದು ಬೆಂಗಳೂರು ಅಭಿವೃದ್ಧಿ ಖಾತೆಯ ಹೊಣೆ ಹೊತ್ತಿರುವ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಖಾರವಾಗಿ ಪ್ರಶ್ನಿಸಿದ್ದಾರೆ. 

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ತ್ಯಾಜ್ಯ ನಿರ್ವಹಣೆ ವಿಚಾರದಲ್ಲಿ ಈವರೆಗೆ ಟೆಂಡರ್ ಇಲ್ಲದೆ ದಂಧೆ ಮಾಡುತ್ತಿದ್ದವರಿಗೆ ಘನತ್ಯಾಜ್ಯ ನಿರ್ವಹಣೆ ವಿಚಾರವಾಗಿ ನಾವು ಕೈಗೊಳ್ಳುತ್ತಿರುವ ಕ್ರಮಗಳನ್ನು ನೋಡಿ ಹೊಟ್ಟೆ ಉರಿಯುತ್ತಿದೆ. ಹೀಗಾಗಿ ನನ್ನ ಮೇಲೆ ಲಂಚದ ಆರೋಪ ಮಾಡುತ್ತಿದ್ದಾರೆ ಎಂದು ಹೇಳಿದರು. ಈವರೆಗೆ ತ್ಯಾಜ್ಯ ನಿರ್ವಹಣೆ ವಿಚಾರದಲ್ಲಿ ಟೆಂಡರ್ ಇಲ್ಲದೆ ದಂಧೆ ಮಾಡುತ್ತಿದ್ದವರಿಗೆ ತ್ಯಾಜ್ಯ ಸಮಸ್ಯೆ ನಿವಾರಣೆ ಪ್ರಕ್ರಿಯೆ ನೋಡಿ ಹೊಟ್ಟೆ ಉರಿಯುತ್ತಿರಬೇಕು. ಅದಕ್ಕಾಗಿ ನನ್ನ ಮೇಲೆ ಆರೋಪ ಮಾಡಲಾಗುತ್ತಿದೆ. 

ವಾಲ್ಮೀಕಿ ಕೇಸ್‌ನಲ್ಲಿ ಸಿಎಂ ಸಿದ್ದರಾಮಯ್ಯ ರಾಜೀನಾಮೆ ನೀಡಲೇಬೇಕು: ವಿಜಯೇಂದ್ರ

ಘನತ್ಯಾಜ್ಯ ನಿರ್ವಹಣೆ ಗುತ್ತಿಗೆ ನೀಡುವ ವಿಚಾರಕ್ಕೆ ಸಂಬಂಧಿಸಿದಂತೆ ಕೇಂದ್ರ ಸಚಿವರೊಬ್ಬರು ನಾನು 15 ಸಾವಿರ ಕೋಟಿ ರು. ಲಂಚ ಪಡೆದಿದ್ದೇನೆ ಎಂದು ಆರೋಪಿಸುತ್ತಿದ್ದಾರೆ. ಟೆಂಡರ್ ವಿಚಾರ ಕೋರ್ಟ್‌ನಲ್ಲಿದೆ ಎಂದು ಸ್ಪಷ್ಟಪಡಿಸಿದರು. ನಗರದ ತ್ಯಾಜ್ಯ ಸಮಸ್ಯೆ ನಿವಾರಣೆಗೆ ಸಾಕಷ್ಟು ಕ್ರಮ ತೆಗೆದುಕೊಳ್ಳಲಾಗುತ್ತಿದೆ. ಕಳೆದ ಮೂರು ದಿನಗಳಿಂದ ಮಂಡೂರಿನಲ್ಲಿ ಕಸ ವಿಲೇವಾರಿ ಪ್ರಕ್ರಿಯೆ ಸ್ಥಗಿತ ಗೊಂಡಿದೆ. ಅದಕ್ಕಾಗಿ ಪರ್ಯಾಯ ಜಾಗದ ಹುಡುಕಾಟದಲ್ಲಿ ದ್ದೇವೆ. ನೈಸ್ ರಸ್ತೆ ಬಳಿ ಜಾಗದ ಲಭ್ಯತೆಯಿದ್ದು, ಅದಕ್ಕಾಗಿ ನೈಸ್ ಸಂಸ್ಥೆ ಜತೆಗೆ ಮಾತುಕತೆ ನಡೆಸುತ್ತಿದ್ದೇವೆ ಎಂದರು.

