ಯಾವ ಕ್ಷಣದಲ್ಲಿ ಬೇಕಾದರೂ ನಿಗಮ, ಮಂಡಳಿ ಆಯ್ಕೆ ಪಟ್ಟಿ ಪ್ರಕಟವಾಗಬಹುದು. ಈ ಪಟ್ಟಿ ಮುಂದೂಡುವ ಸಾಧ್ಯತೆ ಇಲ್ಲ. ಚುನಾವಣೆ ಸಮಯದಲ್ಲಿ ನಾವು ಯಾರಿಗೆ ಮಾತು ಕೊಟ್ಟಿದ್ದೆವೋ ಅವರಿಗೆ ಸ್ಥಾನಮಾನ ನೀಡಲಾಗುತ್ತದೆ ಎಂದು ತಿಳಿಸಿದ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್
ಬೆಂಗಳೂರು(ಜ.16): ನಿಗಮ-ಮಂಡಳಿ ನೇಮಕ ಪಟ್ಟಿ ಮು೦ದಡುವ ಸಾಧ್ಯತೆಯಿಲ್ಲ. ಯಾವ ಕ್ಷಣದಲ್ಲಿ ಬೇಕಾದರೂ ಆಯ್ಕೆ ಪಟ್ಟಿ ಪ್ರಕಟ ಆಗಬಹುದು ಎಂದು ಕೆಪಿಸಿಸಿ ಅಧ್ಯಕ್ಷರೂ ಆಗಿರುವ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹೇಳಿದ್ದಾರೆ.
ಸೋಮವಾರ ಸುದ್ದಿಗಾರರ ಜತೆ ಮಾತನಾಡಿದ ಅವರು, 'ಯಾವ ಕ್ಷಣದಲ್ಲಿ ಬೇಕಾದರೂ ನಿಗಮ, ಮಂಡಳಿ ಆಯ್ಕೆ ಪಟ್ಟಿ ಪ್ರಕಟವಾಗಬಹುದು ಎಂದು ತಿಳಿಸಿದ್ದಾರೆ.
ಆ್ಯಂಬುಲೆನ್ಸ್ ಸುಗಮ ಸಂಚಾರಕ್ಕೆ ವೈರ್‌ಲೆಸ್ ಸಂಪರ್ಕ ಬಳಕೆ: ಡಿ.ಕೆ.ಶಿವಕುಮಾರ್
ಈ ಪಟ್ಟಿ ಮುಂದೂಡುವ ಸಾಧ್ಯತೆ ಇಲ್ಲ. ಚುನಾವಣೆ ಸಮಯದಲ್ಲಿ ನಾವು ಯಾರಿಗೆ ಮಾತು ಕೊಟ್ಟಿದ್ದೆವೋ ಅವರಿಗೆ ಸ್ಥಾನಮಾನ ನೀಡಲಾಗುತ್ತದೆ' ಎಂದು ತಿಳಿಸಿದರು.
