ಶಾಲೆಗೆ 25 ಎಕರೆ ಕೊಟ್ಟಿದ್ದೇನೆ, ಎಚ್‌ಡಿಕೆ 1 ಗುಂಟೆ ಏನಾದರೂ ದಾನ ಮಾಡಿದ್ದಾರಾ?: ಡಿಕೆಶಿ

ಗ್ರಾಮೀಣ ಭಾಗದ ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ಕಲ್ಪಿಸಬೇಕು ಎಂಬ ಉದ್ದೇಶದಿಂದ ಕನಕಪುರದ ಮೂರು ಕಡೆ ನಮ್ಮ ತಂದೆ ದೊಡ್ದಆಲಹಳ್ಳಿ ಕೆಂಪೇಗೌಡರ 25 ಎಕರೆ ಜಮೀನನ್ನು ದಾನ ಮಾಡಿದ್ದೇವೆ. 

DCM DK Shivakumar Slams On HD Kumaraswamy Over Land Donation gvd

ಚನ್ನಪಟ್ಟಣ (ನ.09): ಗ್ರಾಮೀಣ ಭಾಗದ ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ಕಲ್ಪಿಸಬೇಕು ಎಂಬ ಉದ್ದೇಶದಿಂದ ಕನಕಪುರದ ಮೂರು ಕಡೆ ನಮ್ಮ ತಂದೆ ದೊಡ್ದಆಲಹಳ್ಳಿ ಕೆಂಪೇಗೌಡರ 25 ಎಕರೆ ಜಮೀನನ್ನು ದಾನ ಮಾಡಿದ್ದೇವೆ. ಕೇಂದ್ರ ಸಚಿವ ಎಚ್‌.ಡಿ. ಕುಮಾರಸ್ವಾಮಿ ಕುಟುಂಬದವರು ಹಾಸನ, ರಾಮನಗರ, ಚನ್ನಪಟ್ಟಣದಲ್ಲಿ ಒಂದೇ ಒಂದು ಗುಂಟೆ ಜಾಗವನ್ನಾದರೂ ದಾನ ಮಾಡಿದ್ದಾರಾ ಎಂದು ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಪ್ರಶ್ನಿಸಿದ್ದಾರೆ. ತಾಲೂಕಿನ ಚಕ್ಕೆರೆ, ಹೊನ್ನನಾಯಕನಹಳ್ಳಿಯಲ್ಲಿ ಕಾಂಗ್ರೆಸ್ ಪರ ಭರ್ಜರಿ ಪ್ರಚಾರ ನಡೆಸಿದ ಡಿಕೆಶಿ, ಕುಮಾರಸ್ವಾಮಿ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದರು. 

ಕುಮಾರಸ್ವಾಮಿಯವರು ತಮ್ಮ ಪ್ರಚಾರದ ವೇಳೆ ಡಿ.ಕೆ.ಸಹೋದರರು ಜಮೀನು ಕಬ್ಜ ಮಾಡಿಕೊಂಡಿದ್ದು, ಶಾಲೆ ಕಟ್ಟಲು ಜಾಗ ನೀಡುತ್ತಿಲ್ಲ. ಜಾಗ ಕೇಳಿದರೆ ದುಡ್ಡು, ದುಡ್ಡು ಅಂತಾರೆ ಎಂದು ಆರೋಪ ಮಾಡಿದ್ದಾರೆ. ಕನಕಪುರದಲ್ಲಿ ಶಾಲೆಗಳ ನಿರ್ಮಾಣಕ್ಕೆ ನಾವು ಮೂರು ಕಡೆ ನಮ್ಮ ತಂದೆಗೆ ಸೇರಿದ 25 ಎಕರೆ ಜಾಗವನ್ನು ದಾನ ಮಾಡಿದ್ದೇವೆ. ಯಾರು ಬೇಕಾದರೂ ಹೋಗಿ ನೋಡಬಹುದು ಎಂದರು. ನಾನು ಚನ್ನಪಟ್ಟಣದಲ್ಲಿ ಉದ್ಯೋಗ ಮೇಳ ನಡೆಸಿದ ಬಳಿಕ, ಕುಮಾರಸ್ವಾಮಿಯವರು ಮಂಡ್ಯದಲ್ಲಿ ಉದ್ಯೋಗ ಮೇಳ ನಡೆಸಿದರು. ಅದೇ ಕೆಲಸವನ್ನು ರಾಮನಗರ ಹಾಗೂ ಚನ್ನಪಟ್ಟಣ ಕ್ಷೇತ್ರದಲ್ಲಿ ಯಾಕೆ ಮಾಡಲಿಲ್ಲ? ಎಂದರು.

