ರಾಜಕೀಯ ಪಕ್ಷಗಳಲ್ಲಿ ಪಕ್ಷಾಂತರ ಸಹಜ: ಸಚಿವ ಸತೀಶ ಜಾರಕಿಹೊಳಿ
ಜಗದೀಶ್ ಶೆಟ್ಟರ್ ಅವರು ಲೋಕಸಭೆ ಚುನಾವಣೆಯಲ್ಲಿ ಯಾವ ಕೇತ್ರದಿಂದ ಸ್ಪರ್ಧಿಸುತ್ತಾರೆ ಎಂಬುದು ನನಗೆ ಗೊತ್ತಿಲ್ಲ. ಅದು ಅವರ ಪಕ್ಷದ ನಿರ್ಧಾರ. ಯಾವ ಕ್ಷೇತ್ರದಿಂದ ಸ್ಪರ್ಧಿಸಿದರೂ ನಮಗೆ ಅಭ್ಯಂತರವಿಲ್ಲ ಎಂದ ಲೋಕೋಪಯೋಗಿ ಸಚಿವ ಸತೀಶ ಜಾರಕಿಹೊಳಿ
ಬೆಳಗಾವಿ(ಜ.27): ಚುನಾವಣೆ ಎಂದರೆ ಮೋಡ ಇದ್ದ ಹಾಗೆ. ಒಂದು ಕಡೆ ಹೆಚ್ಚಾಗಿ ಮೋಡ, ಗಾಳಿ, ಮಳೆ ಬರುತ್ತದೆ. ಇನ್ನೊಂದು ಕಡೆ ಕಡಿಮೆ ಮಳೆಯೂ ಬೀಳಬಹುದು. ಈಗ ಅದೇ ರೀತಿ ನಡೆದಿದೆ. ಎರಡು ತಿಂಗಳು ಪಕ್ಷಾಂತರ ಸಹಜ. ಚುನಾವಣೆ ಸಮಯದಲ್ಲಿ ಒತ್ತಡಗಳು ಬರುವುದು ಸಹಜ. ಜಗದೀಶ್ ಶೆಟ್ಟರ್ ಯಾವ ಕಾರಣಕ್ಕೆ ಪಕ್ಷ ಬಿಟ್ಟಿದ್ದಾರೆ ಎಂಬುದು ನನಗೆ ಗೊತ್ತಿಲ್ಲ ಎಂದು ಲೋಕೋಪಯೋಗಿ ಸಚಿವ ಸತೀಶ ಜಾರಕಿಹೊಳಿ ಹೇಳಿದರು.
ನಗರದಲ್ಲಿ ಶುಕ್ರವಾರ ಸುದ್ದಿಗಾರರೊಂದಿಗೆ ಅವರು ಮಾತನಾಡಿದರು. ಜಗದೀಶ್ ಶೆಟ್ಟರ್ ಅವರು ಲೋಕಸಭೆ ಚುನಾವಣೆಯಲ್ಲಿ ಯಾವ ಕೇತ್ರದಿಂದ ಸ್ಪರ್ಧಿಸುತ್ತಾರೆ ಎಂಬುದು ನನಗೆ ಗೊತ್ತಿಲ್ಲ. ಅದು ಅವರ ಪಕ್ಷದ ನಿರ್ಧಾರ. ಯಾವ ಕ್ಷೇತ್ರದಿಂದ ಸ್ಪರ್ಧಿಸಿದರೂ ನಮಗೆ ಅಭ್ಯಂತರವಿಲ್ಲ ಎಂದರು.
ಬಿಜೆಪಿಗೆ ಮರಳುವಂತೆ ಕರೆ ಬರುತ್ತಿದೆ: ಲಕ್ಷ್ಮಣ ಸವದಿ
ಶಾಸಕ ಲಕ್ಷ್ಮಣ ಸವದಿಗೆ ಸಚಿವ ಸ್ಥಾನದ ಆಫರ್ ನೀಡಿರುವುದು ನನಗೆ ಮಾಹಿತಿ ಇಲ್ಲ. ಉಪಮುಖ್ಯಮಂತ್ರಿ ಸ್ಥಾನದ ಬೇಡಿಕೆಯ ಬಗ್ಗೆ ಲೋಕಸಭಾ ಚುನಾವಣೆ ಮುಗಿದ ಮೇಲೆ ನೋಡುತ್ತೇವೆ. ಈಗ ಅದರ ಬಗ್ಗೆ ಚರ್ಚೆ ಮಾಡಲ್ಲ. ಚುನಾವಣೆಯಲ್ಲಿ ಹೆಚ್ಚು ಸೀಟು ಗೆಲ್ಲುವುದೇ ನಮ್ಮ ಗುರಿಯಾಗಿದೆ ಎಂದರು.
