ಸರ್ಕಾರ ತೆಗೆದವರನ್ನೇ ತಬ್ಬುವ ದುಸ್ಥಿತಿ ಎಚ್‌ಡಿಕೆಗೆ: ಡಿ.ಕೆ.ಶಿವಕುಮಾರ್ ವಂಗ್ಯ
ತಮ್ಮ ಸರ್ಕಾರ ತೆಗೆದವರನ್ನೇ ತಬ್ಬಿಕೊಳ್ಳುವ ಹಾಗೂ ಜತೆಯಲ್ಲಿ ಕೂರಿಸಿಕೊಂಡು ಈಗಿನ ಸರ್ಕಾರದ ವಿರುದ್ಧ ಪ್ರತಿಭಟನೆ ಮಾಡುವ ದುಸ್ಥಿತಿಗೆ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಜಾರಿದ್ದಾರೆ ಎಂದು ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಕಿಡಿಕಾರಿದ್ದಾರೆ.

ಬೆಂಗಳೂರು (ಸೆ.16): ತಮ್ಮ ಸರ್ಕಾರ ತೆಗೆದವರನ್ನೇ ತಬ್ಬಿಕೊಳ್ಳುವ ಹಾಗೂ ಜತೆಯಲ್ಲಿ ಕೂರಿಸಿಕೊಂಡು ಈಗಿನ ಸರ್ಕಾರದ ವಿರುದ್ಧ ಪ್ರತಿಭಟನೆ ಮಾಡುವ ದುಸ್ಥಿತಿಗೆ ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಜಾರಿದ್ದಾರೆ ಎಂದು ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಕಿಡಿಕಾರಿದ್ದಾರೆ. ಕ್ವೀನ್ಸ್ ರಸ್ತೆಯ ಕೆಪಿಸಿಸಿ ಕಚೇರಿಯ ಭಾರತ್ ಜೋಡೋ ಸಭಾಂಗಣದಲ್ಲಿ ಶುಕ್ರವಾರ ನಡೆದ ಪದ್ಮನಾಭನಗರದ ವಿವಿಧ ಪಕ್ಷಗಳ ಮುಖಂಡರ ಕಾಂಗ್ರೆಸ್ ಸೇರ್ಪಡೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
ಬಿಜೆಪಿ ಮತ್ತು ಜೆಡಿಎಸ್ ನವರು ಮೈತ್ರಿ ಆದರೂ ಮಾಡಿಕೊಳ್ಳಲಿ, ಏನನ್ನಾದರೂ ಮಾಡಿಕೊಳ್ಳಲಿ, ಅದು ನಮಗೆ ಸಂಬಂಧಪಟ್ಟಿದ್ದಲ್ಲ. ನಾನು ಅನೇಕ ಜೆಡಿಎಸ್ ನಾಯಕರು ಮತ್ತು ಕಾರ್ಯಕರ್ತರನ್ನು ಮೈತ್ರಿ ಬಗ್ಗೆ ಕೇಳಿದೆ. ಅದಕ್ಕೆ ಅವರು “ನಮ್ಮ ಸರ್ಕಾರ ಬೀಳಿಸಿದವರ ಹತ್ತಿರವೇ ಕುಮಾರಸ್ವಾಮಿ ಅವರಿಗೆ ಮತ್ತೆ ಏಕೆ ನೆಂಟಸ್ತನ? ಹಾಗಾದರೆ ಪಕ್ಷದ ನೀತಿ ಏನು? ನಾವು ಕಾರ್ಯಕರ್ತರಿಗೆ ಏನು ಹೇಳುವುದು ಎಂದು ಕೇಳುತ್ತಿದ್ದಾರೆ, ನಮಗೆ ಉತ್ತರ ನೀಡಲು ಆಗುತ್ತಿಲ್ಲ" ಎಂದು ಹೇಳುತ್ತಿದ್ದಾರೆ. ಅಂತಹ ಮಟ್ಟಕ್ಕೆ ಅವರು ಇಳಿದಿದ್ದಾರೆ ಎಂದು ಟೀಕಿಸಿದರು.
ಬಿಜೆಪಿಯವರ ತಟ್ಟೆಯಲ್ಲಿ ಹೆಗ್ಗಣ ಬಿದ್ದಿದೆ: ಸಚಿವ ಭೈರತಿ ಸುರೇಶ್ ಹೀಗೆ ಹೇಳಿದ್ಯಾಕೆ?
ಬಿಜೆಪಿ-ಜೆಡಿಎಸ್ ಜತೆಯಾಗಿ ಎಷ್ಟಾದರೂ ಟೀಕೆ ಮಾಡಲಿ. ಅವರ ಟೀಕೆಗಳಿಗೆ ನಾವು ಉತ್ತರ ಕೊಡುವುದಿಲ್ಲ, ಅವರಿಗೆ ಕಾಂಗ್ರೆಸ್ ಪಕ್ಷದ ಕಾರ್ಯಕರ್ತರು ಉತ್ತರ ಕೊಡುತ್ತಾರೆ. ಚುನಾವಣೆ ಮುಗಿದು 110 ದಿನಗಳಾದರೂ ಪ್ರತಿಪಕ್ಷ ನಾಯಕನನ್ನು ಆಯ್ಕೆ ಮಾಡದ ದುಸ್ಥಿತಿಗೆ ಬಿಜೆಪಿ ಪಕ್ಷ ಬಂದಿದೆ. ಅವರವರ ಅನುಕೂಲಕ್ಕೆ ಬಿಜೆಪಿ- ಜೆಡಿಎಸ್ ರಾಜಕಾರಣ ಮಾಡುತ್ತಿವೆ. ದೊಡ್ಡ- ದೊಡ್ಡ ನಾಯಕರು ಮೇಲೆಯೇ ಕುಳಿತಿರುತ್ತಾರೆ. ಕಾರ್ಯಕರ್ತರು ಹಾಗೂ ಮುಖಂಡರುಗಳು ನೆಲದಲ್ಲೇ ಕುಳಿತಿರುತ್ತಾರೆ ಎಂದು ಬಿಜೆಪಿ-ಜೆಡಿಎಸ್ ಹೊಂದಾಣಿಕೆ ಬಗ್ಗೆ ವ್ಯಂಗ್ಯವಾಡಿದರು.
ಭಾರತ ದೇಶದಲ್ಲಿ ಸಂವಿಧಾನವೇ ಸಾರ್ವಭೌಮ: ಸಚಿವ ಚಲುವರಾಯಸ್ವಾಮಿ
20. 21ಕ್ಕೆ ಮತ್ತೊಂದು ಸರಣಿ ಸೇರ್ಪಡೆ: ಮತ್ತೆ ಮುಂದಿನ ತಿಂಗಳು 20,21 ರಂದು ಮತ್ತೊಂದು ಸರಣಿ ಪಕ್ಷ ಸೇರ್ಪಡೆ ನಡೆಯಲಿದೆ. ನಾನು ಮಾತನಾಡುವುದಿಲ್ಲ, ಮಾಡಿ ತೋರಿಸುತ್ತೇನೆ ಎಂದು ಹೇಳುವ ಮೂಲಕ ಮತ್ತೊಂದು ಆಪರೇಷನ್ ಹಸ್ತದ ಮುನ್ಸೂಚನೆಯನ್ನು ಡಿ.ಕೆ.ಶಿವಕುಮಾರ್ ಅವರು ನೀಡಿದರು.