ಅಮಿತ್ ಶಾ ಜತೆ ಎಚ್ಡಿಕೆ ಆಡಿದ ಕಾವೇರಿ ನುಡಿಮುತ್ತು ಏನೆಂದು ಹೇಳಲಿ: ಡಿಕೆಶಿ
ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರು ಕೇಂದ್ರ ಸಚಿವ ಅಮಿತ್ ಶಾ ಜತೆ ಕಾವೇರಿ ಬಗ್ಗೆ ಚರ್ಚಿಸಿರುವುದಾಗಿ ಹೇಳಿದ್ದಾರೆ. ಆ ನುಡಿಮುತ್ತುಗಳು ಏನು ಎಂಬುದನ್ನು ಬಹಿರಂಗಪಡಿಸಲಿ. ಅದನ್ನು ನಾವೂ ಕೇಳುತ್ತೇವೆ ಎಂದು ಡಿ.ಕೆ ಶಿವಕುಮಾರ್ ಒತ್ತಾಯಿಸಿದ್ದಾರೆ.

ಬೆಂಗಳೂರು (ಸೆ.24): ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಅವರು ಕೇಂದ್ರ ಸಚಿವ ಅಮಿತ್ ಶಾ ಜತೆ ಕಾವೇರಿ ಬಗ್ಗೆ ಚರ್ಚಿಸಿರುವುದಾಗಿ ಹೇಳಿದ್ದಾರೆ. ಆ ನುಡಿಮುತ್ತುಗಳು ಏನು ಎಂಬುದನ್ನು ಬಹಿರಂಗಪಡಿಸಲಿ. ಅದನ್ನು ನಾವೂ ಕೇಳುತ್ತೇವೆ ಎಂದು ಡಿ.ಕೆ ಶಿವಕುಮಾರ್ ಒತ್ತಾಯಿಸಿದ್ದಾರೆ. ಸೋನಿಯಾ ಗಾಂಧಿ ಮಧ್ಯ ಪ್ರವೇಶ ಮಾಡಿ ಸಮಸ್ಯೆ ಬಗೆಹರಿಸಬೇಕು ಎಂಬ ಸಿ.ಟಿ. ರವಿ ಹೇಳಿಕೆಗೆ, ‘ಪ್ರಧಾನಮಂತ್ರಿಗಳು ಮಧ್ಯ ಪ್ರವೇಶ ಮಾಡಬೇಕು ಎಂದು ದೇವೇಗೌಡರು ಸ್ಪಷ್ಟವಾಗಿ ಹೇಳಿದ್ದಾರೆ. ಸಿ.ಟಿ. ರವಿ ಅವರಿಗೆ ಎಲ್ಲೂ ಜಾಗ ಇಲ್ಲ.
ಅದಕ್ಕೆ ಹೋರಾಟ ಮಾಡಿ ಮಂಡ್ಯದಲ್ಲಿ ಏನಾದರೂ ಜಾಗ ಸಿಗುತ್ತಾ ಎಂದು ನೋಡುತ್ತಿದ್ದಾರೆ’ ಎಂದು ತಿರುಗೇಟು ನೀಡಿದರು. ಕಾವೇರಿ ವಿಚಾರವಾಗಿ ದೇವೇಗೌಡರು ಒಂದು ಸಂದರ್ಶನ ನೀಡಿದ್ದಾರೆ. ಅದರಲ್ಲಿ ಅವರು ವ್ಯಕ್ತಪಡಿಸಿರುವ ಅಭಿಪ್ರಾಯ ನೋಡಿದರೆ ಎಲ್ಲವೂ ಅರ್ಥವಾಗುತ್ತದೆ. ನಾವು ರಾಜ್ಯದ ಹಿತ ಕಾಯಲು, ರೈತರ ಹಿತ ಕಾಯಲು ಬದ್ಧರಾಗಿದ್ದೇವೆ. ಇದರಲ್ಲಿ ಅನಗತ್ಯವಾಗಿ ರಾಜಕೀಯ ಮಾಡಲು ಹೋಗಬಾರದು ಎಂದು ಅಸಮಾಧಾನ ವ್ಯಕ್ತಪಡಿಸಿದರು.
ಡಿಕೆಶಿಯವರದ್ದು ಗೂಂಡಾ, ದುರಹಂಕಾರಿ ವರ್ತನೆ: ಸಿ.ಟಿ.ರವಿ ಆರೋಪ
ಬಿಜೆಪಿ- ಜೆಡಿಎಸ್ ಮೈತ್ರಿಗೆ ಠಕ್ಕರ್ ನೀಡಲು ಕೈ ಸಿದ್ಧತೆ: ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಜೆಡಿಎಸ್ ಜೊತೆ ಮೈತ್ರಿ ಮಾಡಿಕೊಂಡು ಚುನಾವಣೆ ಎದುರಿಸಲು ಬಿಜೆಪಿ ಸಿದ್ಧತೆ ನಡೆಸುತ್ತಿರುವಂತೆ, ಬಿಜೆಪಿ-ಜೆಡಿಎಸ್ ಮೈತ್ರಿಗೆ ಠಕ್ಕರ್ ಕೊಡಲು ಕಾಂಗ್ರೆಸ್ ಮುಂದಾಗಿದೆ. ಒಕ್ಕಲಿಗ ಪ್ರಾಬಲ್ಯದ 8 ಜಿಲ್ಲೆಗಳು ಸೇರಿದಂತೆ ರಾಜ್ಯದ 28 ಲೋಕಸಭಾ ಕ್ಷೇತ್ರಗಳಲ್ಲಿ ಮೈತ್ರಿಗೆ ಠಕ್ಕರ್ ಕೊಟ್ಟು ಹೆಚ್ಚಿನ ಸ್ಥಾನಗಳನ್ನು ಪಡೆಯಲು ರಣತಂತ್ರ ರೂಪಿಸುತ್ತಿದೆ.
