ನನ್ನ, ಸಿಎಂ ಹೆಸರಲ್ಲೇ ಶಿವ, ರಾಮ ಇದೆ, ನಾವೂ ಸಂಸ್ಕೃತಿ ಪಾಲಿಸುತ್ತೇವೆ: ಡಿ.ಕೆ.ಶಿವಕುಮಾರ್
ಧರ್ಮ, ಸಂಸ್ಕೃತಿ ಪಾಲನೆ ವಿಚಾರವಾಗಿ ನಮಗೆ ಯಾರೂ ಹೇಳಿಕೊಡುವ, ಒತ್ತಡ ಹಾಕುವ ಅಗತ್ಯವಿಲ್ಲ. ಬೇರೆಯವರು ಹೇಳುವ ಮೊದಲೇ ನಮ್ಮ ಸರ್ಕಾರ ಅಯೋಧ್ಯೆಯ ರಾಮಮಂದಿರ ಉದ್ಘಾಟನೆಯ ದಿನವಾದ ಸೋಮವಾರ ಮುಜರಾಯಿ ಇಲಾಖೆಯ ಎಲ್ಲ ದೇವಾಲಯಗಳಲ್ಲಿ ವಿಶೇಷ ಪೂಜೆಗೆ ಸೂಚನೆ ನೀಡಿದೆ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ.
ಬೆಂಗಳೂರು (ಜ.22): ಧರ್ಮ, ಸಂಸ್ಕೃತಿ ಪಾಲನೆ ವಿಚಾರವಾಗಿ ನಮಗೆ ಯಾರೂ ಹೇಳಿಕೊಡುವ, ಒತ್ತಡ ಹಾಕುವ ಅಗತ್ಯವಿಲ್ಲ. ಬೇರೆಯವರು ಹೇಳುವ ಮೊದಲೇ ನಮ್ಮ ಸರ್ಕಾರ ಅಯೋಧ್ಯೆಯ ರಾಮಮಂದಿರ ಉದ್ಘಾಟನೆಯ ದಿನವಾದ ಸೋಮವಾರ ಮುಜರಾಯಿ ಇಲಾಖೆಯ ಎಲ್ಲ ದೇವಾಲಯಗಳಲ್ಲಿ ವಿಶೇಷ ಪೂಜೆಗೆ ಸೂಚನೆ ನೀಡಿದೆ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ.
ಭಾನುವಾರ ಸುದ್ದಿಗಾರರೊಂದಿಗೆ ಮಾತನಾಡಿ ಅಯೋಧ್ಯೆ ರಾಮಮಂದಿರ ಉದ್ಘಾಟನೆಯ ದಿನ ರಾಜ್ಯದಲ್ಲೂ ಶಾಲೆ, ಕಾಲೇಜುಗಳಿಗೆ ರಜೆ ಘೋಷಿಸಬೇಕೆಂದು ಬಿಜೆಪಿಯವರ ಒತ್ತಾಯಕ್ಕೆ ಪ್ರತಿಕ್ರಿಯಿಸಿದ ಅವರು, ಸಿದ್ದರಾಮಯ್ಯ ಅವರ ಹೆಸರಲ್ಲಿ ರಾಮ ಇದ್ದಾನೆ, ನನ್ನ ಹೆಸರಿನಲ್ಲಿ ಶಿವ ಇದ್ದಾನೆ. ಧರ್ಮ, ಸಂಸ್ಕೃತಿ ಪಾಲನೆ ವಿಚಾರವಾಗಿ ನಮಗೆ ಯಾರೂ ಹೇಳಿಕೊಡುವುದೂ ಬೇಡ, ಒತ್ತಡ ಹಾಕುವುದೂ ಬೇಡ. ನಾವು ಪೂಜೆ, ಪುನಸ್ಕಾರ ಮಾಡಿಕೊಂಡು ನಮ್ಮ ಸಂಸ್ಕೃತಿ ಪಾಲನೆ ಮಾಡಿಕೊಂಡು ಬಂದಿದ್ದೇವೆ ಎಂದರು.