ಮನುಷ್ಯತ್ವ ಇರುವ ಭಾವ ಜೀವಿಗಳಿಗಷ್ಟೇ ಕಣ್ಣೀರು ಬರುತ್ತೆ: ನಿಖಿಲ್ ಕುಮಾರಸ್ವಾಮಿ

ಕೋವಿಡ್ ಸಮಯದಲ್ಲಿ ಜನರಿಗೆ ನೆರವಾಗಿದ್ದೀರಾ?: ಕುಮಾರಸ್ವಾಮಿಯವರೇ, ನೀವು ಹಾಗೂ ನಿಮ್ಮ ಪತ್ನಿ ಚನ್ನಪಟ್ಟಣ ಹಾಗೂ ರಾಮನಗರದಲ್ಲಿ ಶಾಸಕರಾಗಿದ್ದವರು. ಕೋವಿಡ್ ಸಮಯದಲ್ಲಿ ನೀವು ಜನರಿಗೆ ನೆರವಾಗಿದ್ದೀರಾ? ಆಗ ಡಿ.ಕೆ.ಸುರೇಶ್ ಜನರಿಗೆ ನೆರವಾಗಲಿಲ್ಲವೇ? ಅನಾಥ ಶವಗಳಿಗೆ ಅಂತ್ಯಸಂಸ್ಕಾರ ಮಾಡಲಿಲ್ಲವೇ? ಇಂತಹ ಒಂದು ಕೆಲಸವನ್ನು ನೀವೇಕೆ ಮಾಡಲಿಲ್ಲ? ಆಗ ಮನೆಯಲ್ಲಿ ಅವಿತು ಕುಳಿತ್ತಿದ್ರಿ. ಯಾರಿಗೂ ಸಹಾಯ ಮಾಡಲಿಲ್ಲ. ಕಷ್ಟಕ್ಕೆ ಆಗಲಿಲ್ಲವೆಂದಾದರೆ ಮತ್ತೆ ಯಾವಾಗ ಜನರ ಜೊತೆ ನಿಲ್ಲುತ್ತೀರಾ? ಎಂದು ಪ್ರಶ್ನಿಸಿದರು.

ನಾವು ಕೈಗಾರಿಕೆ ಮಾಡಲು ಡಿ.ಕೆ.ಶಿವಕುಮಾರ್ ಜಮೀನು ನೀಡುತ್ತಿಲ್ಲ ಎಂದು ಸುಳ್ಳು ಆರೋಪ ಮಾಡಿದ್ದಾರೆ. ಅವರು ಯಾವತ್ತೂ ಇಂತಹ ಕಡೆ ಕಾರ್ಖಾನೆ, ಕೈಗಾರಿಕೆ ಮಾಡುತ್ತೇವೆ ಎಂದು ಹೇಳಿಲ್ಲ. ಒಂದು ವೇಳೆ ಕೇಂದ್ರ ಕೈಗಾರಿಕಾ ಮಂತ್ರಿಯಾಗಿ ಅವರು ಕೈಗಾರಿಕೆ, ಕಾರ್ಖಾನೆ ಮಾಡಲು ಅನುಮತಿ ನೀಡಿದರೆ, ಕೈಗಾರಿಕಾ ಸ್ಥಾಪನೆಗೆ ಮುಂದೆ ಬಂದರೆ, ಜಿಲ್ಲೆಯಲ್ಲಿ ನಾವು ಜಮೀನು ನೀಡಲು ಸಿದ್ಧರಿದ್ದೇವೆ ಎಂದು ಘೋಷಿಸಿದರು.

ನಾನು ತಪ್ಪು ಮಾಡಿದೆ ಅಂತ ಹೇಳುವ ಯೋಗ್ಯತೆ ಯಾರಿಗೂ ಇಲ್ಲ: ಮಾಜಿ ಪ್ರಧಾನಿ ದೇವೇಗೌಡ

ಚನ್ನಪಟ್ಟಣಕ್ಕಾಗಿ ವಾಗ್ಯುದ್ಧ: ರಾಜ್ಯದ 3 ವಿಧಾನಸಭಾ ಕ್ಷೇತ್ರಗಳ ಚುನಾವಣೆ ಸಮೀಪಿಸುತ್ತಿರುವಂತೆ ತೀವ್ರ ಕುತೂಹಲ ಕೆರಳಿಸಿರುವ ಚನ್ನಪಟ್ಟಣ ಕ್ಷೇತ್ರದಲ್ಲಿ ಒಕ್ಕಲಿಗ ನಾಯಕರಾದ ಡಿ.ಕೆ.ಶಿವಕುಮಾರ್ ಹಾಗೂ ಎಚ್.ಡಿ.ಕುಮಾರಸ್ವಾಮಿ ನಡುವೆ ಭರ್ಜರಿ ವಾಕ್ಸಮರ ಆರಂಭವಾಗಿದೆ. ಈ ಸಮರಕ್ಕೆ ಮಾಜಿ ಪ್ರಧಾನಿ ಎಚ್‌.ಡಿ.ದೇವೇಗೌಡ ಕೂಡ ಇಳಿದಿದ್ದು, ಮಾತಿನ ಜಟಾಪಟಿ ಜೋರಾಗಿದೆ.

Latest Videos
Follow Us:
Download App:
  • android
  • ios