ದೊಡ್ಡವರ ಬಗ್ಗೆ ಮಾತನಾಡಲ್ಲ: ಬ್ಯಾಂಡ್ ಬೆಂಗಳೂರು ಟೀಕೆ ಹಿನ್ನೆಲೆಯಲ್ಲಿ 'ದೊಡ್ಡವರ ಬಗ್ಗೆ ನಾನು ಮಾತನಾಡಲ್ಲ ಅವರು ಏನಾದರೂ ಹೇಳಿಕೊಳ್ಳಲಿ' ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಕೇಂದ್ರ ಸಚಿವ ಕುಮಾರಸ್ವಾಮಿ ಕುರಿತು ಅಸಮಾಧಾನ ವ್ಯಕ್ತ ಪಡಿಸಿದರು. ಶಿವಕುಮಾರ್ ಅವರಿಂದ ಬ್ರಾಂಡ್ ಬೆಂಗ ನೂರು ಮಾಡಲು ಸಾಧ್ಯವೇ ಇಲ್ಲ ಎನ್ನುವ ಕುಮಾರಸ್ವಾಮಿ ಅವರ ಹೇಳಿಕೆ ಬಗ್ಗೆ ಪ್ರತಿಕ್ರಿಯಿಸಿ 'ದೊಡ್ಡವರ ಬಗ್ಗೆ ಮಾತನಾಡುವುದಿಲ್ಲ. 

ಎಚ್‌ಡಿಕೆ ಸಿಎಂ ಆಗಿದ್ದಾಗ ಅರ್ಜಿ ಸಲ್ಲಿಸಿ ಮುಡಾ ಬದಲಿ ನಿವೇಶನ ಪಡೆದಿದ್ದಾರೆ: ಕಾಂಗ್ರೆಸ್‌ ಆರೋಪ

ನಾನು ಹಳ್ಳಿಯಿಂದ ಬಂದವನು, ನನಗೆ ತಿಳಿದಂತೆ ಹಿರಿಯರ ಅನುಭವ ಪಡೆದು ಕೆಲಸ ಮಾಡುತ್ತಿದ್ದೇನೆ ಎಂದು ಹೇಳಿದರು. ಮುಖ್ಯಮಂತ್ರಿಗಳ ಜೊತೆಗಿನ ಸಭೆ ಯಲ್ಲಿ ಬೆಂಗಳೂರು ನಗರಕ್ಕೆ ಸಂಬಂಧಿಸಿದಂತೆ ದೊಡ್ಡ, ತೀರ್ಮಾನಗಳನ್ನು ತೆಗೆದುಕೊಳ್ಳಲಾಗಿದೆ. ಕ್ಯಾಬಿನೆಟ್ ಮುಂದೆ ತೆಗೆದು ಕೊಂಡು ಹೋಗುವ ಮುಂಚಿತವಾಗಿ ಮುಖ್ಯಮಂತ್ರಿ ಯವರು ಹಾಗೂ ಬೆಂಗಳೂರಿನ ಮಂತ್ರಿಗಳ ಗಮನಕ್ಕೆ ತರಬೇಕಾಗಿತ್ತು. ಎಲ್ಲರ ಸಲಹೆ ಪಡೆದುಕೊಂಡಿದ್ದೇನೆ. ಜುಲೈ 27 ರಂದು ಬೆಂಗಳೂರಿನ ಎಲ್ಲಾ ಶಾಸಕರ ಸಭೆ ಕರೆಯಲಾಗಿದೆ ಎಂದರು.

Latest Videos
Follow Us:
Download App:
  • android
  • ios