ಎಚ್‌ಡಿಕೆ ಮಾತು ನಂಬಲು ನಾನು ದಡ್ಡನೆ?: ಡಿ.ಕೆ.ಶಿವಕುಮಾರ್

ಡಿ.ಕೆ.ಶಿವಕುಮಾರ್ ಅವರನ್ನು ಮುಖ್ಯಮಂತ್ರಿ ಎಂದು ಘೋಷಣೆ ಮಾಡಿದರೆ ಮುಂಬೈಯಿಂದ ಮರಳಿ ಬರುವುದಾಗಿ ಹಿಂದೆ ಗೋಪಾಲಯ್ಯ ಮತ್ತು ಎಸ್.ಟಿ.ಸೋಮಶೇಖರ್ ಫೋನ್ ಮಾಡಿ ಹೇಳಿದ್ದರು. ಆದರೆ ಎಚ್.ಡಿ.ಕುಮಾರಸ್ವಾಮಿ ಅವರು ನನ್ನ ಹೆಸರು ಹೇಳಲಿಲ್ಲ. 

DCM DK Shivakumar Slams On HD Kumaraswamy gvd

ಬೆಂಗಳೂರು (ನ.17): ‘ಡಿ.ಕೆ.ಶಿವಕುಮಾರ್ ಅವರನ್ನು ಮುಖ್ಯಮಂತ್ರಿ ಎಂದು ಘೋಷಣೆ ಮಾಡಿದರೆ ಮುಂಬೈಯಿಂದ ಮರಳಿ ಬರುವುದಾಗಿ ಹಿಂದೆ ಗೋಪಾಲಯ್ಯ ಮತ್ತು ಎಸ್.ಟಿ.ಸೋಮಶೇಖರ್ ಫೋನ್ ಮಾಡಿ ಹೇಳಿದ್ದರು. ಆದರೆ ಎಚ್.ಡಿ.ಕುಮಾರಸ್ವಾಮಿ ಅವರು ನನ್ನ ಹೆಸರು ಹೇಳಲಿಲ್ಲ. ಅಂತಹವರ ಮಾತು ನಂಬಲು ನಾನೇನೂ ದಡ್ಡನೇ’ ಎಂದು ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಕುಮಾರಸ್ವಾಮಿ ವಿರುದ್ಧ ವಾಗ್ದಾಳಿ ನಡೆಸಿದರು. 

ನಗರದಲ್ಲಿ ನಡೆದ ಜೆಡಿಎಸ್ ಪಕ್ಷದ ಮಾಜಿ ಶಾಸಕರಾದ ಗೌರಿಶಂಕರ್ ಮತ್ತು ಮಂಜುನಾಥ್ ಅವರ ಪಕ್ಷ ಸೇರ್ಪಡೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ‘ಕಾಂಗ್ರೆಸ್ ಪಕ್ಷದ 40 ಜನ ಬಿಜೆಪಿ ಸಂಪರ್ಕದಲ್ಲಿ ಇದ್ದಾರೆ ಎನ್ನುವ ಕುಮಾರಸ್ವಾಮಿ ಮತ್ತೊಂದೆಡೆ ಡಿ.ಕೆ.ಶಿವಕುಮಾರ್ ಮುಖ್ಯಮಂತ್ರಿ ಆಗುವುದಾದರೆ ಜೆಡಿಎಸ್ ಪಕ್ಷದ 19 ಶಾಸಕರ ಬೆಂಬಲ ನೀಡುತ್ತೇವೆ ಅನ್ನುತ್ತಾರೆ. ಅವರ ಮಾತು ಕೇಳಲು ನಾವೇನು ದಡ್ಡರೇ?’ ಎಂದು ಪ್ರಶ್ನಿಸಿದರು.

