Asianet Suvarna News Asianet Suvarna News

ಡೆಂಘೀ ತುರ್ತು ಸ್ಥಿತಿ ಘೋಷಿಸಿ, ಜನರಿಗೆ ಉಚಿತವಾಗಿ ಸರ್ಕಾರದಿಂದಲೇ ಪರೀಕ್ಷೆ ಮಾಡಿಸಬೇಕು: ಆರ್.ಅಶೋಕ್

ರಾಜ್ಯದಲ್ಲಿ ಕೂಡಲೇ ಡೆಂಘೀ ತುರ್ತು ಪರಿಸ್ಥಿತಿ ಘೋಷಿಸಿ, ಜನರಿಗೆ ಉಚಿತವಾಗಿ ಸರ್ಕಾರದಿಂದಲೇ ಪರೀಕ್ಷೆ ಮಾಡಿಸಬೇಕು ಎಂದು ವಿಧಾನಸಭೆಯ ಪ್ರತಿಪಕ್ಷದ ನಾಯಕ ಆರ್.ಅಶೋಕ್ ಆಗ್ರಹಿಸಿದ್ದಾರೆ. 

Declaring dengue emergency people should be tested free of charge by the government Says R Ashok gvd
Author
First Published Jul 8, 2024, 9:52 AM IST

ಬೆಂಗಳೂರು (ಜು.08): ರಾಜ್ಯದಲ್ಲಿ ಕೂಡಲೇ ಡೆಂಘೀ ತುರ್ತು ಪರಿಸ್ಥಿತಿ ಘೋಷಿಸಿ, ಜನರಿಗೆ ಉಚಿತವಾಗಿ ಸರ್ಕಾರದಿಂದಲೇ ಪರೀಕ್ಷೆ ಮಾಡಿಸಬೇಕು ಎಂದು ವಿಧಾನಸಭೆಯ ಪ್ರತಿಪಕ್ಷದ ನಾಯಕ ಆರ್.ಅಶೋಕ್ ಆಗ್ರಹಿಸಿದ್ದಾರೆ. ಜಯನಗರ ಸಾರ್ವಜನಿಕ ಆಸ್ಪತ್ರೆಗೆ ಭಾನುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸರ್ಕಾರ ಪ್ರತಿ ತಾಲೂಕಿನಲ್ಲಿ ಟಾಸ್ಕ್‌ಫೋರ್ಸ್ ರಚಿಸಿ ಔಷಧಿ ಪೂರೈಸುವ, ರೋಗ ನಿಯಂತ್ರಿಸುವ ಕ್ರಮಗಳನ್ನು ವಹಿಸಬೇಕಿತ್ತು.ಈ ಯಾವುದೇ ಕೆಲಸವನ್ನು ಸರ್ಕಾರ ಮಾಡಿಲ್ಲ. 2 ಲಕ್ಷಕ್ಕೂ ಅಧಿಕ ಮಂದಿ ಡೆಂಘೀಗೆ ಒಳಗಾಗಿದ್ದಾರೆ. ಅವರಿಗೆ ಪರೀಕ್ಷೆ ವೆಚ್ಚವನ್ನು ಸರ್ಕಾರವೇ ಭರಿಸಬೇಕು ಎಂದರು. ರಾಜ್ಯದಲ್ಲಿ ಡೆಂಘೀ ರೋಗ ವೇಗವಾಗಿ ಹರಡುತ್ತಿದ್ದು, ಪ್ರತಿ ದಿನ ಮೂರರಿಂದ ಸರ್ಕಾರಕ್ಕೆ ನಾಲ್ಕು ಜನರು ಸಾವಿಗೀಡಾಗುತ್ತಿದ್ದಾರೆ. 

ಬೆಂಗಳೂರು ಸೇರಿದಂತೆ ಎಲ್ಲ ಭಾಗಗಳಲ್ಲಿ ಜನರು ಭಯಕ್ಕೊಳಗಾದರೂ ಈ ಬಗ್ಗೆ ಭಯವಿಲ್ಲ. ಪರೀಕ್ಷೆ ನಡೆಸಿದ ಪೈಕಿ ಶೇ.14 ರಷ್ಟು ಮಂದಿ ಯಲ್ಲಿ ಡೆಂಘೀ ಸೋಂಕು ಕಾಣಿಸಿಕೊ ಳ್ಳುತ್ತಿದೆ. ಬೇರೆ ರೋಗಗಳಿರುವ ವ್ಯಕ್ತಿ ಗಳಿಗೆ ಡೆಂಘೀ ಬಂದರೆ ಸಾವಿನ ಸಾಧ್ಯತೆ ಹೆಚ್ಚಿರುತ್ತದೆ. ಎಲ್ಲೆಡೆ ಕಸದ ರಾಶಿ ಇದೆ, ಮಳೆಯಿಂದಾಗಿ ಅಲ್ಲಲ್ಲಿ ನೀರು ಸಂಗ್ರಹ ವಾಗುತ್ತಿದೆ. ಆದರೂ ಸರ್ಕಾರ ಏನೂ ಕ್ರಮ ವಹಿಸಿಲ್ಲ ಎಂದು ದೂರಿದರು. ಮಕ್ಕಳಿಗೂ ಡೆಂಘೀ ರೋಗ ಬರುತ್ತಿದೆ. ಅಧಿಕಾರಿಗಳು ಕೊಠಡಿ ಬಿಟ್ಟು ಹೊರಗೆ ಬರುತ್ತಿಲ್ಲ. ಸರ್ಕಾರ ಡೆಂಘೀ ತುರ್ತು ಪರಿಸ್ಥಿತಿ ಘೋಷಣೆ ಮಾಡಿದರೆ ಮಾತ್ರ ಅಧಿಕಾರಿಗಳು ಸರಿಯಾಗಿ ಕಾರ್ಯನಿರ್ವಹಿಸಲು ಸಾಧ್ಯ. 

