ಮಲೆಮಹದೇಶ್ವರ ಅಭಿವೃದ್ಧಿ ಪ್ರಾಧಿಕಾರ ಸಭೆಯಲ್ಲಿ ಮಹದೇಶ್ವರ ಬೆಟ್ಟದಲ್ಲಿ ಶುಚಿತ್ವ, ಮದ್ಯಪಾನ ನಿಷೇಧ ಹಾಗೂ ಮೂಲಸೌಕರ್ಯ ಅಭಿವೃದ್ಧಿಗೊಳಿಸಲು ನಿರ್ಣಯ ಕೈಗೊಳ್ಳಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.
ಚಾಮರಾಜನಗರ (ಏ.26): ಮಲೆಮಹದೇಶ್ವರ ಅಭಿವೃದ್ಧಿ ಪ್ರಾಧಿಕಾರ ಸಭೆಯಲ್ಲಿ ಮಹದೇಶ್ವರ ಬೆಟ್ಟದಲ್ಲಿ ಶುಚಿತ್ವ, ಮದ್ಯಪಾನ ನಿಷೇಧ ಹಾಗೂ ಮೂಲಸೌಕರ್ಯ ಅಭಿವೃದ್ಧಿಗೊಳಿಸಲು ನಿರ್ಣಯ ಕೈಗೊಳ್ಳಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಶ್ರೀ ಮಲೆಮಹದೇಶ್ವರ ಬೆಟ್ಟದಲ್ಲಿ ಶುಕ್ರವಾರ ಮಹದೇಶ್ವರ ದರ್ಶನ ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿ, ಮೈಸೂರು ವಿಭಾಗದ ಚಾಮರಾಜನಗರ ಜಿಲ್ಲೆ ಹಿಂದುಳಿದ ಜಿಲ್ಲೆಯಾಗಿದ್ದು, ಈ ಭಾಗಕ್ಕೆ ವಿಶೇಷ ಗಮನ ನೀಡುವ ನಿಟ್ಟಿನಲ್ಲಿ ಸಚಿವ ಸಂಪುಟ ಸಭೆ ನಡೆಸಲಾಗಿದೆ. ಚಾಮರಾಜನಗರಕ್ಕೆ ಬಂದರೆ ಅಧಿಕಾರ ಹೋಗುತ್ತದೆ ಎಂಬುದು ಸತ್ಯಕ್ಕೆ ದೂರವಾದ ಮಾತು. ಇಂತಹ ಮೌಢ್ಯಗಳೇ ಸಮಾಜದ ಪ್ರಗತಿಗೆ ಮಾರಕವಾಗಿದೆ. ನಾನು ಇದುವರೆಗೆ ಸುಮಾರು 20 ಬಾರಿ ಜಿಲ್ಲೆಗೆ ಬಂದಿದ್ದು, ಎರಡನೇ ಬಾರಿ ಮುಖ್ಯಮಂತ್ರಿಯಾಗಿದ್ದೇನೆ ಎಂದರು.
ಮಲೆಮಹದೇಶ್ವರ ಅಭಿವೃದ್ಧಿಗೆ ನಿರ್ಣಯ: ಮಲೆಮಹದೇಶ್ವರ ಅಭಿವೃದ್ಧಿ ಪ್ರಾಧಿಕಾರ ಸಭೆ ಗುರುವಾರ ನಡೆಸಲಾಗಿದೆ. ಈ ಪ್ರದೇಶದಲ್ಲಿ ಶುಚಿತ್ವ ಕಾಯ್ದುಕೊಳ್ಳಬೇಕು, ಮದ್ಯ ನಿಷೇಧವಾಗಬೇಕು, ದೇವಸ್ಥಾನದಲ್ಲಿ ವಿತರಿಸಲಾಗುವ ಲಾಡು ಪ್ರಸಾದವನ್ನು ಗುಣಮಟ್ಟದಲ್ಲಿ ಹಾಗೂ ಕಡಿಮೆ ದರದಲ್ಲಿ ನೀಡುವ ಬಗ್ಗೆ ಕ್ರಮ ಕೈಗೊಳ್ಳಬೇಕು. ಮಲೆಮಹದೇಶ್ವರ ಸನ್ನಿಧಿಯ ಸುತ್ತಮುತ್ತಲ ಪ್ರದೇಶದಲ್ಲಿ ಮೂಲಸೌಕರ್ಯ ಅಭಿವೃದ್ಧಿಪಡಿಸಬೇಕೆಂದು ನಿರ್ಣಯಿಸಲಾಗಿದೆ ಎಂದರು.