ಎನ್‌ಡಿಎ ಬಿಡಲು ಕರೆ: ಸರ್ಕಾರಕ್ಕೆ ನಮ್ಮ ಪಕ್ಷದ 136 ಜನ ಶಾಸಕರು ಮತ್ತು ಪಕ್ಷೇತರರ ಬೆಂಬಲವಿದೆ. ಕುಮಾರಸ್ವಾಮಿ ಅವರೇ ಎನ್ ಡಿಎಯಿಂದ ಮೊದಲು ಹೊರಬನ್ನಿ. ಒಬ್ಬ ವ್ಯಕ್ತಿಗೆ ಸ್ಪಷ್ಟವಾದ ರಾಜಕೀಯ ನಿಲುವು ಇರಬೇಕು. ಕುಮಾರಸ್ವಾಮಿ ಅವರ ದ್ವಂದ್ವ ನಿಲುವು ಅವರಿಗೆ ಅರ್ಥವಾಗುತ್ತಿಲ್ಲ. ಕರ್ನಾಟಕದಲ್ಲಿ ಬಿಜೆಪಿ ಜೊತೆ ಸೇರಿದ್ದಾರೆ. ತೆಲಂಗಾಣದಲ್ಲಿ ಕೆಸಿಆರ್ ಪರವಾಗಿ ಮಾತನಾಡುತ್ತಾರೆ. ಕೆಸಿಆರ್ ಅವರ ಮಗ ಮೋದಿ ಅವರನ್ನು ಸುಳ್ಳ ಎಂದು ಕರೆಯುತ್ತಾರೆ. 18 ಜನ ಶಾಸಕರನ್ನು ಕರೆದುಕೊಂಡು, ಅವರನ್ನು ಖುರ್ಚಿಯಿಂದ ಇಳಿಸಿದವರ ಜತೆಗೆ ಮಿಲನವಾಗಿದ್ದೇವೆ, ಸಂಸಾರ ನಡೆಸುತ್ತೇವೆ ಎಂದರೆ ಸಿದ್ದಾಂತ ಎನ್ನುವುದು ಎಲ್ಲಿಗೆ ಹೋಯಿತು ಎಂದು ಕಿಡಿ ಕಾರಿದರು.

ಏನ್‌ ಗ್ರೇಟರ್ ಬೆಂಗಳೂರು ಮಾಡ್ತಾರೋ ಮಾಡಲಿ: ಡಿಕೆಶಿಗೆ ಎಚ್ಡಿಕೆ ಟಾಂಗ್

ಜೆಡಿಎಸ್‌ ಜಾತ್ಯತೀತ ಸಿದ್ಧಾಂತಗಳ ಮೇಲೆ ನಂಬಿಕೆ ಇಟ್ಟ ಪಕ್ಷ ಎನ್ನುವ ಕಾರಣಕ್ಕೆ 80 ಜನ ಕಾಂಗ್ರೆಸ್ ಶಾಸಕರು ಇದ್ದರೂ 30 ಸ್ಥಾನ ಗೆದ್ದಂತಹ ಅವರ ಪಕ್ಷಕ್ಕೆ ಬೆಂಬಲ ನೀಡಿ ಕುಮಾರಸ್ವಾಮಿ ಅವರನ್ನು ಮುಖ್ಯಮಂತ್ರಿ ಮಾಡಿದ್ದೆವು. ಈಗ ಸರ್ಕಾರ ಬೀಳಿಸಿದವರ ಜತೆಗೇ ಅವರು ನೆಂಟಸ್ತನ ಮಾಡಿದ್ದಾರೆ. ಅವರನ್ನು ಏನೆಂದು ಕರೆಯಬೇಕು ಎಂದು ಟೀಕಿಸಿದರು. ಕುಮಾರಸ್ವಾಮಿ ಅವರೇ, ನೀವು ಸಹ 20 ಮತ್ತು 14 ತಿಂಗಳು ಮುಖ್ಯಮಂತ್ರಿಗಳಾಗಿ ಕೆಲಸ ಮಾಡಿದ್ದೀರಿ. ನಿಮಗೆ ಆಡಳಿತ ಮಾಡಲು ಬಿಡಲಿಲ್ಲವೇ? ವಿರೋಧ ಪಕ್ಷವಾಗಿ ಟೀಕೆಗಳನ್ನು ಮಾಡಿದರೂ ಬಿಜೆಪಿಯವರಿಗೆ ನಾವು ಆಡಳಿತ ಮಾಡಲು ಬಿಡಲಿಲ್ಲವೇ? ಆದರೆ ನೀವು ಅಧಿಕಾರ ನನಗೆ ಸಿಗಲಿಲ್ಲ ಎಂದು ಅಸೂಯೆಯಿಂದ ಕೈ, ಕೈ ಉಜ್ಜಿಕೊಂಡು ಕುಳಿತರೇ ಏನು ಪ್ರಯೋಜನ ಎಂದು ಪ್ರಶ್ನಿಸಿದರು.

Latest Videos
Follow Us:
Download App:
  • android
  • ios