Asianet Suvarna News Asianet Suvarna News

ಗೌಡ, ಎಚ್‌ಡಿಕೆ ಸಿದ್ಧಾಂತ ಎಲ್ಲಿ ಹೋಯ್ತು?: ಡಿ.ಕೆ.ಶಿವಕುಮಾರ್‌

ನಾವು ಜೆಡಿಎಸ್‌ ಅವರ ಸುದ್ದಿಗೆ ಹೋಗಿಲ್ಲ. ಈ ಹಿಂದೆ ಹಿರಿಯರಾದ ದೇವೇಗೌಡರು ಮತ್ತು ಕುಮಾರಸ್ವಾಮಿ ಅವರು ಏಕಾಂಗಿಯಾಗಿ ಹೋರಾಡುತ್ತೇವೆ ಎಂದಿದ್ದರು. ಹಾಗೆಂದಿದ್ದ ಅವರ ಮಾತು, ಅವರ ಸಿದ್ಧಾಂತ ಈಗ ಎಲ್ಲಿ ಹೋಯಿತು? ದೇವೇಗೌಡರು ಹಾಗೂ ಕುಮಾರಸ್ವಾಮಿ ಈ ಹಿಂದೆ ನೀಡಿದ್ದ ಹೇಳಿಕೆಗಳನ್ನು, ನಿಲುವುಗಳನ್ನು ಮಾಧ್ಯಮದವರು ಕೇಳಬೇಕಲ್ಲವೇ’ ಎಂದು ಪ್ರಶ್ನಿಸಿದ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ 

DCM DK Shivakumar Talks Over BJP JDS Alliance grg
Author
First Published Sep 10, 2023, 1:00 AM IST

ಬೆಂಗಳೂರು(ಸೆ.10): ‘ಜೆಡಿಎಸ್‌ ಪಕ್ಷ ಏಕಾಂಗಿಯಾಗಿಯಾದರೂ ಚುನಾವಣೆಗೆ ಸ್ಪರ್ಧಿಸಲಿ, ಬಿಜೆಪಿ ಜೊತೆ ಮೈತ್ರಿಯಾದರೂ ಮಾಡಿಕೊಳ್ಳಲಿ. ನಾವು ಆ ಬಗ್ಗೆ ಹಿಂದೆಯೂ ತಲೆ ಕೆಡಿಸಿಕೊಂಡಿಲ್ಲ, ಮುಂದೆಯೂ ತಲೆ ಕೆಡಿಸಿಕೊಳ್ಳುವುದಿಲ್ಲ. ಈ ಹಿಂದೆ ಹಿರಿಯರಾದ ದೇವೇಗೌಡರು ಮತ್ತು ಕುಮಾರಸ್ವಾಮಿ ಅವರು ಏಕಾಂಗಿಯಾಗಿ ಹೋರಾಡುತ್ತೇವೆ ಎಂದಿದ್ದರು. ಹಾಗೆಂದಿದ್ದ ಅವರ ಮಾತು, ಅವರ ಸಿದ್ಧಾಂತ ಈಗ ಎಲ್ಲಿ ಹೋಯಿತು?’ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಪ್ರಶ್ನಿಸಿದ್ದಾರೆ.

ಸದಾಶಿವನಗರದ ನಿವಾಸದ ಬಳಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ನಾವು ಜೆಡಿಎಸ್‌ ಅವರ ಸುದ್ದಿಗೆ ಹೋಗಿಲ್ಲ. ಈ ಹಿಂದೆ ಹಿರಿಯರಾದ ದೇವೇಗೌಡರು ಮತ್ತು ಕುಮಾರಸ್ವಾಮಿ ಅವರು ಏಕಾಂಗಿಯಾಗಿ ಹೋರಾಡುತ್ತೇವೆ ಎಂದಿದ್ದರು. ಹಾಗೆಂದಿದ್ದ ಅವರ ಮಾತು, ಅವರ ಸಿದ್ಧಾಂತ ಈಗ ಎಲ್ಲಿ ಹೋಯಿತು? ದೇವೇಗೌಡರು ಹಾಗೂ ಕುಮಾರಸ್ವಾಮಿ ಈ ಹಿಂದೆ ನೀಡಿದ್ದ ಹೇಳಿಕೆಗಳನ್ನು, ನಿಲುವುಗಳನ್ನು ಮಾಧ್ಯಮದವರು ಕೇಳಬೇಕಲ್ಲವೇ’ ಎಂದು ಪ್ರಶ್ನಿಸಿದರು.
‘ಜೆಡಿಎಸ್‌ ಬಿಜೆಪಿ ಮೈತ್ರಿಗೆ ನಮ್ಮ ಯಾವುದೇ ಅಭ್ಯಂತರವಿಲ್ಲ. ಅವರ ರಾಜಕೀಯ ನಿಲುವುಗಳ ಬಗ್ಗೆ ಯಾವ ನಾಯಕರು ಪ್ರತಿಕ್ರಿಯೆ ನೀಡಬೇಕೋ ಅವರು ನೀಡುತ್ತಾರೆ. ಅವರ ರಾಜಕೀಯ ಅಸ್ತಿತ್ವಕ್ಕಾಗಿ ಅವರು ತೀರ್ಮಾನ ಮಾಡುತ್ತಾರೆ. ಅದರ ಬಗ್ಗೆ ನಾನು ಮಾತನಾಡುವುದಿಲ್ಲ’ ಎಂದು ಸ್ಪಷ್ಟಪಡಿಸಿದರು.

ಕಾಂಗ್ರೆಸ್‌ನ ಕನಸಿನ ಯೋಜನೆಗೆ ಕೆವೈಸಿ ತೊಂದರೆನಾ..? ಗೃಹಲಕ್ಷ್ಮಿ ಗೊಂದಲ ಶುರುವಾಗಿದ್ದು ಎಲ್ಲಿ ..?

‘2018 ರಲ್ಲಿ ಮೈತ್ರಿ ಮಾಡಿಕೊಳ್ಳುವಾಗ ರೊಟ್ಟಿಹಳಸಿರಲಿಲ್ಲವೇ?’ ಎಂಬ ಎಚ್‌.ಡಿ. ಕುಮಾರಸ್ವಾಮಿ ಪ್ರಶ್ನೆಗೆ, ‘ಅವರ ಬಗ್ಗೆ ಮೊದಲ ದಿನದಿಂದಲೂ ನಮಗೆ ಗೊತ್ತು. ಒಂದೊಂದು ದಿನ ಒಂದೊಂದು ಮಾತನಾಡುತ್ತಿದ್ದಾರೆ. ಅವರು ಮಾತನಾಡುತ್ತಲೇ ಇರಲಿ. ನಾನು ಕೇಳಿದ ಪ್ರಶ್ನೆಗಳಿಗೆ ಮೊದಲು ಅವರ ಬಳಿ ಉತ್ತರ ಕೇಳಿ’ ಎಂದು ತಿರುಗೇಟು ನೀಡಿದರು.

Follow Us:
Download App:
  • android
  • ios