ಹೊಟ್ಟೆಯುರಿಯಿಂದ ಸರ್ಕಾರದ ವಿರುದ್ಧ ವಿಪಕ್ಷ ಆರೋಪ: ಸಿದ್ದರಾಮಯ್ಯ
ಬಿಜೆಪಿಯವರ ಮೇಲೆ ಇಡಿ ದಾಳಿ ಆಗುವುದಿಲ್ಲ: ಶಾಸಕ ವಿನಯ್ ಕುಲಕರ್ಣಿಯವರ ಮನೆಯ ಮೇಲೆ ಇಡಿ ದಾಳಿಯಾಗಿರುವ ಬಗ್ಗೆ, ಕೇಂದ್ರ ಸರ್ಕಾರ ದ್ವೇಷದ ರಾಜಕಾರಣಕ್ಕಾಗಿ ಜಾರಿ ನಿರ್ದೇಶನಾಲಯವನ್ನು ಬಳಸಿಕೊಳ್ಳುತ್ತಿದೆ. ಬಿಜೆಪಿಯವರ ಮೇಲೆ ಯಾವುದೇ ಇಡಿ ದಾಳಿ ಆಗುವುದಿಲ್ಲ. ಪ್ರಧಾನಿ ಮೋದಿಯವರು ಕಾಶ್ಮೀರ ಉಗ್ರರ ದಾಳಿಗೆ ತಕ್ಕ ಪ್ರತ್ಯುತ್ತರ ನೀಡುವುದಾಗಿ ಹೇಳಿರುವ ಬಗ್ಗೆ ಪ್ರತಿಕ್ರಿಯೆ ನೀಡಿ, ಈ ದಾಳಿಯಲ್ಲಿ ಕೇಂದ್ರ ಗುಪ್ತಚರ ಇಲಾಖೆಯ ವೈಫಲ್ಯವಿರುವುದು ಕಾಣುತ್ತಿದೆ ಎಂದರು.
ಅಭಿವೃದ್ಧಿ ಪರ್ವಗಳಿಗೆ ಚಾಲನೆ: ಪಿರಿಯಾಪಟ್ಟಣದ ಸಾರ್ವಜನಿಕ ಅಭಿವೃದ್ಧಿ ಹಿತದೃಷ್ಟಿಯಿಂದ ಪುರಸಭೆಗೆ ಮೂಲಭೂತ ಸೌಕರ್ಯಗಳಿಗೆ 17 ಕೋಟಿ ರು. ಗಳ ವಿಶೇಷ ಅನುದಾನ ಹಾಗೂ ಪಟ್ಟಣದ ಸಾರ್ವಜನಿಕ ಆಸ್ಪತ್ರೆಗೆ ತಾಯಿ ಮತ್ತು ಮಕ್ಕಳ ಮಾದರಿ ಆಸ್ಪತ್ರೆಗೆ ಹೆಚ್ಚುವರಿ ಸಿಬ್ಬಂದಿಗೆ ಅನುದಾನವನ್ನು ಸಹ ನೀಡಲಾಗಿದೆ. ಗ್ರಾಮೀಣ ಮಕ್ಕಳ ಶೈಕ್ಷಣಿಕ ಅಭಿವೃದ್ಧಿಯ ಹಿತದೃಷ್ಟಿಯಿಂದ ರೇಷ್ಮೆ ಇಲಾಖೆಯ ಸಹಯೋಗದೊಂದಿಗೆ ತಾಲೂಕಿನ 44 ಶಾಲೆಗಳಿಗೆ ಸ್ಮಾರ್ಟ್ ಕ್ಮಾಸ್ ತರಗತಿ ಹಾಗೂ ಮೈಸೂರು ಸೇಲ್ಸ್ ಇಂಟರ್ ನ್ಯಾಷಿನಲ್ ವತಿಯಿಂದ 10 ಸಾವಿರ ವಿದ್ಯಾರ್ಥಿಗಳಿಗೆ ಉಚಿತ ನೋಟ್ ಬುಕ್ ವಿತರಣೆ, ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮ ಮಂಡಳಿ, ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ ಮಂಡಳಿ.
ಮಲೆ ಮಹದೇಶ್ವರ ಬೆಟ್ಟ ಮದ್ಯಪಾನ ಮುಕ್ತ: ಸಿಎಂ ಸಿದ್ದರಾಮಯ್ಯ
ಸಣ್ಣ ನೀರಾವರಿ ಇಲಾಖೆ, ಲೋಕೋಪಯೋಗಿ ಇಲಾಖೆ, ನಿರ್ಮಿತಿ ಕೇಂದ್ರ ಮೈಸೂರು, ಪಂಚಾಯತ್ ರಾಜ್ ಎಂಜಿನಿಯರಿಂಗ್ ವಿಭಾಗ, ಪಶು ಸಂಗೋಪನಾ ಇಲಾಖೆ, ಕರ್ನಾಟಕ ರೂರಲ್ ಇನ್ ಫ್ರಾಸ್ಟ್ರಕ್ಚರ್ ಡೆವಲಪ್ ಮೆಂಟ್ ಲಿಮಿಟೆಡ್, ಜಲಸಂಪನ್ಮೂಲ ಇಲಾಖೆ ಹಾರಂಗಿ ಉಪ ವಿಭಾಗ, ಕರ್ನಾಟಕ ನಗರ ನೀರು ಒಳಚರಂಡಿ ಮಂಡಳಿ, ಪ್ರಧಾನಮಂತ್ರಿ ಜನಜಾತಿ ಆದಿವಾಸಿ ನ್ಯಾಯ ಮಹಾ ಅಭಿಯಾನ, ಕರ್ನಾಟಕ ಹೌಸಿಂಗ್ ಬೋರ್ಡ್ ಸೇರಿದಂತೆ ಒಟ್ಟು 103 ಕಾಮಗಾರಿಗಳಿಗೆ ಶಂಕುಸ್ಥಾಪನೆ ನಡೆಯಲಿದ್ದು, ಪಂಚಾಯತ್ ರಾಜ್ಉ ಪ ವಿಭಾಗಕ್ಕೆ ಹಾಗೂ ಮೈಸೂರು ಜಿಲ್ಲಾ ಹಾಲು ಒಕ್ಕೂಟಕ್ಕೆ ಒಟ್ಟು 19 ಕಾಮಗಾರಿ ಉದ್ಘಾಟನೆಗೊಳ್ಳಲಿವೆ.
