Asianet Suvarna News Asianet Suvarna News

ಟಿಕೆಟ್‌ ನೀಡುವ ಬಗ್ಗೆ ಪಕ್ಷದ ವರಿಷ್ಠರ ತೀರ್ಮಾನ ಅಂತಿಮ: ಸಚಿವ ಎಂಟಿಬಿ ನಾಗರಾಜ್‌

ಮುಂದಿನ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿಯಿಂದ ಸ್ಪರ್ದಿಸುವ ಅಭ್ಯರ್ಥಿಗಳಿಗೆ ಟಿಕೆಟ್‌ ನೀಡುವ ಬಗ್ಗೆ ಪಕ್ಷದ ವರಿಷ್ಠರು ಅಂತಿಮ ತೀರ್ಮಾನ ಕೈಗೊಳ್ಳಲಿದ್ದಾರೆ. ಕಾರ್ಯಕರ್ತರು ಗೊಂದಲಗಳಿಗೆ ಕಿವಿ ಗೊಡದೆ ಪಕ್ಷ ಸಂಘಟಿಸುವ ಕೆಲಸ ಮಾಡಬೇಕು ಎಂದು ಪೌರಡಳಿತ ಸಚಿವ ಎಂಟಿಬಿ ನಾಗರಾಜ್‌ ಹೇಳಿದರು. 

Decision of the Party Leaders is Final Regarding Ticket issuance Says Minister MTB Nagaraj gvd
Author
First Published Jan 12, 2023, 9:46 PM IST

ಮಾಲೂರು (ಜ.12): ಮುಂದಿನ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿಯಿಂದ ಸ್ಪರ್ದಿಸುವ ಅಭ್ಯರ್ಥಿಗಳಿಗೆ ಟಿಕೆಟ್‌ ನೀಡುವ ಬಗ್ಗೆ ಪಕ್ಷದ ವರಿಷ್ಠರು ಅಂತಿಮ ತೀರ್ಮಾನ ಕೈಗೊಳ್ಳಲಿದ್ದಾರೆ. ಕಾರ್ಯಕರ್ತರು ಗೊಂದಲಗಳಿಗೆ ಕಿವಿ ಗೊಡದೆ ಪಕ್ಷ ಸಂಘಟಿಸುವ ಕೆಲಸ ಮಾಡಬೇಕು ಎಂದು ಪೌರಡಳಿತ ಸಚಿವ ಎಂಟಿಬಿ ನಾಗರಾಜ್‌ ಹೇಳಿದರು. ತಾಲೂಕಿನ ಕಸಬಾ ಹೋಬಳಿಯ ತೊರ್ನಹಳ್ಳಿ ಗ್ರಾಪಂನ ಸಫಲಾಂಭ ಭೀಮೇಶ್ವರ ಸ್ವಾಮಿ ರಾಸುಗಳ ಜಾತ್ರಾ ಮಹೋತ್ಸವದಲ್ಲಿ ಬಿಜೆಪಿ ಪ್ರಕೋಷ್ಠ ಪಲಾನುಭವಿಗಳ ಸಮಿತಿ ವತಿಯಿಂದ ಹಮ್ಮಿಕೊಂಡಿದ್ದ ರಾಸುಗಳಿಗೆ ಬೂಸಾ ವಿತರಣೆ ಕಾರ್ಯಕ್ರಮದಲ್ಲಿ ಸಚಿವರು ಮಾತನಾಡಿದರು.

ಹೂಡಿಗೆ ಟಿಕೆಟ್‌ ನೀಡುವ ಸಾಧ್ಯತೆ: ಮಾಲೂರು ತಾಲ್ಲೂಕಿನಲ್ಲಿ ಹೂಡಿ ವಿಜಯ್‌ ಕುಮಾರ್‌ ಅವರು ನಾಲ್ಕು ವರ್ಷಗಳಿಂದ ಬಿಜೆಪಿ ಕಾರ್ಯಕರ್ತರ ಸಮಸ್ಯೆಗಳಿಗೆ ಸ್ಪಂದಿಸಿ ಸಕ್ರಿಯವಾಗಿ ಪಕ್ಷ ಸಂಘಟನೆಯಲ್ಲಿ ತೊಡಗಿಸಿಕೊಂಡಿದ್ದಾರೆ. ಅವರಿಗೆ ಪಕ್ಷದ ವರಿಷ್ಟರು ವಿಧಾನ ಸಭೆ ಚುನಾವಣೆಯಲ್ಲಿ ಸ್ಪರ್ಧಿಸಲು ಟಿಕೆಟ್‌ ನೀಡುವ ಭರವಸೆ ಇದೆ. ಪಕ್ಷದ ವರಿಷ್ಟರು ಅಭ್ಯರ್ಥಿಗಳ ಆಯ್ಕೆ ಮಾಡುವುದು ಅಂತಿಮ. ಸಚಿವರಾಗಲಿ, ಸಂಸದರಾಗಲಿ ಇವರೆ ಅಭ್ಯರ್ಥಿ ಎಂದು ಹೇಳಿದೆ ಅದು ಅಂತಿಮ ಅಲ್ಲ. ಪಕ್ಷದ ವರಿಷ್ಟರ ತೀರ್ಮಾನವೇ ಅಂತಿಮ ಎಂದರು.

