ಯತ್ನಾಳ್‌ ಅವರ ಹೇಳಿಕೆಗಳಿಂದ ಪಕ್ಷಕ್ಕೆ ತೀವ್ರ ಮುಜುಗರ ಉಂಟಾಗುತ್ತಿದೆ. ಅವರ ಹೇಳಿಕೆಗಳು ಮಾಧ್ಯಮಗಳಲ್ಲಿ ಹೆಚ್ಚು ಪ್ರಸಾರವಾಗುವುದರಿಂದ ಪಕ್ಷದ ವರ್ಚಸ್ಸಿಗೆ ಧಕ್ಕೆ ಉಂಟಾಗುತ್ತಿದೆ. ಇದನ್ನು ತಕ್ಷಣ ನಿಯಂತ್ರಿಸಬೇಕು. ಪಕ್ಷದ ವರಿಷ್ಠರು ಯತ್ನಾಳ್‌ ಅವರ ಬಾಯಿಗೆ ಬೀಗ ಹಾಕಬೇಕು. ಈ ಬಗ್ಗೆ ವರಿಷ್ಠರ ಗಮನಕ್ಕೆ ತರಬೇಕು ಎಂದು ಸಭೆಯಲ್ಲಿ ನಿರ್ಧಾರ ಕೈಗೊಳ್ಳಲಾಗಿದೆ. 

ಬೆಂಗಳೂರು(ಡಿ.29): ಪಕ್ಷಕ್ಕೆ ಮತ್ತು ಪಕ್ಷದ ನಾಯಕರಿಗೆ ಮುಜುಗರ ತರುವಂತಹ ಹೇಳಿಕೆಗಳನ್ನು ನೀಡುತ್ತಿರುವ ಶಾಸಕ ಬಸನಗೌಡ ಪಾಟೀಲ್ ಯತ್ನಾಳ ಅವರ ವಿರುದ್ಧ ಕ್ರಮ ಕೈಗೊಳ್ಳುವಂತೆ ಪಕ್ಷದ ವರಿಷ್ಠರಿಗೆ ಮನವಿ ಮಾಡಲು ರಾಜ್ಯ ಬಿಜೆಪಿಯ ಹಿರಿಯ ನಾಯಕರು ನಿರ್ಧಾರ ಕೈಗೊಂಡಿದ್ದಾರೆ.

ಗುರುವಾರ ಪಕ್ಷದ ಕಚೇರಿಯಲ್ಲಿ ನಡೆದ ಹಿರಿಯ ನಾಯಕರ ವಿಶೇಷ ಸಮಾಲೋಚನಾ ಸಭೆಯಲ್ಲಿ ಮಾಜಿ ಮುಖ್ಯಮಂತ್ರಿ ಡಿ.ವಿ.ಸದಾನಂದಗೌಡ ಸೇರಿದಂತೆ ಹಲವು ನಾಯಕರು ಯತ್ನಾಳ್‌ ಅವರ ಹೇಳಿಕೆಗಳ ಬಗ್ಗೆ ಪ್ರಸ್ತಾಪಿಸಿ ಕಡಿವಾಣ ಹಾಕುವಂತೆ ಒತ್ತಾಯಿಸಿದ್ದಾರೆ ಎನ್ನಲಾಗಿದೆ.

ಯಡಿಯೂರಪ್ಪ ಪಂಚಮಸಾಲಿಗೆ 2ಎ ಮೀಸಲಾತಿ ಕೊಡಲಿಲ್ಲ: ಯತ್ನಾಳ

ಯತ್ನಾಳ್‌ ಅವರ ಹೇಳಿಕೆಗಳಿಂದ ಪಕ್ಷಕ್ಕೆ ತೀವ್ರ ಮುಜುಗರ ಉಂಟಾಗುತ್ತಿದೆ. ಅವರ ಹೇಳಿಕೆಗಳು ಮಾಧ್ಯಮಗಳಲ್ಲಿ ಹೆಚ್ಚು ಪ್ರಸಾರವಾಗುವುದರಿಂದ ಪಕ್ಷದ ವರ್ಚಸ್ಸಿಗೆ ಧಕ್ಕೆ ಉಂಟಾಗುತ್ತಿದೆ. ಇದನ್ನು ತಕ್ಷಣ ನಿಯಂತ್ರಿಸಬೇಕು. ಪಕ್ಷದ ವರಿಷ್ಠರು ಯತ್ನಾಳ್‌ ಅವರ ಬಾಯಿಗೆ ಬೀಗ ಹಾಕಬೇಕು. ಈ ಬಗ್ಗೆ ವರಿಷ್ಠರ ಗಮನಕ್ಕೆ ತರಬೇಕು ಎಂದು ಸಭೆಯಲ್ಲಿ ನಿರ್ಧಾರ ಕೈಗೊಳ್ಳಲಾಗಿದೆ ಎಂದು ಮೂಲಗಳು ತಿಳಿಸಿವೆ.

ಇದೇ ವೇಳೆ ಸಭೆಯಲ್ಲಿ ಯತ್ನಾಳ್‌ ಅವರ ಹೇಳಿಕೆಗಳ ಬಗ್ಗೆ ಹೆಚ್ಚು ಚರ್ಚೆ ಮಾಡುವ ಅಗತ್ಯವಿಲ್ಲ. ಅದರಿಂದ ಮಾಧ್ಯಮಗಳಲ್ಲಿ ಆ ಸುದ್ದಿಯೇ ಹೆಚ್ಚು ರಾರಾಜಿಸಲಿದೆ. ಅದನ್ನು ವರಿಷ್ಠರಿಗೆ ಬಿಡುವುದು ಸೂಕ್ತ ಎಂಬ ಅಭಿಪ್ರಾಯೂ ವ್ಯಕ್ತವಾಯಿತು ಎಂದು ತಿಳಿದು ಬಂದಿದೆ.