ಕೇಂದ್ರ ಸರ್ಕಾರದ ಯೋಜನೆಗಳಿಗೆ ರಾಜ್ಯ ಸರ್ಕಾರ ಸ್ಪಂದಿಸುತ್ತಿಲ್ಲ ಎಂಬ ಬಿಜೆಪಿಯವರ ಆರೋಪಕ್ಕೆ ಪ್ರತಿಕ್ರಿಯೆ ನೀಡಿದ ಅವರು, ಕೇಂದ್ರದ ಯೋಜನೆಗಳಿಗೆ ರಾಜ್ಯ ಸರ್ಕಾರ ಸ್ಪಂದಿಸುತ್ತಿಲ್ಲ ಎಂಬುದು ಶುದ್ಧ ಸುಳ್ಳು. ನಮ್ಮದೇ ಇಲಾಖೆಗೆ ಸಂಬಂಧಿಸಿದಂತೆ ಅನೇಕ ಬಾರಿ ಕೇಂದ್ರ ಸಚಿವ ನಿತೀನ್ ಗಡ್ಕರಿ ಹಾಗೂ ಪ್ರಹ್ಲಾದ ಜೋಶಿ ಅವರೊಂದಿಗೆ ಸಭೆ ನಡೆಸಿದ್ದೇನೆ ಎಂದರು.
ಲೋಕಸಭಾ ಚುನಾವಣೆ 2024: ಜಗದೀಶ ಶೆಟ್ಟರ್ ಬೆಳಗಾವಿಯಿಂದ ಅಖಾಡಕ್ಕೆ?, ಟಿಕೆಟ್ ಆಕಾಂಕ್ಷಿಗಳಲ್ಲಿ ತೀವ್ರ ನಿರಾಸೆ
ಯಾವುದೇ ಒಂದು ಕಾಮಗಾರಿಗೆ ಸಮಸ್ಯೆಯಾದರೆ ಎಲ್ಲಾ ಕಾಮಗಾರಿಗಳಿಗೆ ಸಹಕಾರ ನೀಡುತ್ತಿಲ್ಲ ಎಂಬುವುದು ತಪ್ಪು. ಬೆಳಗಾವಿ ನಗರಕ್ಕೆ ಸಂಬಂಧಿಸಿದ ರಿಂಗ್ ರಸ್ತೆ ನಿರ್ಮಾಣಕ್ಕಾಗಿ ಭೂಸ್ವಾಧೀನ ಪ್ರಕ್ರಿಯೆ ಪೂರ್ಣಗೊಳಿಸಲು ಎಲ್ಲಾ ರೀತಿಯ ಸಹಕಾರ ನೀಡುತ್ತಿದ್ದೇವೆ ಎಂದು ಹೇಳಿದರು.
ಧಾರವಾಡ-ಬೆಳಗಾವಿ ರೈಲು ಮಾರ್ಗ ನಿರ್ಮಾಣ ಆಗುತ್ತಿರುವುದು ಸಂತಸದ ವಿಚಾರ. ಆದರೆ ಬೆಳಗಾವಿ-ಕೊಲ್ಹಾಪುರ-ಸತಾರ- ರೈಲು ಮಾರ್ಗ ನಿರ್ಮಾಣದ ಯೋಜನೆ ಕಳೆದ 30 ವರ್ಷಗಳ ಹಿಂದಿನ ಯೋಜನೆ. ಅಭಿವೃದ್ಧಿ ಯೋಜನೆಗೆ ರಾಜ್ಯ ಸರ್ಕಾರ ಯಾವಾಗಲು ಹಿಂದೇಟು ಹಾಕಲ್ಲವೆಂದು ಸ್ಪಷ್ಟಪಡಿಸಿದರು.