ಬೆಂಗಳೂರು ಸೇರಿದಂತೆ ಅನೇಕ ಕಡೆ ಕಸದ ರಾಶಿ ಬಿದ್ದಿದೆ. ಅದನ್ನು ಸ್ವಚ್ಛ ಮಾಡಲು ಸರ್ಕಾರ ಗಮನಹರಿಸಬೇಕು. ಆಶಾ ಕಾರ್ಯಕರ್ತೆಯರು, ಅಂಗ ನವಾಡಿ ಸಹಾಯಕರನ್ನು ಬಳಸಿಕೊಂಡು ಮನೆ ಮನೆಗೆ ಹೋಗಿ ಪರೀಕ್ಷೆ ಮಾಡಬೇಕು. ಪ್ರತಿ ಆಸ್ಪತ್ರೆಯಲ್ಲಿ ಡೆಂಘೀಗೆ ಒಂದು ವಾರ್ಡ್ ಮೀಸಲಿಡ ಬೇಕು ಎಂದು ಒತ್ತಾಯಿಸಿದರು. ಆತಂಕ ನಿವಾರಿಸಿ: ಜನರಲ್ಲಿ ಡೆಂಘೀ ಬಗ್ಗೆ ಉಂಟಾಗಿರುವ ಆತಂಕವನ್ನು ನಿವಾರಿಸಲು ಸರ್ಕಾರ ಜಾಗೃತಿ ಮೂಡಿಸಬೇಕು. ಉದ್ಯಾನ, ಸಾರ್ವಜನಿಕ ಸ್ಥಳ, ನೀರು ನಿಲ್ಲುವ ಸ್ಥಳ ಸೇರಿದಂತೆ ಸೊಳ್ಳೆಗಳ ನಿಯಂತ್ರಣಕ್ಕೆ ಫಾಗಿಂಗ್ ಮಾಡಿಸಬೇಕು. ಆರೋಗ್ಯ ಸಚಿವರು ಎಲ್ಲ ಜಿಲ್ಲೆಗಳಿಗೆ ಹೋಗಿ ಜನರನ್ನು ಭೇಟಿ ಮಾಡಬೇಕು. 

‘ಪಿಎಂ ಕುಸುಮ್‌’ ಯೋಜನೆಯಲ್ಲಿ ಬೆಳಗಾವಿ ಜಿಲ್ಲೆ ನಂ.1: ರಾಜ್ಯದಲ್ಲಿ 18,000 ರೈತರಿಂದ ಅರ್ಜಿ ಸಲ್ಲಿಕೆ

ಕಾಂಗ್ರೆಸ್‌ನ ಎಲ್ಲ ಸಚಿವರು, ಶಾಸಕರು ಕೂಡ ಆಸ್ಪತ್ರೆಗೆ ಭೇಟಿ ನೀಡಿ ಜನರಿಗೆ ಧೈರ್ಯ ಹೇಳಬೇಕೆಂದರು. ಜತೆಗೆ ಝೀಕಾ, ಕಾಲರಾ ಕೂಡ ಕಂಡು ಬಂದಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಜಿಲ್ಲೆಯಲ್ಲೇ ಜನರು ಕಲುಷಿತ ನೀರು ಕುಡಿದು ಸಾವನ್ನಪ್ಪಿದ್ದಾರೆ. ಈ ಮೂರು ರೋಗಗಳಿಂದ ಜನರನ್ನು ಕಾಪಾ ಡಲು ಸರ್ಕಾರ ಹೆಚ್ಚು ಗಮನಹರಿಸಬೇಕು. ಬಿಬಿಎಂಪಿ ಆಯುಕ್ತರಿಗೇ ಸೊಳ್ಳೆ ಕಚ್ಚಿ ಡೆಂಘೀ ಬಂದಿರುವುದಾಗ ಬಿಬಿಎಂಪಿ ಬೇರೆಯವರನ್ನು ಕಾಪಾಡಲು ಸಾಧ್ಯವಿಲ್ಲ ಎಂಬ ಆತಂಕ ಜನರಲ್ಲಿ ಮೂಡಿದೆ. ಸಭೆ ಮಾಡುವುದರಿಂದ ಏನೂ ಆಗುವುದಿಲ್ಲ. ಅಧಿಕಾರಿಗಳು ಸ್ಥಳಕ್ಕೆ ಬಂದು ಕೆಲಸ ಮಾಡ ಬೇಕು. ನಗರದಲ್ಲಿ ಬಿದ್ದಿರುವ ರಾಶಿ ಕಸ ವನ್ನು ವಿಲೇವಾರಿ ಮಾಡಲು ಅಭಿಯಾ ನದ ಮಾದರಿಯಲ್ಲಿ ಕೆಲಸ ಮಾಡಬೇಕು. ಹೆಚ್ಚು ಹಣ ನೀಡಬೇಕು ಎಂದರು.

Latest Videos
Follow Us:
Download App:
  • android
  • ios