ದೆಹಲಿಯಲ್ಲಿ ಬುಧವಾರ ಸಂಸದ ಡಿ.ಕೆ.ಸುರೇಶ್ ಮನೆಯಲ್ಲಿ ಸಭೆ ಸೇರಿದ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಈ ಬಗ್ಗೆ ಸುದೀರ್ಘ ಚರ್ಚೆ ನಡೆಸಿದರು. ಒಕ್ಕಲಿಗ ಪ್ರಾಬಲ್ಯದ 8 ಜಿಲ್ಲೆಗಳು ಸೇರಿದಂತೆ ರಾಜ್ಯದ 28 ಲೋಕಸಭಾ ಕ್ಷೇತ್ರಗಳಲ್ಲಿ ಗೆಲುವಿಗೆ ಅನುಸರಿಸಬೇಕಾದ ತಂತ್ರಗಳ ಕುರಿತು ಚರ್ಚೆ ನಡೆಸಿದರು. ಮಂಡ್ಯ, ಹಾಸನ ಸೇರಿ ಮೈಸೂರು ಪ್ರಾಂತ್ಯದಲ್ಲಿ ಒಕ್ಕಲಿಗ ಮತಗಳು ಚದುರದಂತೆ ಯಾವೆಲ್ಲಾ ಕ್ರಮಗಳನ್ನು ಕೈಗೊಳ್ಳಬೇಕು?. ಉಳಿದ ಕಡೆ ಇತರ ಪ್ರಬಲ ಸಮುದಾಯದ ಮತಗಳನ್ನು ಸೆಳೆಯಲು ಯಾವ ತಂತ್ರ ರೂಪಿಸಬೇಕು. ಬಿಜೆಪಿ-ಜೆಡಿಎಸ್ ಮೈತ್ರಿಯಿಂದ ಬಿಜೆಪಿಯಲ್ಲಿ ಯಾರು ಅಸಮಾಧಾನಗೊಂಡಿದ್ದಾರೆ?.
ಕಾವೇರಿ ವಿಚಾರದಲ್ಲಿ ವಿಪಕ್ಷಗಳು ರೈತರನ್ನು ಎತ್ತಿಕಟ್ಟುವ ಕೆಲಸ ಮಾಡುತ್ತಿವೆ: ಚಲುವರಾಯಸ್ವಾಮಿ
ಜೆಡಿಎಸ್ ನಲ್ಲಿ ಯಾರು ಅಸಮಾಧಾನಗೊಂಡಿದ್ದಾರೆ? ಎಂದು ಪತ್ತೆ ಹಚ್ಚಲು ಯಾರಿಗೆ ಹೊಣೆ ವಹಿಸಬೇಕು?. ಅತೃಪ್ತರನ್ನು ಕಾಂಗ್ರೆಸ್ ಗೆ ಕರೆ ತರಲು ಅಥವಾ ಕಾಂಗ್ರೆಸ್ ಪರವಾಗಿ ಕೆಲಸ ಮಾಡಿ ಒಳೇಟು ಕೊಡಲು ಯಾವ ರೀತಿಯ ತಂತ್ರಗಾರಿಕೆ ಅಳವಡಿಸಬೇಕು. ಕಾಂಗ್ರೆಸ್ ನಲ್ಲಿ ಅಸಮಾಧಾನಗೊಂಡಿರುವವರನ್ನು ಸಮಾಧಾನಪಡಿಸುವುದು ಹೇಗೆ? ಎಂಬುದು ಸೇರಿದಂತೆ ಅತಿ ಹೆಚ್ಚು ಲೋಕಸಭಾ ಕ್ಷೇತ್ರಗಳನ್ನು ಗೆಲ್ಲಲು ಅನುಸರಿಸಬೇಕಾದ ಕಾರ್ಯತಂತ್ರಗಳ ಕುರಿತು ಸಭೆಯಲ್ಲಿ ಚರ್ಚೆ ನಡೆಸಲಾಯಿತು. ಅಲ್ಲದೆ, ಈ ಚುನಾವಣಾ ತಂತ್ರಗಾರಿಕೆ ಕುರಿತು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆಯವರ ಬಳಿಯೂ ಮಾಹಿತಿ ಹಂಚಿಕೊಳ್ಳಲಾಯಿತು ಎಂದು ತಿಳಿದು ಬಂದಿದೆ.