ಬಿಜೆಪಿಯ ನಿಜ​ವಾದ ಬಿ ಟೀಮ್‌ ಕಾಂಗ್ರೆಸ್‌: ನಿಖಿಲ್‌ ಕುಮಾ​ರ​ಸ್ವಾಮಿ

ಕೆಲವೇ ದಿನಗಳಲ್ಲಿ ಪಕ್ಷದ ವರಿಷ್ಠರು ಮೊದಲನೇ ಪಟ್ಟಿ ಬಿಡುಗಡೆ ಮಾಡಲಿದ್ದಾರೆ. ಚುನಾವಣೆಗಳು ಎಂದರೆ ರಾಷ್ಟ್ರೀಯ ಪ್ರಾದೇಶಿಕ ಪಕ್ಷಗಳಲ್ಲಿ ಆಕಾಂಕ್ಷಿಗಳ ಪೈಪೋಟಿ ಹೆಚ್ಚಾಗಿಯೇ ಇರುತ್ತದೆ. ರಾಷ್ಟ್ರೀಯ ಪಕ್ಷ ಬಿಜೆಪಿ ಪಕ್ಷದಲ್ಲಿ ಆಕಾಂಕ್ಷಿಗಳು ಹೆಚ್ಚಾಗಿಯೇ ಇರುತ್ತಾರೆ, ಮುಂಬರುವ ವಿಧಾನ ಸಭೆ ಚುನಾವಣೆಯಲ್ಲಿ 130ಕ್ಕೂ ಹೆಚ್ಚು ಕ್ಷೇತ್ರಗಳಲ್ಲಿ ಬಿಜೆಪಿ ಪಕ್ಷದ ಶಾಸಕರು ಆಯ್ಕೆಯಾಗಿ ಮತ್ತೊಮ್ಮೆ ರಾಜ್ಯದಲ್ಲಿ ಬಿಜೆಪಿ ಪಕ್ಷ ಆಡಳಿತಕ್ಕೆ ಬರಲಿದೆ. ಕಾರ್ಯಕರ್ತರು ಯಾರಿಗೆ ಟಿಕೆಟ್‌ ನೀಡಿದರೂ ಅವರ ಗೆಲುವಿಗೆ ಶ್ರಮಿಸಬೇಕು ಎಂದು ಮನವಿ ಮಾಡಿದರು.

ಬಿಜೆಪಿ ಸೇರ್ಪಡೆಯಾದವರ ಮೇಲೆ ಒತ್ತಡ ಸಲ್ಲ: ಸಚಿವ ಎಂಟಿಬಿ ನಾಗರಾಜ್‌

ಮಾಜಿ ಸಿಎಂ ಸಿದ್ದರಾಮಯ್ಯ ಸ್ವತಂತ್ರರು: ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಅವರ ಪಕ್ಷದಲ್ಲಿ ಸ್ವಾತಂತ್ರ್ಯವಿದೆ. ಅವರ ಪಕ್ಷದ ವರಿಷ್ಠದ ತೀರ್ಮಾನದಂತೆ ಅವರು ಎಲ್ಲಿ ಬೇಕಾದರೂ ಚುನಾವಣೆಗೆ ನಿಲ್ಲಬಹುದು. ಆದರೆ ಸೋಲು ಗೆಲವು ನಿರ್ಧರಿಸುವವರು ಮಹಾಜನತೆ. ಇಲ್ಲಿನ ಸಫಲಾಂಬ ಭೀಮೇಶ್ವರ ರಾಸುಗಳ ಜಾತ್ರೆಯು ಹಲವಾರು ವರ್ಷಗಳಿಂದ ನಡೆಯುತ್ತಾ ಬಂದಿದೆ ಇಲ್ಲಿ ದನಗಳ ಜಾತ್ರೆ ವಿಶೇಷವಾಗಿದೆ. ಬಿಜೆಪಿ ಪಕ್ಷದಲ್ಲಿ ಮಾಲೂರು ವಿಧಾನಸಭಾ ಕ್ಷೇತ್ರದಲ್ಲಿ ಅಭ್ಯರ್ಥಿಯಾಗಲು ಪ್ರಚಾರದಲ್ಲಿ ತೊಡಗಿಸಿಕೊಂಡಿರುವ ಹೂಡಿ ವಿಜಯಕುಮಾರ್‌ ಅವರು ಜಾತ್ರೆಗೆ ಆಗಮಿಸಿರುವ ರಾಸುಗಳಿಗೆ ಬೂಸಾ ವಿತರಣೆ ಮಾಡುತ್ತಿರುವುದು ಒಳ್ಳೆಯ ಬೆಳವಣಿಗೆ ಎಂದರು. ಈ ಸಂದರ್ಭದಲ್ಲಿ ಬಿಜೆಪಿ ಮುಖಂಡರಾದ ಆರ್‌.ಪ್ರಭಾಕರ್‌, ಹರೀಶ್‌ ಗೌಡ, ಬಿ.ಆರ್‌.ವೆಂಕಟೇಶ್‌, ರೋಜಾ ರಾಜಪ್ಪ, ಮಲ್ಲೇಶ್‌, ಜಯರಾಜ್‌, ಬಡಗಿ ಶ್ರೀನಿವಾಸ್‌, ವೆಂಕಟೇಶ್‌, ಕೂರಿ ಮಂಜು, ಮಂಜುನಾಥ್‌, ಬಿ.ಆರ್‌.ವೆಂಕಟೇಶ್‌, ಕುಟ್ಟಿ ಇನ್ನಿತರರು ಹಾಜರಿದ್ದರು.

Follow Us:
Download App:
  • android
  • ios