ಇತ್ತೀಚೆಗೆ ಕಾರ್ಯಕ್ರಮವೊಂದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಪರೋಕ್ಷವಾಗಿ ಅಸಮಾಧಾನ ಹೊರ ಹಾಕಿದ್ದ ಬಿ.ಕೆ. ಹರಿಪ್ರಸಾದ್, ಈಡಿಗ ಸಮುದಾಯದ ಮುಖಂಡರ ಸಭೆಯಲ್ಲಿ, ‘ನನಗೆ ಸಿಎಂ ಮಾಡುವುದು ಗೊತ್ತು. ಅಧಿಕಾರದಿಂದ ಇಳಿಸುವುದು ಗೊತ್ತು’ ಎಂದು ಹೇಳಿಕೆ ನೀಡಿದ್ದರು.
ಬೆಂಗಳೂರು(ಜು.27): ರಾಜ್ಯ ಕಾಂಗ್ರೆಸ್‌ನಲ್ಲಿ ಇತ್ತೀಚೆಗೆ ನಡೆದಿದ್ದ ರಾಜಕೀಯ ವಿದ್ಯಮಾನಗಳ ಹಿನ್ನೆಲೆಯಲ್ಲಿ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ಸಚಿವ ಕೆ.ಎಚ್. ಮುನಿಯಪ್ಪ ಅವರು ವಿಧಾನಪರಿಷತ್ ಮಾಜಿ ವಿರೋಧಪಕ್ಷದ ನಾಯಕ ಬಿ.ಕೆ. ಹರಿಪ್ರಸಾದ್ ಮನೆಗೆ ತೆರಳಿ ಅವರನ್ನು ಭೇಟಿ ಮಾಡಿ ಚರ್ಚಿಸಿದ್ದು, ತೀವ್ರ ಕುತೂಹಲ ಮೂಡಿಸಿದೆ. ಮಂಗಳವಾರ ರಾತ್ರಿ ಬಿ.ಕೆ. ಹರಿಪ್ರಸಾದ್ ಅವರನ್ನು ಭೇಟಿ ಮಾಡಿದ ಡಿ.ಕೆ. ಶಿವಕುಮಾರ್, ಕೆ.ಎಚ್. ಮುನಿಯಪ್ಪ ಹಾಗೂ ಬಿ.ಎಲ್. ಶಂಕರ್ ಅವರು ಸುದೀರ್ಘ ಮಾತುಕತೆ ನಡೆಸಿದ್ದು, ಈ ವೇಳೆ ಹರಿಪ್ರಸಾದ್ ಅವರ ಮನವೊಲಿಕೆ ಪ್ರಯತ್ನ ಮಾಡಿದರು ಎನ್ನಲಾಗಿದೆ.
ಇತ್ತೀಚೆಗೆ ಕಾರ್ಯಕ್ರಮವೊಂದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಬಿ.ಕೆ. ಹರಿಪ್ರಸಾದ್ ಪರೋಕ್ಷವಾಗಿ ಅಸಮಾಧಾನ ಹೊರ ಹಾಕಿದ್ದರು. ಈಡಿಗ ಸಮುದಾಯದ ಮುಖಂಡರ ಸಭೆಯಲ್ಲಿ, ‘ನನಗೆ ಸಿಎಂ ಮಾಡುವುದು ಗೊತ್ತು. ಅಧಿಕಾರದಿಂದ ಇಳಿಸುವುದು ಗೊತ್ತು’ ಎಂದು ಹೇಳಿಕೆ ನೀಡಿದ್ದರು.
ಬಿಕೆ ಹರಿಪ್ರಸಾದ್ ಭೇಟಿಯಾದ ಕೆಪಿಸಿಸಿ ಅಧ್ಯಕ್ಷ, ಡಿಸಿಎಂ ಡಿ ಕೆ ಶಿವಕುಮಾರ್
ಅವರ ಹೇಳಿಕೆ ಕಾಂಗ್ರೆಸ್ ವಲಯದಲ್ಲಿ ಚರ್ಚೆಗೆ ಗ್ರಾಸವಾಗಿತ್ತು. ಹಲವು ನಾಯಕರು ಸಿದ್ದರಾಮಯ್ಯ ಬಂಡೆಯಂತಹ ನಾಯಕರು, ಅವರನ್ನು ಇಳಿಸುವುದು ಯಾರಿಂದಲೂ ಸಾಧ್ಯವಿಲ್ಲ. ಹರಿಪ್ರಸಾದ್ ಅವರು ಬೇರೆ ರಾಜ್ಯಗಳ ಬಗ್ಗೆ ಹೇಳಿರಬಹುದು ಎಂದು ತಿರುಗೇಟು ನೀಡಿದ್ದರು.
