ಚನ್ನಪಟ್ಟಣದಲ್ಲಿ ವ್ಯಕ್ತಿ ಮೇಲೆ ಚುನಾವಣೆ ನಡೆಯಲ್ಲ. ಪಕ್ಷದ ಸಿದ್ಧಾಂತದ ಮೇಲೆ ಚುನಾವಣೆ ಮಾಡಲು ನಾನು ಹೊರಟಿದ್ದೇನೆ. ಅಭ್ಯರ್ಥಿಯನ್ನ ಜೆಡಿಎಸ್ ಆದರೂ ಮಾಡಿಕೊಳ್ಳಲಿ, ಬಿಜೆಪಿ ಆದರೂ ಮಾಡಿಕೊಳ್ಳಲಿ. ನಮ್ಮ ಮನೆಯನ್ನು ನಾವು ರಿಪೇರಿ ಮಾಡಿಕೊಂಡರೆ ಸಾಕು ಎಂದ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ 

ಮೈಸೂರು(ಅ.13): ಚನ್ನಪಟ್ಟಣದಲ್ಲಿ ನಾವು ವೇದಿಕೆಯನ್ನು ಸೆಟ್ ಮಾಡಿಕೊಳ್ಳುತ್ತಾ ಇದ್ದೇವೆ. ಎಂಪಿ ಚುನಾವಣೆಯಲ್ಲಿ ಕಡಿಮೆ ಅಂತರದಲ್ಲಿ ಹಿನ್ನಡೆ ಆಗಿತ್ತು. ಎಂಎಲ್‌ಎ ಚುನಾವಣೆಯಲ್ಲಿ ಹೆಚ್ಚು ಹಿನ್ನಡೆಯಾಗಿತ್ತು. ಈಗ ನಮ್ಮ ಬೇಸ್ ಸ್ಟ್ರಾಂಗ್ ಮಾಡ್ತಾ ಇದ್ದೇವೆ. ನಮ್ಮ ಕೆಲಸಕ್ಕೆ ಜನರು ನಮ್ಮ ಕೈ ಹಿಡಿಯುತ್ತಾರೆ ಎಂಬ ವಿಶ್ವಾಸ ಇದೆ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ತಿಳಿಸಿದ್ದಾರೆ. 

ಚನ್ನಪಟ್ಟಣ ಉಪಚುನಾವಣೆ ವಿಚಾರಕ್ಕೆ ಸಂಬಂಧಿಸಿದಂತೆ ಇಂದು(ಭಾನುವಾರ) ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಡಿಸಿಎಂ ಡಿ.ಕೆ.ಶಿವಕುಮಾರ್, ನಿಖಿಲ್ ಕುಮಾರಸ್ವಾಮಿ ಸ್ಪರ್ಧೆಯ ಒತ್ತಾಯದ ವಿಚಾರಕ್ಕೆ ಸಂಬಂಧಿಸಿದಣತೆ ಅವರ ಪಕ್ಷದಲ್ಲಿ ಯಾರನ್ನು ಬೇಕಾದರೂ ನಿಲ್ಲಿಸಿಕೊಳ್ಳಲಿ. ಅದು ಅವರಿಗೆ ಬಿಟ್ಟಿದ್ದು, ಅದರ ಬಗ್ಗೆ ಮಾತನಾಡಲ್ಲ ಎಂದು ತಿಳಿಸಿದ್ದಾರೆ. 

ದಸರಾ ನಂತರ ಸಿಎಂ ಬದಲಾವಣೆ ಫಿಕ್ಸ್‌: ಮುಖ್ಯಮಂತ್ರಿ ರೇಸ್‌ನಲ್ಲಿ ಡಿಕೆಶಿ ಮೊದಲ ಸ್ಥಾನದಲ್ಲದ್ದಾರೆ, ಬಿವೈವಿ

ಚನ್ನಪಟ್ಟಣದಲ್ಲಿ ವ್ಯಕ್ತಿ ಮೇಲೆ ಚುನಾವಣೆ ನಡೆಯಲ್ಲ. ಪಕ್ಷದ ಸಿದ್ಧಾಂತದ ಮೇಲೆ ಚುನಾವಣೆ ಮಾಡಲು ನಾನು ಹೊರಟಿದ್ದೇನೆ. ಅಭ್ಯರ್ಥಿಯನ್ನ ಜೆಡಿಎಸ್ ಆದರೂ ಮಾಡಿಕೊಳ್ಳಲಿ, ಬಿಜೆಪಿ ಆದರೂ ಮಾಡಿಕೊಳ್ಳಲಿ. ನಮ್ಮ ಮನೆಯನ್ನು ನಾವು ರಿಪೇರಿ ಮಾಡಿಕೊಂಡರೆ ಸಾಕು ಎಂದು ಹೇಳಿದ್ದಾರೆ.