ಪ್ರಾರ್ಥನೆಗಳಿಂದ ಫಲ ಸಿಗುತ್ತದೆ ಎಂಬುದು ನಮ್ಮ ನಂಬಿಕೆ. ದೇವಾಲಯಗಳಲ್ಲಿ ಯಾವ ಪೂಜೆ, ಪುನಸ್ಕಾರ ಮಾಡಬೇಕೋ ಅದನ್ನು ಮಾಡಲಾಗುವುದು. ಬೇರೆಯವರಿಂದ ನಾವು ಹೇಳಿಸಿಕೊಳ್ಳುವ ಪ್ರಮೇಯವೇ ಇಲ್ಲ ಎಂದರು. ಧರ್ಮ, ಭಕ್ತಿ, ಗೌರವ ವಿಚಾರಗಳನ್ನು ನಾವು ಪ್ರಚಾರಕ್ಕೆ ಬಳಸಿಕೊಳ್ಳುವುದಿಲ್ಲ. ನಮ್ಮ ಕರ್ತವ್ಯ ನಾವು ಮಾಡುತ್ತೇವೆ. ರಾಜಕೀಯದಲ್ಲಿ ಧರ್ಮ ಇರಬೇಕು, ಧರ್ಮದಲ್ಲಿ ರಾಜಕಾರಣ ಮಾಡಬಾರದು ಎಂದು ಬಿಜೆಪಿ ನಾಯಕರಿಗೆ ತಿರುಗೇಟು ನೀಡಿದರು.
ಯಾವುದೇ ಕ್ಷಣದಲ್ಲಿ ನಿಗಮ ಮಂಡಳಿ ನೇಮಕ ಪ್ರಕಟ: ಡಿ.ಕೆ.ಶಿವಕುಮಾರ್
ಅನಂತ ಹೆಗಡೆ ಮಾನಸಿಕ ಆರೋಗ್ಯದ ಕಡೆ ಗಮನ ನೀಡಲಿ: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಬಗ್ಗೆ ಮಾತನಾಡಿರುವ ಬಿಜೆಪಿ ಸಂಸದ ಅನಂತಕುಮಾರ್ ಹೆಗಡೆ ಅವರಿಗೆ ಮಾನಸಿಕ ಸ್ಥಿಮಿತತೆ ಇಲ್ಲ. ಅವರು ಇನ್ನಾದರೂ ತಮ್ಮ ಮಾನಸಿಕ ಆರೋಗ್ಯದ ಬಗ್ಗೆ ಕಾಳಜಿ ವಹಿಸಲಿ ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹೇಳಿದ್ದಾರೆ.ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮಾನಸಿಕ ಸ್ಥಿಮಿತ ಇರುವವರು ಈ ರೀತಿ ಮಾತನಾಡುವುದಿಲ್ಲ. ಅವರ ಮಾತು ತಪ್ಪು ಎಂದು ಅವರ ನಾಯಕರುಗಳಿಗೆ ಅರ್ಥವಾಗಿದೆ. ಇದು ಉತ್ತಮ ಬೆಳವಣಿಗೆ.
ಅನಂತ ಕುಮಾರ್ ಹೆಗಡೆ ಅವರು ತಮ್ಮ ಆರೋಗ್ಯದ ಬಗ್ಗೆ ಕಾಳಜಿ ವಹಿಸಲಿ ಎಂದು ಹೇಳಿದರು.ಸಂಕ್ರಾಂತಿ ಹಬ್ಬದ ಶುಭಾಶಯ ಕೋರಿದ ಶಿವಕುಮಾರ್, ಈ ವರ್ಷ 220ಕ್ಕೂ ಹೆಚ್ಚು ತಾಲೂಕುಗಳನ್ನು ಬರ ಪ್ರದೇಶ ಎಂದು ಘೋಷಣೆ ಮಾಡಿದ್ದು, ಮತ್ತೆ ಇಂತಹ ಪರಿಸ್ಥಿತಿ ಬರಬಾರದು. ರೈತರ ಬದುಕು ಹಸನಾಗಬೇಕು ಎಂದು ಭಗವಂತನಲ್ಲಿ ಪ್ರಾರ್ಥಿಸುತ್ತೇನೆ ಎಂದರು.