ಬೆಳಗಾವಿ, (ಮಾ.28): ಬೀದರ್ ಜಿಲ್ಲೆಯ ಬಸವಕಲ್ಯಾಣ ವಿಧಾನಸಭಾ ಕ್ಷೇತ್ರಕ್ಕೆ ಉಪಚುನಾವಣೆ ಎದುರಾಗಿದ್ದು, ಇದೇ ಏಪ್ರಿಲ್ 19ಕ್ಕೆ ಎಲೆಕ್ಷನ್ ನಿಗದಿಯಾಗಿದೆ.

ಆದ್ರೆ, ಟಿಕೆಟ್ ವಿಚಾರದಲ್ಲಿ ಬಿಜೆಪಿಯಲ್ಲಿ ಭಿನ್ನಮತ ಸ್ಫೋಟಗೊಂಡಿದೆ. ಇದನ್ನು ಸ್ವತಃ ಬಸವಕಲ್ಯಾಣ ಉಪಚುನಾವಣೆ ಉಸ್ತುವಾರಿ ಹಾಗೂ ಉಪಮುಖ್ಯಮಂತ್ರಿ ಲಕ್ಷ್ಮಣ ಸವದಿ ಅವರು ಒಪ್ಪಿಕೊಂಡಿದ್ದಾರೆ.

ರಂಗೇರಿದ ಬೈ ಎಲೆಕ್ಷನ್: ಸಿದ್ದರಾಮಯ್ಯನವರನ್ನ ಭೇಟಿಯಾದ ಅಭ್ಯರ್ಥಿ

ಹೌದು...ಈ ಬಗ್ಗೆ ಬೆಳಗಾವಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸವದಿ,  ಬಸವಕಲ್ಯಾಣ ಉಪ ಚುನಾವಣೆ ಹಿನ್ನೆಲೆಯಲ್ಲಿ ಕೆಲವು ಅಕಾಂಕ್ಷಿಗಳು ಹಾಗೂ ಕಾರ್ಯಕರ್ತರು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಅದನ್ನು ಮುಂದಿನ ದಿನಗಳಲ್ಲಿ ಸರಿಪಡಿಸಲಾಗುವುದು. ಇದು ಪಕ್ಷದಲ್ಲಿ ಸಹಜವಾಗಿಯೇ ನಡೆಯುವ ಪ್ರಕ್ರಿಯೆ ಎಲ್ಲವೂ ಸರಿಯಾಗುತ್ತದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಬಸವಕಲ್ಯಾಣ ಬಿಜೆಪಿ ಅಭ್ಯರ್ಥಿ ಶರಣು ಸಲಗರ ಅವರಿಗೆ ಟಿಕೆಟ್‌ ನೀಡಿದ್ದಕ್ಕೆ ಸಹಜವಾಗಿ ರಾಜಕಾರಣದಲ್ಲಿ ಸ್ವಲ್ಪ ಮಟ್ಟಿಗೆ ಅಸಮಾಧಾನ ಮೂಡುವುದು ಸಹಜ. ಶರಣು ಸಲಗರ ಅಧಿಕ ಮತಗಳಿಂದ ಗೆಲುವು ಸಾಧಿಸುತ್ತಾರೆ. ನಿಜವಾದ ಬಿಜೆಪಿ ಕಾರ್ಯಕರ್ತರು ಯಾರೂ ಪಕ್ಷದ ವಿರುದ್ಧ ಅಸಮಾಧಾನ ವ್ಯಕ್ತಪಡಿಸಲ್ಲ. ಬಂಡಾಯವಾಗಿ ಉಪ ಚುನಾವಣೆ ಸ್ಪರ್ಧೆ ಮಾಡುವುದಿಲ್ಲ ಎಂದು ಹೇಳಿದರು.

ಬೆಳಗಾವಿ ಜಿಲ್ಲೆಯ ಉಸ್ತುವಾರಿ ಸಚಿವ ಸ್ಥಾನ ಖಾಲಿ ಇರುವುದು ಮತ್ತು ಇನ್ನೂ ಕೆಲವು ಸಚಿವ ಸ್ಥಾನಗಳು ಖಾಲಿ ಇವೆ. ಯಾವಾಗ ಸಚಿವ ಸಂಪುಟ ವಿಸ್ತರಣೆ ಆಗುತ್ತದೆ. ಆವಾಗ ವರಿಷ್ಠರು ಯಾರಿಗೆ ನೀಡಬೇಕೆಂದು ತಿಳಿಸುತ್ತಾರೆಂದು ಪ್ರತಿಕ್ರಿಯಿಸಿದರು.